ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿತ್ರಗಳು : ಎತ್ತಿನಹೊಳೆ ಯೋಜನೆ ವಿರೋಧಿಸಿ ಬೈಕ್ ಜಾಥಾ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ನವೆಂಬರ್ 23 : ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆ ವಿರುದ್ಧ ಕರಾವಳಿ ಭಾಗದಲ್ಲಿ ಪ್ರತಿಭಟನೆ ಮುಂದುವರೆದಿದೆ. ಯೋಜನೆಯನ್ನು ವಿರೋಧಿಸಿ ಮಂಗಳೂರಿನಿಂದ ಎತ್ತಿನಹೊಳೆಯ ತನಕ ಬೈಕ್ ಜಾಥಾ ಆರಂಭವಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಆಸಕ್ತ ಬೈಕ್ ಸವಾರರ ತಂಡ ಹಾಗೂ ಸಹ್ಯಾದ್ರಿ ಸಂಚಯ ವತಿಯಿಂದ ಈ ಬೈಕ್ ಜಾಥಾ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನಿಂದ ಎತ್ತಿನಹೊಳೆಯ ತನಕ ನಡೆಲಿರುವ ಬೈಕ್ ಜಾಥಾಕ್ಕೆ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಭಾನುವಾರ ಚಾಲನೆ ನೀಡಿದ್ದಾರೆ. [ಎತ್ತಿನಹೊಳೆ ಯೋಜನೆಗೆ ತಡೆಯಾಜ್ಞೆ]

ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಅಪಾರ ಹಾನಿಯಾಗಲಿದೆ ಎಂದು ಜನಜಾಗೃತಿ ಮೂಡಿಸುವ ಸಲುವಾಗಿ ಈ ಬೈಕ್ ಜಾಥಾ ಆರಂಭಿಸಲಾಗಿದೆ. ಮಂಗಳೂರಿನ ಮಂಗಳಾ ಸ್ಟೇಡಿಯಂನಿಂದ ಆರಂಭವಾದ ಜಾಥಾದಲ್ಲಿ ಸುಮಾರು 20ಕ್ಕೂ ಅಧಿಕ ಬೈಕ್ ಸವಾರರು ಪಾಲ್ಗೊಂಡಿದ್ದರು. [ಎತ್ತಿನಹೊಳೆ ಯೋಜನೆಗೆ ಕರಾವಳಿ ಜನರ ವಿರೋಧವೇಕೆ?]

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ಒಳಗೊಂಡಂತೆ ರಾಜ್ಯದ 7 ಜಿಲ್ಲೆಗಳ 28 ತಾಲ್ಲೂಕುಗಳ 68.5 ಲಕ್ಷ ಜನರಿಗೆ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯನ್ನು ಕರ್ನಾಟಕ ನೀರಾವರಿ ನಿಗಮದ ಮೂಲಕ ಅನುಷ್ಟಾನಗೊಳಿಸುತ್ತಿದೆ. ಈ ಯೋಜನೆಗೆ ಕರಾವಳಿ ಭಾಗದ ಜನರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಬೈಕ್ ಜಾಥಾದ ಚಿತ್ರಗಳು ಇಲ್ಲಿವೆ..... [ಎತ್ತಿನಹೊಳೆ ಯೋಜನೆ : ಸರ್ಕಾರದ ಸ್ಪಷ್ಟನೆಗಳು]

ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗೆ ವಿರೋಧ

ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗೆ ವಿರೋಧ

ಕರ್ನಾಟಕ ಸರ್ಕಾರ ಆರಂಭಿಸಿರುವ ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯನ್ನು ವಿರೋಧಿಸಿ ಕರಾವಳಿ ಭಾಗದಲ್ಲಿ ಪ್ರತಿಭಟನೆ ಮುಂದುವರೆದಿದೆ. ಯೋಜನೆಯ ಬಗ್ಗೆ ಜನ ಜಾಗೃತಿ ಮೂಡಿಸಲು ಬೈಕ್ ಜಾಥಾ ಆರಂಭಿಸಲಾಗಿದೆ.

ಬೈಕ್ ಜಾಥಾಕ್ಕೆ ಚಾಲನೆ

ಬೈಕ್ ಜಾಥಾಕ್ಕೆ ಚಾಲನೆ

ದಕ್ಷಿಣ ಕನ್ನಡ ಜಿಲ್ಲಾ ಆಸಕ್ತ ಬೈಕ್ ಸವಾರರ ತಂಡ ಹಾಗೂ ಸಹ್ಯಾದ್ರಿ ಸಂಚಯ ವತಿಯಿಂದ ಈ ಬೈಕ್ ಜಾಥಾ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನಿಂದ ಎತ್ತಿನಹೊಳೆಯ ತನಕ ನಡೆಲಿರುವ ಬೈಕ್ ಜಾಥಾಕ್ಕೆ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಭಾನುವಾರ ಚಾಲನೆ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ನಾಶ ಮಾಡಲು ಈ ಯೋಜನೆ

