ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜ್ಯ ಮಟ್ಟದ ಕೆಸರು ಗದ್ದೆ ಕ್ರೀಡಾಕೂಟದಲ್ಲೇನಿದೆ?

By ಮಡಿಕೇರಿ ಪ್ರತಿನಿಧಿ
|
Google Oneindia Kannada News

ಮಡಿಕೇರಿ, ಜುಲೈ 25: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಯೂತ್ ಹಾಸ್ಟೇಲ್ ಅಸೋಸಿಯೇಶನ್ ಆಫ್ ಇಂಡಿಯಾ, ಕೊಡಗು ಜಿಲ್ಲಾ ಯುವ ಒಕ್ಕೂಟ ಹಾಗೂ ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟಗಳ ಸಂಯುಕ್ತಾಶ್ರಯದಲ್ಲಿ 26ನೇ ವರ್ಷದ ರಾಜ್ಯ ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ ಮತ್ತು ವಿವಿಧ ಆಟೋಟ ಸ್ಪರ್ಧೆಗಳು ಆಗಸ್ಟ್ 12 ರಂದು ಕಗ್ಗೋಡ್ಲು ಗ್ರಾಮದ ದಿ. ಸಿ.ಡಿ ಬೋಪಯ್ಯನವರ ಗದ್ದೆಯಲ್ಲಿ ನಡೆಯಲಿದೆ.

ಈ ಕ್ರೀಡಾಕೂಟದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿದ್ದು ವಿವರಗಳು ಇಲ್ಲಿವೆ. ವಾಲಿಬಾಲ್ ಪುರುಷರ ವಿಭಾಗ (4 ಜನರ ತಂಡ), ಥ್ರೋಬಾಲ್ ಮಹಿಳೆಯರ ವಿಭಾಗ (5 ಜನರ ತಂಡ), ಹಗ್ಗ ಜಗ್ಗಾಟ ಪುರುಷರ ವಿಭಾಗ (9 ಜನರ ತಂಡ), ಹಗ್ಗ ಜಗ್ಗಾಟ ಮಹಿಳೆಯರ ವಿಭಾಗ (9 ಜನರ ತಂಡ), ಹಗ್ಗ ಜಗ್ಗಾಟ ಪ್ರೌಢಶಾಲಾ ಬಾಲಕರಿಗೆ (9 ಜನರ ತಂಡ), ಹಗ್ಗ ಜಗ್ಗಾಟ ಪ್ರೌಢಶಾಲಾ ಬಾಲಕಿಯರಿಗೆ (9 ಜನರ ತಂಡ).

What are the games take place in Madikeri sludge mud sports event?

ಕಿರಿಯ ಪ್ರಾಥಮಿಕ ಶಾಲಾ ಬಾಲಕರಿಗೆ 50ಮೀ ಓಟ, ಕಿರಿಯ ಪ್ರಾಥಮಿಕ ಶಾಲಾ ಬಾಲಕಿಯರಿಗೆ 50ಮೀ ಓಟ, ಹಿರಿಯ ಪ್ರಾಥಮಿಕ ಶಾಲಾ ಬಾಲಕರಿಗೆ 100ಮೀ ಓಟ, ಹಿರಿಯ ಪ್ರಾಥಮಿಕ ಶಾಲಾ ಬಾಲಕಿಯರಿಗೆ 100ಮೀ ಓಟ, ಪ್ರೌಢ ಶಾಲಾ ಬಾಲಕರಿಗೆ 200ಮೀ ಓಟ, ಪ್ರೌಢ ಶಾಲಾ ಬಾಲಕಿಯರಿಗೆ 200ಮೀ ಓಟ, ಪದವಿ ಪೂರ್ವ ಕಾಲೇಜು ಬಾಲಕರಿಗೆ 300 ಮೀ.ಓಟ, ಪದವಿ ಪೂರ್ವ ಕಾಲೇಜು ಬಾಲಕಿಯರಿಗೆ 300 ಮೀ.ಓಟ, ಪ್ರಾಥಮಿಕ, ಪೌಢ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ರಿಲೇ ಓಟ, ಸಾರ್ವಜನಿಕ ಪುರುಷರ ಮುಕ್ತ ಓಟ, ಸಾರ್ವಜನಿಕ ಮಹಿಳೆಯರ ಮುಕ್ತ ಓಟ, ಕಗ್ಗೋಡ್ಲು ಗ್ರಾಮಸ್ಥರಿಗೆ ಸಾಂಪ್ರದಾಯಿಕ ನಾಟಿ ಓಟ ನಡೆಯಲಿದೆ. ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಣೆ ನಡೆಯಲಿದೆ.

ಮಡಿಕೇರಿ ಕೆಸರುಗದ್ದೆಯಲ್ಲಿ ಓಡಿ, ಆಡುವ ಮಜವೇ ಬೇರೆ!ಮಡಿಕೇರಿ ಕೆಸರುಗದ್ದೆಯಲ್ಲಿ ಓಡಿ, ಆಡುವ ಮಜವೇ ಬೇರೆ!

ಪ್ರಥಮ ಹಾಗೂ ದ್ವೀತಿಯ ಸ್ಥಾನ ಗಳಿಸುವ ಕ್ರೀಡಾ ತಂಡಗಳಿಗೆ ಆಕರ್ಷಕ ಪಾರಿತೋಷಕ ಮತ್ತು ನಗದು ಬಹುಮಾನವನ್ನು ನೀಡಲಾಗುವುದು. ಪ್ರೌಢಶಾಲಾ ವಿಭಾಗದ ಹಗ್ಗ ಜಗ್ಗಾಟದಲ್ಲಿ ಭಾಗವಹಿಸುವವರು ತಮ್ಮ ವಿದ್ಯಾ ಸಂಸ್ಥೆಯ ಮುಖ್ಯಸ್ಥರಿಂದ ದೃಢೀಕರಣ ಪತ್ರವನ್ನು ಕಡ್ಡಾಯವಾಗಿ ತರಬೇಕೆಂದು ನವೀನ್ ದೇರಳ ತಿಳಿಸಿದ್ದಾರೆ.

ಓಟದ ಸ್ಪರ್ಧೆಯಲ್ಲಿ ಪ್ರಥಮ, ದ್ವೀತಿಯ ಹಾಗೂ ತೃತೀಯ ಪಾರಿತೋಷಕಗಳನ್ನು ಮತ್ತು ಪ್ರಶಂಸನಾ ಪತ್ರವನ್ನು ನೀಡಲಾಗುವುದು. ಕ್ರೀಡಾಕೂಟ ಮತ್ತು ವಿವಿಧ ಆಟೋಟ ಸ್ಪರ್ಧೆಗಳು ಬೆಳಗ್ಗೆ 9 ಗಂಟೆಗೆ ಉದ್ಘಾಟನಾ ಸಮಾರಂಭದ ನಂತರ ಆರಂಭಗೊಳ್ಳಲಿದೆ. ಹೆಚ್ಚಿನ ವಿವರಗಳಿಗೆ 9449952008, 9740404520, 9901316315, 9480674546, 9481213920 ನ್ನು ಸಂಪರ್ಕಿಸಬಹುದಾಗಿದೆ.

English summary
To encourage and to protect rural and folk games Madikeri people have been organising sludge mud sports since 4 years. Here are the details about the varieties of games, took place in the sports event. The event will be taken place on August 12th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X