ಮಂಗಳೂರಿನಲ್ಲಿ ರನ್‌ವೇ ಲೈಟ್ ಗೆ ಡಿಕ್ಕಿ ಹೊಡೆದ ಏರ್ ಇಂಡಿಯಾ

Posted By:
Subscribe to Oneindia Kannada

ಮಂಗಳೂರು, ಜುಲೈ 17: ದುಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಏರ್‌ಇಂಡಿಯಾ ವಿಮಾನ ರನ್‌ವೇಯಲ್ಲಿ ಅಳವಡಿಸಿದ್ದ ರನ್ ವೇ ಲೈಟ್ ಗೆ ಡಿಕ್ಕಿ ಹೊಡೆದ ಘಟನೆ ಭಾನುವಾರ ಸಂಭವಿಸಿದ್ದು ತಡವಾಗಿ ಬೆಳಕಿಗೆ ಬಂದಿದೆ. ಘಟನೆಯಲ್ಲಿ ಏರ್ ಇಂಡಿಯಾ ವಿಮಾನದಲ್ಲಿದ್ದ 186 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

814 ಏರ್ ಇಂಡಿಯಾ ವಿಮಾನವು ಭಾನುವಾರ ಮುಂಜಾನೆ ದುಬೈನಿಂದ ಮಂಗಳೂರು ಏರ್‌ಪೋರ್ಟ್‌ಗೆ ಆಗಮಿಸಿತ್ತು. 186 ಮಂದಿ ಪ್ರಯಾಣಿಕರನ್ನು ಹೊತ್ತ ವಿಮಾನವು ರನ್‌ವೇನಲ್ಲಿ ಇಳಿಯುತ್ತಿದ್ದಂತೆ ಅಲ್ಲಿ ಅಳವಡಿಸಲಾಗಿದ್ದ ರನ್ ವೇ ಲೈಟ್ ಗೆ ಹೊಡೆದಿದೆ. ಆದರೆ ಇದರಿಂದ ವಿಮಾನಕ್ಕೆ ಯಾವುದೇ ಹಾನಿಯಾಗಿಲ್ಲ.

Air India aircraft hits guiding runway lights at Mangaluru airport

ಮೇಲ್ನೋಟಕ್ಕೆ ವಿಮಾನ ಇಳಿಯುವಾಗ ಘಟನೆ ನಡೆದಿರುವುದು ದೃಢಪಟ್ಟಿಲ್ಲ ಎಂದು ಸುರಕ್ಷತಾ ವಿಭಾಗದ ಪ್ರಾಥಮಿಕ ತನಿಖೆ ನಡೆಸಿದ್ದ,ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಘಟನೆಯ ಕುರಿತು ವಿಮಾನಯಾನ ನಿರ್ದೇಶನಾಲಯವು ಆಂತರಿಕ ತನಿಖೆಗೆ ಆದೇಶಿಸಿದೆ ಎಂದು ತಿಳಿದು ಬಂದಿದೆ.

Hosur Airport To Open Soon For Bangalore | Oneindia Kannada
English summary
Air India Express on Sunday said all 186 passengers on-board its Dubai-Mangaluru flight was safe after the aircraft they were traveling in hit runway guiding lights on landing at Mangaluru airport.
Please Wait while comments are loading...