ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಬಿಎಂಪಿ ವಿಭಜನೆ ವಿಧೇಯಕ ಸೆಲೆಕ್ಟ್ ಕಮಿಟಿಗೆ

|
Google Oneindia Kannada News

ಬೆಂಗಳೂರು, ಏ. 27 : ವಿಪಕ್ಷಗಳ ಬೇಡಿಕೆಯಂತೆ 'ಕರ್ನಾಟಕ ನಗರ ಪಾಲಿಕೆಗಳ (ತಿದ್ದುಪಡಿ) ವಿಧೇಯಕ-2015'ವನ್ನು ಪರಿಶೀಲನೆಗಾಗಿ ಸೆಲೆಕ್ಟ್ ಕಮಿಟಿಗೆ ವಹಿಸಲಾಗಿದ್ದು, ವಿಧಾನಪರಿಷತ್ ಕಲಾಪವನ್ನು ಅನಿರ್ಧಿಷ್ಟ ಅವಧಿಗೆ ಮುಂದೂಡಲಾಗಿದೆ.

ಇಂದು ವಿಧಾನಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು ಕಾನೂನು ಸಚಿವ ಟಿ.ಬಿ.ಜಯಚಂದ್ರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದರು. 'ನಿಮಗೆ ಧೈರ್ಯವಿದ್ದರೆ ಮೇಲ್ಮನೆಯನ್ನು ರದ್ದುಪಡಿಸಿ' ಎಂದು ಸರ್ಕಾರಕ್ಕೆ ಸವಾಲು ಹಾಕಿದರು.

'ವಿಧಾನಪರಿಷತ್ತನ್ನು ವಿಸರ್ಜಿಸುವ ಬಗ್ಗೆ ಚಿಂತನೆ ನಡೆಸಬೇಕಾದೀತು' ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು ಶನಿವಾರ ಹೇಳಿಕೆ ನೀಡಿದ್ದರು. ಇದನ್ನು ಸದನದಲ್ಲಿ ಪ್ರಸ್ತಾಪಿಸಿದ ಈಶ್ವರಪ್ಪ ಅವರು ಈ ಬಗ್ಗೆ ನಿಲುವಳಿ ಸೂಚನೆಯಡಿ ಚರ್ಚೆ ನಡೆಸಲು ಅವಕಾಶ ಕಲ್ಪಿಸಬೇಕೆಂದು ಎಂದು ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರಿಗೆ ಮನವಿ ಮಾಡಿದರು.

'ವಿಧಾನಪರಿಷತ್ ವಿಧಾನಸಭೆಯ ಸೃಷ್ಟಿ ಎಂದು ನೀಡಿರುವ ಹೇಳಿಕೆಯಿಂದ ಮೇಲ್ಮನೆಯ ಅಸ್ತಿತ್ವದ ಬಗ್ಗೆ ಗೊಂದಲವುಂಟಾಗಿದೆ. ಮೇಲ್ಮನೆ ಯಾರ ಸೃಷ್ಟಿಯೂ ಅಲ್ಲ. ಇದು ಸಂವಿಧಾನದ ಸೃಷ್ಟಿಯಾಗಿದೆ ಎಂದು ಹೇಳಿದ ಈಶ್ವರಪ್ಪ ಅವರು, ಇದನ್ನು ರದ್ದುಪಡಿಸಲು ಸಾಧ್ಯವಿಲ್ಲ. ನಿಮಗೆ ಧೈರ್ಯವಿದ್ದರೆ ಮೇಲ್ಮನೆಯನ್ನು ರದ್ದುಪಡಿಸಿ' ಎಂದು ಸರ್ಕಾರಕ್ಕೆ ಸವಾಲು ಹಾಕಿದರು.

assembly session

ಹಿಂದಿನ ಸುದ್ದಿ : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಭಜನೆ ಪ್ರಸ್ತಾಪಕ್ಕೆ ಇಂದು ಅಂತಿಮ ತೆರೆ ಬೀಳುವ ಸಾಧ್ಯತೆ ಇದೆ. ವಿಧಾನಪರಿಷತ್ತಿನಲ್ಲಿ ಇಂದು 'ಕರ್ನಾಟಕ ನಗರ ಪಾಲಿಕೆಗಳ (ತಿದ್ದುಪಡಿ) ವಿಧೇಯಕ-2015'ಕ್ಕೆ ಅಂತಿಮ ಒಪ್ಪಿಗೆ ದೊರೆಯುವ ಸಾಧ್ಯತೆ ಇದೆ.

