ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಸಚಿವ ಸಂಪುಟದಿಂದ ಕೈ ಬಿಟ್ಟರೂ ಸಂತೋಷ'

|
Google Oneindia Kannada News

ಮಂಡ್ಯ, ಮೇ 11 : ಸಚಿವ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ನಡೆಯುತ್ತಿದೆ. 'ಸಂಪುಟ ಪುನಾರಚನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮನ್ನು ಸಂಪುಟದಿಂದ ಕೈಬಿಟ್ಟರೂ ಸಂತೋಷ' ಎಂದು ವಸತಿ ಸಚಿವ ಅಂಬರೀಶ್ ಹೇಳಿದ್ದಾರೆ.

ಮಂಡ್ಯದಲ್ಲಿ ಮಂಗಳವಾರ ಮಾತನಾಡಿದ ಅಂಬರೀಶ್ ಅವರು, 'ನನಗೆ ಹೆಚ್ಚಿನ ಅಧಿಕಾರದ ಆಸೆ ಇಲ್ಲ. ಅಧಿಕಾರ ಇಂದು ಬರುತ್ತದೆ, ನಾಳೆ ಹೋಗುತ್ತದೆ. ಕಾಂಗ್ರೆಸ್ ಪಕ್ಷ ತಮಗೆ ಎಲ್ಲಾ ರೀತಿಯ ಅಧಿಕಾರವನ್ನು ನೀಡಿದೆ ಅಷ್ಟು ಸಾಕು' ಎಂದರು. [ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ಕೊಟ್ಟ ಸಿದ್ದರಾಮಯ್ಯ]

ambareesh

'ಸಚಿವ ಸಂಪುಟ ಪುನಾರಚನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮನ್ನು ಮುಂದುವರೆಸಿದರೂ ಸಂತೋಷ ಕೈ ಬಿಟ್ಟರೂ ಸಂತೋಷ. ಅಧಿಕಾರ ಶಾಶ್ವತವಲ್ಲ, ನಾವು ಮಾಡಿದ ಒಳ್ಳೆಯ ಕೆಲಸಗಳು ನಮ್ಮ ಕೈ ಹಿಡಿಯುತ್ತವೆ' ಎಂದು ಹೇಳಿದರು. [ಸಂಪುಟ ಪುನಾಚರನೆ, 10ಕ್ಕೂ ಹೆಚ್ಚು ಸಚಿವರ ಬದಲಾವಣೆ]

'ಕಾಂಗ್ರೆಸ್ ಪಕ್ಷ ತಮಗೆ ಎಲ್ಲಾ ರೀತಿಯ ಅಧಿಕಾರವನ್ನು ನೀಡಿದೆ. ದೆಹಲಿಯಲ್ಲೂ ಕೆಂಪು ದೀಪದ ಕಾರಿನಲ್ಲಿ ಓಡಾಡಿದ್ದೇನೆ. ಈಗಲೂ ಕೆಂಪು ದೀಪದ ಕಾರಿನಲ್ಲಿ ಓಡಾಡುತ್ತಿದ್ದೇನೆ. ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಬದ್ಧ' ಎಂದರು. ['ಯುಗಾದಿ ಬಳಿಕ ಹೊಸ ಖುರ್ಚಿ, ಹೊಸ ಮಂತ್ರಿ ನೋಡೋಣ']

ಮಾಧ್ಯಮದಲ್ಲೇ ಹೆಚ್ಚು ಚರ್ಚೆ : 'ಸಚಿವ ಸಂಪುಟ ಪುನಾರಚನೆ ಬಗ್ಗೆ ಕಾಂಗ್ರೆಸ್ ಪಕ್ಷಕ್ಕಿಂತ ಮಾಧ್ಯಮದಲ್ಲೇ ಹೆಚ್ಚು ಚರ್ಚೆ ನಡೆಯುತ್ತಿದೆ. ಸಂಪುಟದಲ್ಲಿ ಅಲ್ಪಸ್ವಲ್ಪ ಬದಲಾವಣೆ ಆಗಬಹುದು' ಎಂದು ತೋಟಗಾರಿಕಾ ಸಚಿವ ಶಾಮನೂರು ಶಿವಶಂಕರಪ್ಪ ಅವರು ದಾವಣಗೆರೆಯಲ್ಲಿ ಮಂಗಳವಾರ ಹೇಳಿದ್ದಾರೆ.

ಅಂದಹಾಗೆ ಮೇ ತಿಂಗಳ ಅಂತ್ಯಕ್ಕೆ ಸಂಪುಟ ಪುನಾರಚನೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಇದರಿಂದಾಗಿ ಯಾರು ಸಂಪುಟದಿಂದ ಹೊರಬರುತ್ತಾರೆ ಎಂಬ ಲೆಕ್ಕಾಚಾರ ಆರಂಭವಾಗಿದೆ. 10ಕ್ಕೂ ಹೆಚ್ಚು ಸಚಿವರ ಬದಲಾವಣೆ ಆಗಲಿದೆ ಎಂಬ ಸುದ್ದಿ ಹಬ್ಬಿದೆ.

English summary
Housing Minister M.H. Ambareesh said, The decision to retain or drop him from the cabinet is left to the discretion of Chief Minister Siddaramaiah. Even Chief Minister drops me from the cabinet, i will be happy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X