ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರಾವಳಿಯಲ್ಲಿ 61 ದಿನ ಮೀನುಗಾರಿಕೆ ರದ್ದುಗೊಳಿಸಿ ಸರ್ಕಾರ ಆದೇಶ

ಕರ್ನಾಟಕ ಕರಾವಳಿ ಮೀನುಗಾರಿಕೆ ಕಾಯ್ದೆ- 1986 ಅನ್ವಯ ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ ಒಟ್ಟು 61 ದಿನಗಳ ಕಾಲ ಕರ್ನಾಟಕ ಸರ್ಕಾರವು ನಿಷೇಧಿಸುವಂತೆ ಆದೇಶಿಸಿದೆ.

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಮೇ 24: ಕರ್ನಾಟಕ ಕರಾವಳಿ ಮೀನುಗಾರಿಕೆ ಕಾಯ್ದೆ- 1986 ಅನ್ವಯ ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ ಒಟ್ಟು 61 ದಿನಗಳ ಕಾಲ ಕರ್ನಾಟಕ ಸರ್ಕಾರವು ನಿಷೇಧಿಸುವಂತೆ ಆದೇಶಿಸಿದೆ.

ಯಾವುದೇ ಬಲೆಗಳನ್ನು- ಸಾಧನಗಳನ್ನು ಉಪಯೋಗಿಸಿ, ಇಲ್ಲವೇ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಮರ್ಥಕಿಂತ ಮೇಲ್ಪಟ್ಟ ಇನ್ ಬೋರ್ಡ್ ಅಥವಾ ಔಟ್ ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆಗೆ ಈ ನಿಷೇಧ ಅನ್ವಯವಾಗಲಿದೆ.[ನೀರಿಗೆ ಬಿದ್ದವರ ಬದುಕಿಸೋದು ಹೇಗೆ? ಮಂಗಳೂರಿನಲ್ಲಿ ತರಬೇತಿ]

As a precaution for rainy season state government has put a ban on costal fishery

ಮಳೆಯ ಮುನ್ನೆಚ್ಚರಿಕೆಯಾಗಿ ತೆಗೆದುಕೊಂಡ ಮೀನುಗಾರಿಕೆ ನಿಷೇಧದ ಸರಕಾರದ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮಿನುಗಾರಿಕ ಕಾಯ್ದೆ 1986 ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೆ ಒಂದು ವರ್ಷದ ಅವಧಿಗೆ ಡೀಸೆಲ್ ಮೇಲಿನ ಸಹಾಯಧನ ಪಡೆಯಲು ಅನರ್ಹರಾಗುತ್ತಾರೆ.[ಮಂಗಳೂರು ಆಕ್ಸಿಸ್ ಬ್ಯಾಂಕ್‌ ಹಣ ದರೋಡೆ: ಮತ್ತಿಬ್ಬರ ಬಂಧನ]

ಕರಾವಳಿ ಪ್ರದೇಶದ ಎಲ್ಲ ಮೀನುಗಾರರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಈ ಆದೇಶ ಹೊರಡಿಸಿರುವುದರಿಂದ ಎಲ್ಲ ಮೀನುಗಾರರು ಈ ಆದೇಶವನ್ನು ಪಾಲಿಸಿ ಸರ್ಕಾರದೊಂದಿಗೆ ಸಹಕರಿಸಲು ಮೀನುಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

English summary
As a precaution for rainy season state government has put a ban on costal fishery in Dakshin Kannada district. Monsoon ban on fishing using mechanized boats and traditional boats with inboard/ outboard engines of more than 10HP capacity will be in force along Dakshina Kannada district coast for 61 days from June 1 to July 31.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X