ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿ ಕೊಳ್ಳಿ

|
Google Oneindia Kannada News

Anil Kumar Jha
ಬೆಂಗಳೂರು, ಫೆ.4 : ಲೋಕಸಭೆ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಸಿದ್ಧತೆ ಆರಂಭಿಸಿದೆ. ರಾಜ್ಯದ ಮತದಾರರ ಪರಿಷ್ಕೃತ ಪಟ್ಟಿ ಸಿದ್ಧಗೊಂಡಿದ್ದು, ರಾಜ್ಯದಲ್ಲಿ ಒಟ್ಟು 4,46,43,877 ಮತದಾರರಿದ್ದಾರೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಝಾ ಹೇಳಿದ್ದಾರೆ.

ಸೋಮವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅನಿಲ್ ಕುಮಾರ್ ಝಾ, ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರಿಸಲು ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನದವರೆಗೂ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು. [ಮತದಾರರ ಪಟ್ಟಿಗೆ ಸೇರಿಸುವುದು ಹೀಗೆ]

ಒಟ್ಟು 4,46,43,877 ಮತದಾರರಲ್ಲಿ 2,07,78,644 ಪುರುಷ ಹಾಗೂ 2,18,65,233 ಮಹಿಳೆಯರಿದ್ದಾರೆ. 28 ಲಕ್ಷ ಹೊಸ ಮತದಾರರು ಈ ಬಾರಿ ಸೇರ್ಪಡೆಗೊಂಡಿದ್ದಾರೆ. ಮತದಾರರ ಸೇರ್ಪಡೆ ಪ್ರಕ್ರಿಯೆ ನಿರಂತರ ವಾಗಿ ನಡೆಯಲಿದ್ದು, 2014ರ ಜ.1ಕ್ಕೆ 18 ವರ್ಷ ತುಂಬಿದವರೆಲ್ಲರೂ ಹೆಸರು ನೋಂದಾಯಿಸಿಕೊಳ್ಳಬಹುದು ಎಂದರು.

ಚುನಾವಣಾ ಗುರುತಿನ ಚೀಟಿ ಜೊತೆಗೆ ಮತದಾರರ ಪಟ್ಟಿಯಲ್ಲಿ ಕಡ್ಡಾಯವಾಗಿ ಆ ವ್ಯಕ್ತಿಯ ಹೆಸರು ಇರಬೇಕು. ಆಗ ಮಾತ್ರ ಮತ ಚಲಾಯಿಸಲು ಸಾಧ್ಯ. ಆದ್ದರಿಂದ, ಜನರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿರುವುದನ್ನು ಖಾತ್ರಿಪಡಿಸಿಕೊಳ್ಳಬೇಕು ಎಂದು ಝಾ ಮನವಿ ಮಾಡಿದರು.

ಬೆಂಗಳೂರಿನಲ್ಲಿ ಎಷ್ಟು ಮತದಾರರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 38,006,021 ಪುರುಷ ಹಾಗೂ 34,56,244 ಮಹಿಳೆ ಸೇರಿದಂತೆ 72,62,265 ಮತದಾರರಿದ್ದಾರೆ ಎಂದು ಝಾ ಮಾಹಿತಿ ನೀಡಿದರು. ಬೆಂಗಳೂರಿನಲ್ಲಿ ಕಳೆದ ವರ್ಷಕ್ಕಿಂತ 8,21,120 ಮತದಾರರ ಸಂಖ್ಯೆ ಹೆಚ್ಚಳವಾಗಿದೆ ಎಂದರು.

ನಕಲಿ ಹೆಸರುಗಳಿದ್ದವು : ನಕಲಿ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆ ಎಂದು ಅನಿಲ್ ಕುಮಾರ್ ಝಾ ಹೇಳಿದರು. ಒಟ್ಟು 75,249 ನಕಲು ಹೆಸರುಗಳನ್ನು ತೆಗೆದುಹಾಕಲಾಗಿದೆ. ದೋಷಪೂರಿತವಾದ 26,420 ಹೆಸರುಗಳನ್ನು ಹೊರಗಿಡಲಾಗಿದೆ ಎಂದು ತಿಳಿಸಿದರು.

English summary
Chief Electoral Officer (CEO) Anil Kumar Jha on Monday, Feb 3 said, people across the State can include their names or get any modification done in the voters’ list, during the next two months.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X