ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿಯಲ್ಲಿ ಯಡಿಯೂರಪ್ಪ ಏನು ಬದಲಾವಣೆ ತರಬಲ್ಲರು?

By ವಿಕಾಸ್ ನಂಜಪ್ಪ
|
Google Oneindia Kannada News

ಬೆಂಗಳೂರು, ಏಪ್ರಿಲ್ 09 : ಮಾಜಿ ಮುಖ್ಯಮಂತ್ರಿ ಮತ್ತು ಶಿವಮೊಗ್ಗ ಸಂಸದ ಯಡಿಯೂರಪ್ಪ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವುದು ಅವರು ಮುಂದಿರುವ ಪ್ರಮುಖವಾದ ಗುರಿ.

ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯ ಬಿಜೆಪಿಯಲ್ಲಿ ಇಂದಿಗೂ ಪ್ರಭಾವಿ ನಾಯಕರು ಎಂಬ ಮಾತನ್ನು ಎಲ್ಲರೂ ಒಪ್ಪಲೇಬೇಕು. ಪ್ರಬಲ ಲಿಂಗಾಯಿತ ಸಮುದಾಯಕ್ಕೆ ಸೇರಿದ ಯಡಿಯೂರಪ್ಪ ಅವರು ರಾಜ್ಯಾಧ್ಯಕ್ಷರಾಗಿರುವುದರಿಂದ ಪಕ್ಷಕ್ಕೆ ಮತ್ತಷ್ಟು ಬಲ ಸಿಕ್ಕಿದೆ. [ಯಡಿಯೂರಪ್ಪ ರಾಜ್ಯಾಧ್ಯಕ್ಷರಾಗಿ ಆಯ್ಕೆ]

yeddyurappa

ದೆಹಲಿಯಿಂದ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಗೆ ಶುಕ್ರವಾರ ಸಂಜೆ ಆಗಮಿಸಿದ ಯಡಿಯೂರಪ್ಪ ಅವರಿಗೆ ಭವ್ಯ ಸ್ವಾಗತ ಸಿಕ್ಕಿತು. ಪಕ್ಷದ ಹಲವಾರು ನಾಯಕರು ಯಡಿಯೂರಪ್ಪ ಅವರನ್ನು ಬರಮಾಡಿಕೊಂಡರು, ನೂರಾರು ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಾ, ಅವರನ್ನು ಸ್ವಾಗತಿಸಿದರು. [FIR ರದ್ದಾದರೂ ಕಾನೂನು ಹೋರಾಟ ಮುಗಿದಿಲ್ಲ]

ಯಾರ ಹೆಸರು ಪರಿಗಣಿಸಿರಲಿಲ್ಲ : ಯಡಿಯೂರಪ್ಪ ಅವರನ್ನು ಹೊರತುಪಡಿಸಿದರೆ ಬೇರೆ ಯಾವ ಹೆಸರನ್ನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪರಿಗಣಿಸಿರಲಿಲ್ಲ ಎಂದು ದೆಹಲಿಯ ಬಿಜೆಪಿ ನಾಯಕರು ಒನ್ ಇಂಡಿಯಾಕ್ಕೆ ತಿಳಿಸಿದ್ದಾರೆ. ಬೇರೆ-ಬೇರೆ ನಾಯಕರ ಹೆಸರುಗಳು ಮಾಧ್ಯಮದಲ್ಲಿ ಮಾತ್ರ ಹರಿದಾಡುತ್ತಿದ್ದವು. ನಳೀನ್ ಕುಮಾರ್ ಕಟೀಲ್ ಮತ್ತು ಆರ್.ಅಶೋಕ್ ಹೆಸರು ಪಟ್ಟಿಯಲ್ಲಿ ಇರಲಿಲ್ಲ ಎಂದು ಬಿಜೆಪಿಯ ಮೂಲಗಳು ಸ್ಪಷ್ಟಪಡಿಸಿವೆ. [16ನೇ FIR ರದ್ದುಗೊಳಿಸಲು ಯಡಿಯೂರಪ್ಪ ಮನವಿ]

ಕಾಂಗ್ರೆಸ್ ಮೇಲೆ ಸವಾರಿ : 'ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಲ್ಲಿ ನನಗೆ ಯಾವುದೇ ಅನುಮಾನವಿಲ್ಲ' ಎಂದು ಯಡಿಯೂರಪ್ಪ ಅವರು ಬೆಂಗಳೂರಿನಲ್ಲಿ ಶುಕ್ರವಾರ ಹೇಳಿದ್ದಾರೆ. ಹೌದು, ಯಡಿಯೂರಪ್ಪ ಅವರ ಮುಂದಿನ ಗುರಿ ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವುದು ಎಂಬುದಂತೂ ಸ್ಪಷ್ಟವಾಗಿದೆ.

ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡುವುದು ಯಡಿಯೂರಪ್ಪ ಅವರ ಮುಂದಿರುವ ಸವಾಲು. ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ಜನರಿಗೆ ತಿಳಿಸುತ್ತಾ, ವಿಧಾನಸಭೆ ಚುನಾವಣೆ ಕಾರ್ಯವನ್ನು ಅವರು ಆರಂಭಿಸಬೇಕಿದೆ.

ಕಾನೂನು ಹೋರಾಟ : ತಮ್ಮ ವಿರುದ್ಧದ ಪ್ರಕರಣಗಳಿಂದ ಹೊರಬರುವ ಸವಾಲು ಯಡಿಯೂರಪ್ಪ ಅವರ ಮುಂದಿದೆ. ಈಗಾಗಲೇ ಲೋಕಾಯುಕ್ತ ಪೊಲೀಸರು ಅವರ ವಿರುದ್ಧ ಹಾಕಿದ್ದ 15 ಪ್ರಕರಣಗಳು ರದ್ದಾಗಿವೆ. 20 ಕೋಟಿ ದೇಣಿಗೆ ಪಡೆದ ಪ್ರಕರಣ ಇನ್ನೂ ತನಿಖಾ ಹಂತದಲ್ಲಿದೆ. ಅದರಿಂದ ಯಡಿಯೂರಪ್ಪ ಅವರು ಮುಕ್ತಿ ಪಡೆಯಬೇಕಿದೆ.

English summary
Former Chief Minister of Karnataka, B.S. Yeddyurappa has a one point agenda to rid Karnataka of the Congress rule and get the BJP back to power. Yeddyurappa, the strongman of the BJP who is also favored by the powerful Lingayat community in Karnataka was appointed the state's BJP president.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X