ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಡಗಿನಲ್ಲಿ ಸದಾನಂದ ಗೌಡ, ಕರಂದ್ಲಾಜೆ ಅಕ್ರಮ ಆಸ್ತಿ: ರಮಾನಾಥ ರೈ

|
Google Oneindia Kannada News

ಮಂಗಳೂರು, ಜುಲೈ 10: ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಅವರು ಕೊಡಗು ಜಿಲ್ಲೆಯಲ್ಲಿ ಮಾಡಿರುವ ಅಕ್ರಮ ಆಸ್ತಿ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ನಡೆಸಬೇಕು ಎಂದು ಸಚಿವ ರಮಾನಾಥ್ ರೈ ಆಗ್ರಹಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಂಘರ್ಷಕ್ಕೆ ಕುಮ್ಮಕ್ಕು ನೀಡುತ್ತಿರುವ ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಜಾರಿ ನಿರ್ದೇಶನಾಲಯದಿಂದ ತನಿಖೆ ಆಗಬೇಕು ಅವರು ಒತ್ತಾಯಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಕದಡಲು ಈ ಇಬ್ಬರು ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

'ಸಚಿವ ರೈ 1 ತಿಂಗಳು ಮಂಗಳೂರಿಗೆ ಹೋಗದಿದ್ದರೆ ಶಾಂತಿ ನೆಲೆಸುತ್ತದೆ''ಸಚಿವ ರೈ 1 ತಿಂಗಳು ಮಂಗಳೂರಿಗೆ ಹೋಗದಿದ್ದರೆ ಶಾಂತಿ ನೆಲೆಸುತ್ತದೆ'

ಇನ್ನೂ ಮುಂದುವರಿದು, ಸದಾನಂದ ಗೌಡರು ಹಾಗೂ ಶೋಭಾ ಕರಂದ್ಲಾಜೆ ಅವರು ನನ್ನ ಮತ್ತು ಖಾದರ್ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದು, ಅವರಿಬ್ಬರೂ ನಮ್ಮ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಲಿ ಎಂದು ಪಂಥಾಹ್ವಾನ ನೀಡಿದರು.

Ramanath Rai

ಜಿಲ್ಲೆಯಲ್ಲಿ ಶಾಂತಿ ಕಾಪಾಡುವ ಕಾರಣಕ್ಕಾಗಿ ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಲ್ಲ ಪಕ್ಷಗಳ ಜನಪ್ರತಿನಿಧಿಗಳ ಸಭೆಯನ್ನು ನಡೆಸಲಾಗುವುದು ಎಂದು ಮಾಹಿತಿ ನೀಡಿದರು.

English summary
DVS, Karandlaje have illegal property in Kodagu district, Enforcement Directorate investigate on this, minister Ramanath Rai urges in Mangaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X