ದಕ್ಷಿಣ ಕನ್ನಡ ಜಿಲ್ಲೆ ನಾಶ ಮಾಡಲು ಈ ಯೋಜನೆ

ಬೈಕ್ ಜಾಥಾಗೆ ಚಾಲನೆ ನೀಡಿ ಮಾತನಾಡಿದ ನಳೀನ್ ಕುಮಾರ್ ಕಟೀಲ್ ಅವರು, 'ಎತ್ತಿನಹೊಳೆ ಯೋಜನೆಯನ್ನು ದಕ್ಷಿಣ ಕನ್ನಡ ಜಿಲ್ಲೆಯನ್ನು ನಾಶ ಮಾಡಲು ಜಾರಿಗೆ ತರಲಾಗುತ್ತಿದೆ. ಮಂಗಳೂರು, ಉಡುಪಿ ಭಾಗದ ಜನತೆಗೆ ಬೇಡವಾದ ಯೋಜನೆ ಇದಾಗಿದ್ದು, ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದೊಂದಿಗೆ ಈ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ' ಎಂದು ಹೇಳಿದರು.

ಬೈಕ್‌ ಜಾಥಾದ ಮಾರ್ಗ

ಬೈಕ್‌ ಜಾಥಾದ ಮಾರ್ಗ

ಮಂಗಳೂರಿನಿಂದ ಆರಂಭವಾದ ಬೈಕ್ ಜಾಥಾ ಉಪ್ಪಿನಂಗಡಿ-ಗುಂಡ್ಯ-ಶಿರಾಡಿ ಮಾರ್ಗವಾಗಿ ಮಾರನಹಳ್ಳಿಯಿಂದ ಕಡಗರ ಹಳ್ಳಿ, ಆಲುವಳ್ಳಿ, ಎತ್ತಿನಹೊಳೆ, ಕೇರಿಹೊಳೆ, ಎತ್ತಿನಹಳ್ಳ, ಹೆಗ್ಗದ್ದೆ, ಸತ್ತಿಗಾಲ, ಹೆಬ್ಬಸಾಲೆವರೆಗೆ ನದಿಕಣಿವೆ ಮತ್ತು ಯೋಜನಾ ಪ್ರದೇಶದಲ್ಲಿ ಸಾಗಲಿದೆ.

20ಕ್ಕೂ ಹೆಚ್ಚು ಬೈಕ್ ಸವಾರರು

20ಕ್ಕೂ ಹೆಚ್ಚು ಬೈಕ್ ಸವಾರರು

ಮಂಗಳೂರಿನ ಮಂಗಳಾ ಸ್ಟೇಡಿಯಂನಿಂದ ಆರಂಭವಾದ ಜಾಥಾದಲ್ಲಿ ಸುಮಾರು 20 ಕ್ಕೂ ಅಧಿಕ ಮಂದಿ ಬೈಕ್ ಸವಾರರು ಪಾಲ್ಗೊಂಡಿದ್ದರು. ಸಹ್ಯಾದ್ರಿ ಸಂಚಯದ ಮುಖ್ಯಸ್ಥ ದಿನೇಶ್ ಹೊಳ್ಳ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಏನಿದು ಎತ್ತಿನಹೊಳೆ ಯೋಜನೆ

ಏನಿದು ಎತ್ತಿನಹೊಳೆ ಯೋಜನೆ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ಒಳಗೊಂಡಂತೆ ರಾಜ್ಯದ 7 ಜಿಲ್ಲೆಗಳ 28 ತಾಲ್ಲೂಕುಗಳ 68.5 ಲಕ್ಷ ಜನರಿಗೆ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯನ್ನು ಕರ್ನಾಟಕ ನೀರಾವರಿ ನಿಗಮದ ಮೂಲಕ ಅನುಷ್ಟಾನಗೊಳಿಸುತ್ತಿದೆ. ಚಿಕ್ಕಬಳ್ಳಾಪುರದಲ್ಲಿ ಯೋಜನೆಗೆ 2014ರ ಮಾರ್ಚ್ 3ರಂದು ಈ ಶಂಕುಸ್ಥಾಪನೆ ಮಾಡಲಾಗಿದೆ.

ಯೋಜನೆಗೆ ತಡೆಯಾಜ್ಞೆ

ಯೋಜನೆಗೆ ತಡೆಯಾಜ್ಞೆ

ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ಚೆನ್ನೈ ಪೀಠ ತಡೆಯಾಜ್ಞೆ ನೀಡಿದೆ. 2015ರ ಡಿಸೆಂಬರ್ 7ರ ತನಕ ಯಾವುದೇ ಕಾಮಗಾರಿಗಳನ್ನು ನಡೆಸದಂತೆ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದೆ.

English summary
Dakshina Kannada MP Nalin Kumar Kateel (BJP) inaugurated the bike rally from Mangaluru to Yettinahole at Mangala stadium in Mangaluru on Sunday. Around 23 motorcyclists took part in the rally to protest against project.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X