ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಂಬಳಕ್ಕೆ ಕೋರ್ಟ್ ಗ್ರೀನ್ ಸಿಗ್ನಲ್ ಯಡಿಯೂರಪ್ಪ ವಿಶ್ವಾಸ

|
Google Oneindia Kannada News

ಮಂಗಳೂರು, ಜನವರಿ. 23 : ಕಂಬಳ ನಿಷೇಧವನ್ನು ತೆರವು ಮಾಡುವ ವಿಶ್ವಾಸ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅವರು ಸೋಮವಾರ ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು. ಕಂಬಳ, ಸಾವಿರ ವರ್ಷ ಇತಿಹಾಸ ಹೊಂದಿರೋ ಜನಪದ ಕ್ರೀಡೆ. ಕರಾವಳಿ ಜನರಲ್ಲಿ ಭಾವನಾತ್ಮಕ ಸಂಬಂಧ ಬೆಸೆದುಕೊಂಡಿದೆ.ಕಂಬಳ ನಿಷೇಧ ತೆರವಿಗಾಗಿ ಕಾರ್ಯಕಾರಿಣಿಯಲ್ಲಿ ನಿರ್ಣಯಿಸಿದ್ದೇವೆ ಎಂದು ಹೇಳಿದರು.

High court give green signal for Kambala says ex cm yeddyurappa

ಕಂಬಳ ನಡೆಸಲು ಸಿದ್ಧತೆ: ಕಂಬಳ ವಿಚಾರಣೆ ಜನವರಿ 30ರಂದು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಆದರೆ, ಇದೇ ಶನಿವಾರ ಕೋಟಿ ಚನ್ನಯ ಜೋಡುಕರೆ ಕಂಬಳ ನಡೆಸಲು ನಿರ್ಧರಿಸಲಾಗಿದೆ.

ಶಾಸಕ ಅಭಯಚಂದ್ರ ಜೈನ್ ನೇತೃತ್ವದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಒಂದು ವೇಳೆ ವ್ಯತಿರಿಕ್ತ ತೀರ್ಪು ಬಂದಲ್ಲಿ ಕೋಣಗಳನ್ನು ಕೆರೆಗೆ ಇಳಿಸಿ ಪ್ರತಿಭಟನೆ ನಡೆಸಲಾಗುವುದು.

250 ಕೋಣ, 25 ಸಾವಿರ ಪ್ರತಿಭಟನಾಕಾರರನ್ನು ಸೇರಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ. ಕಂಬಳಕ್ಕೆ ಸಂಬಂಧಿಸಿದಂತೆ ಜನವರಿ 30ರಂದು ಹೈಕೊರ್ಟ್ ನಲ್ಲಿ ವಿಚಾರಣೆ ನಡೆಯಲಿದೆ.

English summary
The Karnataka high court will be give green signal for Kambala, said BJP state president BS Yeddyurappa on Monday during Mangaluru bjp meeting.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X