ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ವಾಟಾಳ್ ಅಧ್ಯಕ್ಷರು?

|
Google Oneindia Kannada News

ಬೆಂಗಳೂರು, ನ. 19 : ನಿಗಮ ಮಂಡಳಿಗಳ ಅಧ್ಯಕ್ಷ ಉಪಾಧ್ಯಕ್ಷ ಹುದ್ದೆಯ ಆಯ್ಕೆಯ ಕಗ್ಗಂಟು ಮುಂದುವರೆದಿದೆ. ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಆಯ್ಕೆ ಮಾಡುವ ಸಾಧ್ಯತೆ ಇದೆ.

ಕೆಲವು ದಿನಗಳ ಹಿಂದೆ ವಾಟಾಳ್ ನಾಗರಾಜ್ ಅವರನ್ನು ವಿಧಾನಪರಿಷತ್ತಿಗೆ ನಾಮ ನಿರ್ದೇಶನ ಮಾಡುತ್ತಾರೆ ಎಂಬ ಮಾತುಗಳು ಕೇಳಿಬಂದಿತ್ತು. ಆದರೆ, ನಾಮನಿರ್ದೇಶನದ ವೇಳೆ ವಾಟಾಳ್ ಅವರ ಆಯ್ಕೆ ಆಗಿರಲಿಲ್ಲ. ಆದ್ದರಿಂದ ಅವರಿಗೆ ಅಧ್ಯಕ್ಷಗಿರಿ ನೀಡಬಹುದು ಎಂಬ ಮಾತುಗಳು ಹಬ್ಬಿವೆ.

Vatal Nagaraj

ಸಿಎಂ ಸಿದ್ದರಾಮಯ್ಯ ಅವರಿಗೆ ಮೈಸೂರು ಮತ್ತು ಚಾಮರಾಜನಗರ ಭಾಗದ ಕಾಂಗ್ರೆಸ್ ಮುಖಂಡರು ಈ ಕುರಿತು ಒತ್ತಡ ಹಾಕಿದ್ದು, ವಾಟಾಳ್ ಅವರಿಗೆ ಅಧ್ಯಕ್ಷಗಿರಿ ನೀಡಲು ಬೆಂಬಲ ನೀಡಿದ್ದಾರೆ. ಕನ್ನಡ ಚಳವಳಿ ಮತ್ತು ಹೋರಾಟಗಳಲ್ಲಿ ಮುಂಚೂಣಿಯಲ್ಲಿರುವ ವಾಟಾಳ್ ಅವರು ಅಧ್ಯಕ್ಷರಾಗಲಿ ಎಂದು ಒತ್ತಾಯಿಸಿದ್ದಾರೆ. [ಬೆಳಗಾವಿಯಲ್ಲಿ ವಾಟಾಳ್ ನಾಗರಾಜ್ ಬಂಧನ]

ಮುಖ್ಯಮಂತ್ರಿ ಸಿದ್ದರಾಮಯ್ಯ ಮೂಢನಂಬಿಕೆಗಳನ್ನು ಬದಿಗೊತ್ತಿ ಚಾಮರಾಜನಗರಕ್ಕೆ ಭೇಟಿ ನೀಡಿದಾಗ ವಾಟಾಳ್ ನಾಗರಾಜ್ ಅವರನ್ನು ಅಭಿನಂದಿಸಿದ್ದರು. ವಾಟಾಳ್ ಜೊತೆ ಉತ್ತಮ ಸಂಬಂಧ ಹೊಂದಿರುವ ಸಿಎಂ ಅವರನ್ನು ಆಯ್ಕೆ ಮಾಡಲು ಹೈಕಮಾಂಡ್ ನಾಯಕರಿಗೆ ಶಿಫಾರಸ್ಸು ಮಾಡಬಹುದು. [ನಿಗಮ-ಮಂಡಳಿ ನೇಮಕಕ್ಕೆ ಎಐಸಿಸಿ ಮಾರ್ಗಸೂಚಿಗಳು]

ಲೋಕೋಪಯೋಗಿ ಇಲಾಖೆ ಸಚಿವ ಡಾ. ಎಚ್.ಸಿ. ಮಹದೇವಪ್ಪ ಮತ್ತು ಚಾಮರಾಜನಗರ ಸಂಸದ ಧ್ರುವನಾರಾಯಣ ಅವರು ವಾಟಾಳ್ ನಾಗರಾಜ್ ಅವರಿಗೆ ಬೆಂಬಲ ನೀಡಿದ್ದಾರೆ ಎನ್ನುತ್ತವೆ ಪಕ್ಷದ ಮೂಲಗಳು. ಸಿಎಂ ವಾಟಾಳ್ ಅವರ ಹೆಸರನ್ನು ಹೈಕಮಾಂಡ್ ನಾಯಕರಿಗೆ ಕಳಿಸಬಹುದಾಗಿದೆ.

ಎರಡು ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಸಭೆ ಸೇರಿ ನಿಗಮ ಮಂಡಳಿಗಳ ನೇಮಕಾತಿ ಕುರಿತು ಮಾತುಕತೆ ನಡೆಸಿದ್ದಾರೆ. ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಕುರಿತು ಚರ್ಚಿಸಲು ಡಿ.2ರಂದು ಉಭಯ ನಾಯಕರು ದೆಹಲಿಗೆ ತೆರಳುವ ಸಾಧ್ಯತೆ ಇದೆ.

English summary
Karnataka Congress leaders giving final touches to the list of party nominees to boards and corporations. Kannada Chalavali Vatal Paksha president Vatal Nagaraj may head the Kannada Development Authority.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X