ಏ.20ರ ಸೋಮವಾರ ನಡೆದ ವಿಶೇಷ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ 'ಕರ್ನಾಟಕ ನಗರ ಪಾಲಿಕೆಗಳ (ತಿದ್ದುಪಡಿ) ವಿಧೇಯಕ-2015'ವನ್ನು ಮಂಡಿಸಿ, ಅಂಗೀಕಾರ ಪಡೆಯಲಾಗಿದೆ. ಆದರೆ, ವಿಧಾನಪರಿಷತ್ತಿನಲ್ಲಿ ಚರ್ಚೆ ನಡೆಯುತ್ತಿದ್ದರಿಂದ ಕಲಾಪವನ್ನು ಗುರುವಾರ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಗಿತ್ತು. ['ಕೆಂಪೇಗೌಡರು ಕಟ್ಟಿದ ನಗರ ಒಡೆಯಬೇಡಿ']

ಇಂದು ಬೆಳಗ್ಗೆ 11 ಗಂಟೆಗೆ ವಿಧಾನಪರಿಷತ್ ಕಲಾಪ ಆರಂಭವಾಗಲಿದೆ. 'ವಿಧಾನಪರಿಷತ್ತನ್ನು ವಿಸರ್ಜಿಸುವ ಬಗ್ಗೆ ಚಿಂತನೆ ನಡೆಸಬೇಕಾದೀತು' ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು ಶನಿವಾರ ಹೇಳಿಕೆ ನೀಡಿದ್ದು, ಈ ಕುರಿತು ಪ್ರತಿಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವ ಸಾಧ್ಯತೆ ಇದೆ.[ಸೋಮವಾರದ ಕಲಾಪದಲ್ಲಿ ಏನೇನಾಯ್ತು?]

12 ಗಂಟೆಗೆ ವಿಧಾನಸಭೆ ಕಲಾಪ ಆರಂಭವಾಗಲಿದ್ದು, ಒಂದು ವೇಳೆ ಪರಿಷತ್ತಿನಲ್ಲಿ ವಿಧೇಯಕಕ್ಕೆ ಒಪ್ಪಿಗೆ ದೊರೆಯದಿದ್ದರೆ ವಿಧಾನಸಭೆಯಲ್ಲಿ ಮತ್ತೊಮ್ಮೆ ಮಂಡಿಸಿ ಒಪ್ಪಿಗೆ ಪಡೆಯಲು ಸರ್ಕಾರ ಸಜ್ಜಾಗಿದೆ. ಬಿಬಿಎಂಪಿ ಚುನಾವಣೆಯನ್ನು ಮೇ 30 ರೊಳಗೆ ನಡೆಸುವುದು ಬೇಡ ಎಂದು ಹೈಕೋರ್ಟ್ ತೀರ್ಪು ನೀಡಿದ್ದು ಸರ್ಕಾರಕ್ಕೆ ಸಮಾಧಾನ ತಂದಿದೆ. [ಬಿಬಿಎಂಪಿ ಚುನಾವಣೆ : ಏಕಸದಸ್ಯ ಪೀಠದ ಆದೇಶ ರದ್ದು]

English summary
One day, special session of the Karnataka Legislative Assembly on 27th April 2015. The assembly will discuss proposed trifurcation of the BBMP. Legislative council will taken up discussion on Karnataka Municipal Corporations (Amendment) Bill 2015.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X