ಧರ್ಮಸ್ಥಳದಲ್ಲಿ ಗೋಮಾಂಸ ಸಾಗಿಸುತ್ತಿದ್ದವರ ಬಂಧನ

Posted By: Chethan
Subscribe to Oneindia Kannada

ಮಂಗಳೂರು, ಜ. 9 : ಆಟೊ ರಿಕ್ಷಾವೊಂದರಲ್ಲಿ ಗೋಮಾಂಸ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ರವಿವಾರ ತಡರಾತ್ರಿ ಬಂಧಿಸಿದ್ದಾರೆ.

ಸ್ಥಳೀಯ ನಿವಾಸಿಗಳಾದ ವಿಶ್ವನಾಥ್, ಜೋಸೆಫ್, ಜಾನ್ ಹಾಗೂ ಕಿಟ್ಟು ಮುಗೇರ ಬಂಧಿತ ಆರೋಪಿಗಳು. ಈ ಆರೋಪಿಗಳು ನಿನ್ನೆ ತಡರಾತ್ರಿ 1:30ರ ಸುಮಾರಿಗೆ ರಿಕ್ಷಾದಲ್ಲಿ ಗೋಮಾಂಸ ಸಾಗಾಟ ಮಾಡುತ್ತಿದ್ದರೆನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದು ಕಾರ್ಯಾಚರಣೆಗಿಳಿದ ಧರ್ಮಸ್ಥಳ ಪೊಲೀಸರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಕಳೆಂಜ ಗ್ರಾಮದ ಕಾಯರ್ತಡ್ಕ ಎಂಬಲ್ಲಿ ಬಂಧಿಸಿದ್ದಾರೆ.

four members arrested

ಸ್ಥಳೀಯ ಬಜರಂಗ ದಳದ ಕಾರ್ಯಕರ್ತರು ನೀಡಿದ ಮಾಹಿತಿಯನ್ವಯ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದರೆನ್ನಲಾಗಿದೆ. ಇದೇ ವೇಳೆ ಇಲ್ಲಿ ನಿರಂತರವಾಗಿ ಅಕ್ರಮ ಗೋಮಾಂಸ ಮಾರಾಟ ಕಾರ್ಯ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದು ಬಜರಂಗ ದಳದ ಕಾರ್ಯಕರ್ತರೇ ದಾಳಿ ನಡೆಸಿ ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂಬ ವದಂತಿಯೂ ಹರಡಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Four arrested for trafficking of beef meat in an auto rickshaw at dharmasthala.
Please Wait while comments are loading...