ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರಿನಲ್ಲಿ ಸಡಗರದಿಂದ ನಡೆದ ಸ್ವಾತಂತ್ರ್ಯೋತ್ಸವ ಸಮಾರಂಭ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು .ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ಧ್ವಜಾರೋಹಣ ನೆರವೇರಿಸಿದರು.

|
Google Oneindia Kannada News

ಮಂಗಳೂರು, ಆಗಸ್ಟ್ 15: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು .ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ಧ್ವಜಾರೋಹಣ ನೆರವೇರಿಸಿದರು.

ಗಾಂಧೀಜಿಗೂ ಪ್ರಿಯವಾಗಿತ್ತಂತೆ ಮೈಸೂರು!ಗಾಂಧೀಜಿಗೂ ಪ್ರಿಯವಾಗಿತ್ತಂತೆ ಮೈಸೂರು!

ಬಳಿಕ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದ ಅವರು ಜಿಲ್ಲೆಯಲ್ಲಿ ನಡೆದ ಪ್ರಗತಿ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ರಾಜ್ಯ ಸರ್ಕಾರದಿಂದ ಬಿಡುಗಡೆಯಾದ ಅನುದಾನ ಗಳ ವಿವರ ನೀಡಿದರು . ದೇಶಭಕ್ತರ ತ್ಯಾಗ, ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ. ದೇಶಭಕ್ತರ ಆದರ್ಶಗಳನ್ನು ನಮ್ಮಲ್ಲಿ ಅಳವಡಿಸಿಕೊಳ್ಳಬೇಕೆಂದು ಅವರು ಕರೆ ನೀಡಿದರು . ದೇಶದ ಏಳಿಗೆ ,ಐಕ್ಯತೆಗೆ ಮಾರಕವಾದ ಶಕ್ತಿಗಳನ್ನು ಒಗ್ಗಟ್ಟಾಗಿ ಎದುರಿಸುವ ಅವಶ್ಯಕತೆ ಇದೆ ಎಂದು ಹೇಳಿದ ಅವರು ಸ್ನೇಹ ಸೌಹಾರ್ದದಿಂದ ದೇಶದ ಏಕತೆ ಕಾಪಾಡುವ ಕರ್ತವ್ಯ ನಮ್ಮದಾಗಿದೆ ಎಂದು ಅಭಿಪ್ರಾಯಪಟ್ಟರು .

D K Celebrates 71st Independence day with great patriotism

ಕಾರ್ಯಕ್ರಮದ ಅಂಗವಾಗಿ ಪೊಲೀಸ್ ಪಡೆ, ಗೃಹರಕ್ಷಕ ದಳ, ಅಗ್ನಿಶಾಮಕ ದಳ ,ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ ಎನ್ ಸಿ ಸಿ ವಿಭಾಗದ ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನ ಕೂಡ ನಡೆಯಿತು .

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನೀಯರಿಗೆ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು . ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಗರಿಷ್ಠ ಅಂಕ ಪಡೆದ ೧೦ ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಜಿಲ್ಲಾಡಳಿತ ವತಿಯಿಂದ ಲ್ಯಾಪ್ಟಾಪ್ ವಿತರಿಸಲಾಯಿತು . ಮುಖ್ಯಮಂತ್ರಿ ಹರೀಶ್ ಸಾಂತ್ವನ ಯೋಜನೆಯಡಿ ಜಿಲ್ಲೆಯ ಮೂವರಿಗೆ ಜೀವ ರಕ್ಷಕ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು .

D K Celebrates 71st Independence day with great patriotism

ಈ ಸಂದರ್ಭದಲ್ಲಿ ಪುತ್ತೂರು ನಗರಸಭೆಗೆ ಹಾಗೂ ಬೆಳ್ತಂಗಡಿಯ ಪಟ್ಟಣ ಪಂಚಾಯಿತಿಗೆ ಬಯಲು ಶೌಚ ಮುಕ್ತ ನಗರ ಪ್ರಶಸ್ತಿ ಯನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ವಿತರಿಸಿದರು.

English summary
Patriotic spirit ran high as the Dakshina kannada administration on tuesday Aug 15 celebrated India's 71st Indelendence day at Nehru Maidan. Minister Ramanath Rai unfurled the tricolour flag.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X