ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪುತ್ತೂರಿನ ಉಪ್ಪಿನಂಗಡಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ

By ಒನ್ ಇಂಡಿಯಾ ಪ್ರತಿನಿಧಿ
|
Google Oneindia Kannada News

ಪುತ್ತೂರು, ಡಿಸೆಂಬರ್ 13: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪದ ನೀರಕಟ್ಟೆಯಲ್ಲಿ ಗ್ಯಾಸ್ ಟ್ಯಾಂಕರ್ ವೊಂದು ಪಲ್ಟಿಯಾದ ಘಟನೆ ಜುರುಗಿದೆ. ಆದರೆ ಟ್ಯಾಂಕರ್ ಏಕೆ ಪಲ್ಟಿ ಹೊಡೆಯಿತು? ಕಾಣವೇನು? ಎಂಬುದು ತಿಳಿದುಬಂದಿಲ್ಲ.

ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಗ್ಯಾಸ್‌ ಸೋರಿಕೆಯಾಗುತ್ತಿದ್ದು, ಇದರಿಂದ ಕೆಲಹೊತ್ತು ಅಪಘಾತ ಸಂಭವಿಸಬಹುದೇನೋ ಎಂಬ ಆತಂಕ ಜನರಲ್ಲಿ ಉಂಟಾಗಿತ್ತು. ಆದರೆ ಹೆಚ್ ಪಿಸಿಎಲ್ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಗ್ಯಾಸ್ ಶಿಫ್ಟ್ ಮಾಡುವ ಕಾರ್ಯ ಪ್ರಾರಂಭಿಸಿ ನಡೆಯಬಹುದಿದ್ದ ದೊಡ್ಡ ಪ್ರಮಾಣದ ಅಪಘಾತವನ್ನು ತಡೆದಿದ್ದಾರೆ.[ಪುತ್ತೂರು ಬಳಿ ಎಲ್ ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ, ಬಿಗುವಿನ ವಾತಾವರಣ]

gas tanker topple Puttur near uppinangdy

ಯಾವುದೇ ಅನಾಹುತ ಸಂಭವಿಸಿದಂತೆ ಮುನ್ನೆಚ್ಚೆರಿಕ ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಹೆದ್ದಾರಿಯಲ್ಲಿ ತೆರಳುವ ವಾಹನಗಳಿಗೆ ಪೊಲೀಸರು ಪರ್ಯಾಯ ಮಾರ್ಗ ಕಲ್ಪಿಸಿದ್ದಾರೆ.[ಕುಮಟಾದಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ, 4 ಸಾವು]

gas tanker topple Puttur near uppinangdy

ಬೆಂಗಳೂರಿನಿಂದ ಮಂಗಳೂರು ಕಡೆ ಬರುವ ವಾಹನಗಳು ಗೋಳಿತೊಟ್ಟಿನಿಂದ ಕಡಬ ಸಮೀಪದ ಅಲಂಕಾರು ಮೂಲಕ ಉಪ್ಪಿನಂಗಡಿ ಹೋಗುತ್ತಿವೆ. ಬೆಂಗಳೂರಿಗೆ ಹೋಗುವ ವಾಹನಗಳು ಉಪ್ಪಿನಂಗಡಿ-ಸುಬ್ರಮಣ್ಯ ರಸ್ತೆಯ ಅಲಂಕಾರಿನಿಂದ ಹೆದ್ದಾರಿ ಸಂಪರ್ಕಿಸಲು ವ್ಯವಸ್ಥೆ ಕಲ್ಪಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ.

English summary
gas tanker topple near Puttur Taluk, Uppinangady, Dakshina kannada on tuesday morning
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X