ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲಿಂಗ ಅಲ್ಪಸಂಖ್ಯಾತರರಿಗೆ ಶೀಘ್ರದಲ್ಲೇ ಪಡಿತರ ಚೀಟಿ ವಿತರಣೆ

|
Google Oneindia Kannada News

ಬೆಂಗಳೂರು, ಜುಲೈ 28 : 'ಲಿಂಗ ಅಲ್ಪಸಂಖ್ಯಾತರರಿಗೆ ಶೀಘ್ರದಲ್ಲೇ ಪಡಿತರ ಚೀಟಿಯನ್ನು ವಿತರಣೆ ಮಾಡಲಾಗುತ್ತದೆ. ಸರ್ಕಾರ ಈ ಕುರಿತು ಯೋಜನೆಯನ್ನು ಸಿದ್ಧಪಡಿಸಿದೆ. ಕರ್ನಾಟಕದಲ್ಲಿ 3,500ಕ್ಕೂ ಹೆಚ್ಚು ಲಿಂಗ ಅಲ್ಪಸಂಖ್ಯಾತರಿದ್ದಾರೆ.

ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಸಚಿವ ಯು.ಟಿ. ಖಾದರ್‌ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. 'ಸರ್ಕಾರ ಲೈಂಗಿಕ ಅಲ್ಪ ಸಂಖ್ಯಾತರಿಗೆ ಪಡಿತರ ಚೀಟಿ ವಿತರಣೆ ಮಾಡಲು ಯೋಜನೆ ರೂಪಿಸಿದೆ. ಎಲ್ಲಾ ಜಿಲ್ಲಾಧಿಕಾರಿಗಳಿಗೆ ಈ ಕುರಿತು ಶೀಘ್ರವೇ ನಿರ್ದೇಶನ ನೀಡಲಾಗುತ್ತದೆ' ಎಂದು ಸಚಿವರು ಹೇಳಿದರು.[ಲಿಂಗ ಪರಿವರ್ತಿತರ ಸಮಸ್ಯೆ ಕೇಳಲು ಬಂತು ವೆಬ್ ಸೈಟ್]

Transgenders will get ration card soon says UT Khader

'ಪಡಿತರ ಚೀಟಿಗಳನ್ನು ಕುಟುಂಬಗಳಿಗೆ ನೀಡಲಾಗುತ್ತದೆ. ಆದರೆ, ಲಿಂಗ ಅಲ್ಪಸಂಖ್ಯಾತರಿಗೆ ಕುಟುಂಬ ಇರುವುದಿಲ್ಲ. ಆದ್ದರಿಂದ, ಅವರ ವೈಯಕ್ತಿಕ ಹೆಸರಿನಲ್ಲಿ ಕಾರ್ಡ್‌ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುತ್ತದೆ' ಎಂದು ಯು.ಟಿ.ಖಾದರ್ ತಿಳಿಸಿದರು.[ಈ ಲಗ್ನ ಸಾಧ್ಯವಿಲ್ಲ, ಏಕೆಂದ್ರೆ ಅವಳು ಅವಳಲ್ಲ ಅವನು!]

ರಾಜ್ಯದಾದ್ಯಂತ 3,500ಕ್ಕೂ ಹೆಚ್ಚು ಲಿಂಗ ಅಲ್ಪಸಂಖ್ಯಾತರಿದ್ದಾರೆ. ಅವರನ್ನು ಗುರುತಿಸಿ ಪಡಿತರ ಚೀಟಿಗಳನ್ನು ವಿತರಣೆ ಮಾಡಲು ಎಲ್ಲ ಜಿಲ್ಲಾಧಿಕಾರಿಗಳಿಗೆ ಶೀಘ್ರದಲ್ಲೇ ಸೂಚನೆ ರವಾನೆಯಾಗಲಿದೆ.[ಸಿದ್ದರಾಮಯ್ಯ ಸರಕಾರದ 10 ಜನಪ್ರಿಯ ಯೋಜನೆಗಳು]

ಕರ್ನಾಟಕ ಸರ್ಕಾರ ಲೈಂಗಿಕ ಅಲ್ಪಸಂಖ್ಯಾತರಿಗೆ ರೂ 500 ಮಾಸಾಶನ ನೀಡುವ 'ಮೈತ್ರಿ' ಯೋಜನೆಯನ್ನು ಈಗಾಗಲೇ ಜಾರಿಗೆ ತಂದಿದೆ. ಬಡತನ ರೇಖೆಗಿಂತ ಕೆಳಗಿರುವ ಲೈಂಗಿಕ ಅಲ್ಪಸಂಖ್ಯಾತರಿಗಾಗಿ ಈ ಯೋಜನೆ ರೂಪಿಸಿದ್ದು, ಕೆಲವು ಷರತ್ತುಗಳ ಆಧಾರದ ಮೇಲೆ ಮಾಸಾಶನ ನೀಡಲಾಗುತ್ತಿದೆ.[ನಕಲಿ ರೇಶನ್ ಕಾರ್ಡ್ ಹುಡುಕಿಕೊಡಿ, ಬಹುಮಾನ ಗೆಲ್ಲಿ]

English summary
Karnataka Food and civil supplies minister UT Khader said, government will issue ration card to transgenders soon.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X