ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಡಿಕೇರಿ ನಗರಸಭಾ ಸದಸ್ಯೆ ತಜಸುಂ ಸದಸ್ಯತ್ವ ವಜಾ

ಮಡಿಕೇರಿ ನಗರಸಭೆ ಸದಸ್ಯೆ ತಜಸ್ಸುಂ ನಕಲಿ ಜಾತಿ ಪ್ರಮಾಣ ಪತ್ರ ನೀಡಿದ್ದಾರೆ ಎಂಬ ಆರೋಪದಲ್ಲಿ ಅವರ ಸದಸ್ಯತ್ವವನ್ನು ರದ್ದು ಮಾಡಿ, ಆದೇಶ ಹೊರಡಿಸಲಾಗಿದೆ. ಚುನಾವಣೆಯಲ್ಲಿ ಅವರು ಕಲಾವತಿ ಎಂಬುವರ ವಿರುದ್ಧ ಲಾಟರಿ ಮೂಲಕ ಆಯ್ಕೆಯಾಗಿದ್ದರು

By ಮಡಿಕೇರಿ ಪ್ರತಿನಿಧಿ
|
Google Oneindia Kannada News

ಮಡಿಕೇರಿ, ಮಾರ್ಚ್ 26: ನಕಲಿ ಜಾತಿ ದೃಢೀಕರಣ ಪತ್ರ ಸಲ್ಲಿಸಿ, ಚುನಾವಣೆಯಲ್ಲಿ ಲಾಟರಿ ಮೂಲಕ ಗೆದ್ದ ನಗರಸಭಾ ಸದಸ್ಯೆ ತಜಸುಂ ಅವರನ್ನು ಸದಸ್ಯತ್ವದಿಂದ ಜಿಲ್ಲಾಡಳಿತದ ನ್ಯಾಯಾಲಯ ವಜಾಗೊಳಿಸಿ ಆದೇಶ ಹೊರಡಿಸಿದೆ.

ತಜಸುಂ ಅವರ ಜಾತಿ ದೃಢೀಕರಣ ಪತ್ರವನ್ನು ರದ್ದುಗೊಳಿಸಿದ್ದರ ವಿರುದ್ಧವೂ ಅವರು ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರಿಂದ ನ್ಯಾಯಾಲಯ ಮತ್ತೆ ಈ ಬಗ್ಗೆ ಜಿಲ್ಲಾಧಿಕಾರಿಗಳು ಕ್ರಮ ಜರುಗಿಸಬೇಕೆಂದು ನಿರ್ದೇಶನ ನೀಡಿದ ಮೇರೆಗೆ ಮತ್ತೆ ಉಪ ವಿಭಾಗಾಧಿಕಾರಿಗಳು ವಿಚಾರಣೆ ನಡೆಸಿ, ಅವರ ಜಾತಿ ಪ್ರಮಾಣ ಪತ್ರ ಅಸಿಂಧು ಎಂದು ಘೋಷಿಸಿ ತೀರ್ಪು ನೀಡಿದರು.[ಕೊಡಗು: ಜಿ.ಪಂ.ಗೆ 18 ಕೋಟಿಯ ಹೊಸ ಸೂರು ನಿರ್ಮಾಣ!]

Tajasum CMC membership cancelled

ಜಾತಿ ಪ್ರಮಾಣ ಪತ್ರ ರದ್ದುಗೊಂಡಿರುವುದರಿಂದ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿಗಳೇ ತಜಸುಂ ಅವರನ್ನು ಸದಸ್ಯತ್ವದಿಂದ ವಜಾಗೊಳಿಸಿ, ಆ ಸ್ಥಾನಕ್ಕೆ ತಮ್ಮನ್ನು ಸದಸ್ಯರನ್ನಾಗಿ ನೇಮಕ ಮಾಡಬೇಕು ಎಂದು ಕಲಾವತಿ ಅವರು ಜಿಲ್ಲಾಧಿಕಾರಿ ಮುಂದೆ ತಮ್ಮ ಹಕ್ಕನ್ನು ಮಂಡಿಸಿದ್ದರು.

ಕಲಾವತಿ ಅವರು ಜಿಲ್ಲಾಧಿಕಾರಿಗಳ ಮುಂದೆ ತಮ್ಮ ಹಕ್ಕು ಮಂಡಿಸಿದ್ದನ್ನು ಪರಿಶೀಲಿಸಿದ ನಂತರ, ತಜಸುಂ ಅವರ ನಗರಸಭಾ ಸದಸ್ಯತ್ವದಿಂದ ವಜಾಗೊಳಿಸಿ ಆದೇಶ ಹೊರಡಿಸಲಾಯಿತು.

English summary
Tajasum CMC membership cancelled in Madikeri. She elected by lottery in election. Due to fake caste certificate allegation, her membership cancelled by court.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X