ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮತ್ತೆ ರಾಜ್ಯಸಭೆಗೆ ವೆಂಕಯ್ಯ ನಾಯ್ಡು, ಕನ್ನಡಿಗರಿಗೆ ಇಲ್ಲ ಅವಕಾಶ?

|
Google Oneindia Kannada News

ಬೆಂಗಳೂರು, ಮೇ 07 : ಕರ್ನಾಟಕದಿಂದ ಈ ಬಾರಿಯು ರಾಜ್ಯಸಭಾ ಸದಸ್ಯರಾಗಿ ವೆಂಕಯ್ಯ ನಾಯ್ಡು ಅವರು ಆಯ್ಕೆ ಆಗುವುದು ಬಹುತೇಕ ಖಚಿತವಾಗಿದೆ. ಈಗಾಗಲೇ ಮೂರು ಬಾರಿ ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ಅವರು ಆಯ್ಕೆಯಾಗಿದ್ದಾರೆ. ಈ ಬಾರಿಯು ಕನ್ನಡಿಗರಿಗೆ ಬಿಜೆಪಿ ಅವಕಾಶ ನೀಡುವ ಸಾಧ್ಯತೆ ಕಡಿಮೆ.

ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಎಂ.ವೆಂಕಯ್ಯ ನಾಯ್ಡು (ಬಿಜೆಪಿ), ಆಯನೂರು ಮಂಜುನಾಥ್ (ಬಿಜೆಪಿ), ಆಸ್ಕರ್ ಫರ್ನಾಂಡೀಸ್ (ಕಾಂಗ್ರೆಸ್), ವಿಜಯ್ ಮಲ್ಯ (ಪಕ್ಷೇತರ) ಅವರ ಅವಧಿ ಜೂನ್ 30ಕ್ಕೆ ಅಂತ್ಯಗೊಳ್ಳಲಿದೆ. [ಕುಮಾರಸ್ವಾಮಿ ರಾಜ್ಯಸಭೆಗೆ, ಗೌಡರ ಸ್ಪಷ್ಟನೆಗಳು]

venkaiah naidu

ಈ ಸ್ಥಾನಗಳಿಗೆ ಆಯ್ಕೆಯಾಗಲು ಪೈಪೋಟಿ ಆರಂಭವಾಗಿದೆ. ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆಯಾಗಲು 45 ಮತಗಳು ಬೇಕು. ವಿಧಾನಸಭೆಯಲ್ಲಿ 46 ಸದಸ್ಯ ಬಲ ಹೊಂದಿರುವ ಬಿಜೆಪಿ ಒಬ್ಬರು ಸದಸ್ಯರನ್ನು ಆಯ್ಕೆ ಮಾಡಿ ಕಳಿಸುವ ಶಕ್ತಿ ಹೊಂದಿದೆ. ಆದರೆ, ಈ ಸದಸ್ಯರು ಕನ್ನಡಿಗರಾಗಿರುವುದಿಲ್ಲ. [ರಾಜ್ಯಸಭೆ ಸದಸ್ಯರಾಗಲು ಪೈಪೋಟಿ]

ವೆಂಕಯ್ಯ ನಾಯ್ಡು ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ನಗರಾಭಿವೃದ್ಧಿ ಸಚಿವರಾಗಿದ್ದಾರೆ. ದಕ್ಷಿಣ ಭಾರತದ ಬೇರೆ ಯಾವುದೇ ರಾಜ್ಯಗಳಲ್ಲಿ ಬಿಜೆಪಿ ರಾಜ್ಯಸಭೆಗೆ ಸದಸ್ಯರನ್ನು ಆಯ್ಕೆ ಮಾಡುವಷ್ಟು ಸದಸ್ಯ ಬಲ ಹೊಂದಿಲ್ಲ. ಆದ್ದರಿಂದ, ಕರ್ನಾಟಕದಿಂದ ವೆಂಕಯ್ಯ ನಾಯ್ಡು ಅವರು ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. [ಪ್ರತಿಕ್ರಿಯೆ : ವೆಂಕಯ್ಯ ನಾಯ್ಡು ಕರ್ನಾಟಕಕ್ಕೆ ದ್ರೋಹ ಮಾಡಿಲ್ಲವೇ?]

ವೆಂಕಯ್ಯ ನಾಯ್ಡು ಅವರು 1998ರಲ್ಲಿ ಮೊದಲ ಬಾರಿಗೆ ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾದರು. ನಂತರ 2004 ಮತ್ತು 2010ರಲ್ಲಿ ಸತತವಾಗಿ ರಾಜ್ಯದಿಂದಲೇ ಆಯ್ಕೆಯಾಗಿದ್ದಾರೆ. 2016ರಲ್ಲಿಯೂ ಆಯ್ಕೆಯಾಗಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. [ದೇವನಹಳ್ಳಿಯಲ್ಲಿ ಗ್ರಾಮ ದತ್ತು ಪಡೆದ ವೆಂಕಯ್ಯ ನಾಯ್ಡು]

ಒಟ್ಟು ನಾಲ್ಕು ಸದಸ್ಯರನ್ನು ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆ ಮಾಡಿ ಕಳಿಸಬೇಕಾಗಿದೆ. ಕರ್ನಾಟಕ ವಿಧಾನಸಭೆಯಲ್ಲಿ 123 ಶಾಸಕ ಬಲ ಹೊಂದಿರುವ ಕಾಂಗ್ರೆಸ್ ಇಬ್ಬರು ಸದಸ್ಯರನ್ನು ಆಯ್ಕೆ ಮಾಡುವ ಶಕ್ತಿ ಹೊಂದಿದೆ. ಒಂದು ವೇಳೆ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡರೆ 3ನೇ ಸದಸ್ಯರನ್ನು ಆಯ್ಕೆ ಮಾಡಿ ಕಳಿಸಬಹುದಾಗಿದೆ.

English summary
Urban Development minister M.Venkaiah Naidu all set to re-elect for Rajya Sabha from Karnataka assembly. In 1998, 2004 and 2010 Venkaiah Naidu elected for Rajya Sabha from Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X