ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಧೀನ ನ್ಯಾಯಾಲಯಗಳಲ್ಲಿ 6,849 ಹುದ್ದೆಗಳು ಖಾಲಿ

By Kiran B Hegde
|
Google Oneindia Kannada News

ಬೆಂಗಳೂರು, ಫೆ. 3: ರಾಜ್ಯದ ಅಧೀನ ನ್ಯಾಯಾಲಯಗಳಲ್ಲಿ ವಿವಿಧ ವೃಂದದ 6,849 ಹುದ್ದೆಗಳು ಖಾಲಿ ಇವೆ. ನ್ಯಾಯಾಂಗ ಸೇವೆ ಅಧಿಕಾರಿಗಳ 654 ಹುದ್ದೆಗಳು ಖಾಲಿ ಇವೆ ಎಂದು ರಾಜ್ಯ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ ವಿಧಾನಸಭೆಗೆ ತಿಳಿಸಿದ್ದಾರೆ.

ವಿಧಾನಸಭೆಯ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಚಿಕ್ಕಮಗಳೂರು ಶಾಸಕ ಸಿ.ಟಿ. ರವಿ ಪರವಾಗಿ ಶಾಸಕ ಲಕ್ಷ್ಮಣ ಸವದಿ ಕೇಳಿದ ಪ್ರಶ್ನೆಗೆ ಸಚಿವರು ಈ ಉತ್ತರ ನೀಡಿದ್ದಾರೆ.

ಕರ್ನಾಟಕ ಸಾರ್ವಜನಿಕ ಉದ್ಯೋಗ (ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ನೇಮಕಾತಿಯಲ್ಲಿ ಮೀಸಲಾತಿ) ಆದೇಶ, 2013 ರ ಪ್ರಕಾರ ಮೀಸಲಾತಿ ಅನುಸರಿಸಿ ಖಾಲಿ ಹುದ್ದೆಗಳನ್ನು ತುಂಬಲು ಕ್ರಮ ಕೈಗೊಳ್ಳಲಾಗುತ್ತಿದೆ.

tbj

ಶೀಘ್ರ ಭರ್ತಿ : 2004ರ ಕರ್ನಾಟಕ ನ್ಯಾಯಾಂಗ ಸೇವೆ (ನೇಮಕಾತಿ) ನಿಯಮಗಳಿಗೆ ತಿದ್ದುಪಡಿ ತರುವ ಪ್ರಕ್ರಿಯೆ ಅಂತಿಮಗೊಂಡಿದೆ. ಶೀಘ್ರ ಖಾಲಿ ಇರುವ ನ್ಯಾಯಾಧೀಶರ ಹುದ್ದೆಗಳನ್ನು ಭರ್ತಿ ಮಾಡಲು ಉಚ್ಚ ನ್ಯಾಯಾಲಯ ಕ್ರಮ ಕೈಗೊಳ್ಳಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಅಧೀನ ನ್ಯಾಯಾಲಯಗಳಲ್ಲಿನ ಬಹುತೇಕ ಹುದ್ದೆಗಳು ಲಿಪಿಕ ವೃಂದದ ಹುದ್ದೆಗಳು. ಕೆಲವು ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಹಾಗೂ ಇನ್ನೂ ಕೆಲವು ಹುದ್ದೆಗಳನ್ನು ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿನ ವಿಧಿ ವಿಧಾನದಂತೆ ಬಡ್ತಿ ನೀಡುವ ಮೂಲಕ ತುಂಬಬಹುದು ಎಂದು ಹೇಳಿದ್ದಾರೆ.

English summary
There are 6,849 posts are vacant in courts of Karnataka. Those will be filles asap. Law minister for state T B Jayachandra has said this in assembly session.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X