ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶುಕ್ರವಾರ ಶಾಸಕರ ತುರ್ತು ಸಭೆ ಕರೆದ ಮಾದೇಗೌಡ

|
Google Oneindia Kannada News

ಮಂಡ್ಯ, ಸೆಪ್ಟೆಂಬರ್ 15: ಕಾವೇರಿ ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಚರ್ಚಿಸಲು ಜಿಲ್ಲೆಯ ಎಲ್ಲ ಶಾಸಕರು ಹಾಗೂ ಸಂಸದರ ತುರ್ತು ಸಭೆಯನ್ನು ಶುಕ್ರವಾರ (ಸೆ. 16) ಬೆಳಗ್ಗೆ 11 ಗಂಟೆಗೆ ನಗರದ ಸರ್ ಎಂ.ವಿ. ಪ್ರತಿಮೆ ಬಳಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಜಿ. ಮಾದೇಗೌಡ ಕರೆದಿದ್ದಾರೆ.

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರ, ನ್ಯಾಯಾಧೀಕರಣ ಹಾಗೂ ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಲೇ ಬಂದಿದ್ದು, ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಅಗತ್ಯ ಇದ್ದು, ಸಭೆಗೆ ಸಂಸದರು ಹಾಗೂ ಶಾಸಕರು ಬರಲೇ ಬೇಕೆಂದು ತಿಳಿಸಿದ್ದಾರೆ.[ತಮಿಳುನಾಡಿಗೆ ನೀರು ಬಿಡುವುದೊಂದೇ ದಾರಿ: ರಮೇಶ್ ಕುಮಾರ್]

MLA's meeting called by Madegowda on Friday

ಜಿಲ್ಲೆಯ ಶಾಸಕರು ಹಾಗೂ ಸಂಸದರು ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕಾವೇರಿ ವಿಚಾರದಲ್ಲಿ ಚರ್ಚೆ ನಡೆಸಿ, ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರೂ ಅವರು ಸರಿಯಾದ ರೀತಿಯಲ್ಲಿ ನಮ್ಮ ಜನಪ್ರತಿನಿಧಿಗಳಿಗೆ ಸ್ಪಂದನೆ ತೋರಲಿಲ್ಲ. ಈ ಹಿನ್ನೆಲೆಯಲ್ಲಿ ಮುಂದಿನ ಹೋರಾಟದ ರೂಪುರೇಷೆಗಳನ್ನು ಚರ್ಚಿಸಲು ಸಭೆ ಕರೆದಿರುವುದಾಗಿ ತಿಳಿಸಿದ್ದಾರೆ.

English summary
MLA's meeting to discuss next game plan about cauvery called on Friday in Mandya Sir M.V statue, by farrmers leader G.Madegowda.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X