ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು : 1 ಕೋಟಿ ವೆಚ್ಚದಲ್ಲಿ ಗುಜ್ಜರಕೆರೆ ಅಭಿವೃದ್ಧಿ

|
Google Oneindia Kannada News

ಮಂಗಳೂರು, ಏ. 27 : ಮಂಗಳೂರಿನ ಗುಜ್ಜರಕೆರೆ ಅಭಿವೃದ್ಧಿ ಕಾಮಗಾರಿಗೆ ಹೂಳು ಅಡ್ಡಿ ಉಂಟುಮಾಡುತ್ತಿದೆ ಎಂದು ಶಾಸಕ ಜೆ.ಆರ್.ಲೋಬೊ ಹೇಳಿದ್ದಾರೆ. ಸಣ್ಣ ನೀರಾವರಿ ಇಲಾಖೆಯು ಕೆರೆಯ ಅಭಿವೃದ್ಧಿಗಾಗಿ 1 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದು, ಕಾಮಗಾರಿ ನಡೆಯುತ್ತಿದೆ.

ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಜೆ.ಆರ್.ಲೋಬೊ ಅವರು ಭಾನುವಾರ ಗುಜ್ಜರಕೆರೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ಕೆರೆಯಲ್ಲಿ ತುಂಬಿರುವ ಭಾರೀ ಹೂಳು ಮತ್ತು ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಕಾಮಗಾರಿ ವಿಳಂಬವಾಗುತ್ತದೆ ಎಂದು ಹೇಳಿದರು.

ಯಂತ್ರದ ಸಹಾಯದಿಂದ ನೀರನ್ನು ಸಂಪೂರ್ಣವಾಗಿ ಖಾಲಿ ಮಾಡಿ ಹೂಳು ತೆಗೆಸುವಂತೆ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ನೀರು ಖಾಲಿಯಾದ ತಕ್ಷಣ ಕಾಮಗಾರಿಯನ್ನು ಪುನಃ ಆರಂಭಿಸಲಾಗುತ್ತದೆ ಎಂದು ತಿಳಿಸಿದರು.

ಸ್ಥಳೀಯ ಮಹಾನಗರ ಪಾಲಿಕೆ ಸದಸ್ಯರಾದ ರತಿಕಲಾ, ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿ ಶಂಬೂರಾವ್, ಟಿ.ಕೆ ಸುಧೀರ್, ರಮಾನಂದ್ ಪೂಜಾರಿ ಮುಂತಾದವರು ಶಾಸಕರ ಜೊತೆಗಿದ್ದರು.

ಗುಜ್ಜರಕೆರೆ ಅಭಿವೃದ್ಧಿ ಕಾಮಗಾರಿ ಆರಂಭ

ಗುಜ್ಜರಕೆರೆ ಅಭಿವೃದ್ಧಿ ಕಾಮಗಾರಿ ಆರಂಭ

ಮಂಗಳೂರು ದಕ್ಷಿಣ ವಿಧಾನಸಭೆ ವ್ಯಾಪ್ತಿಯಲ್ಲಿರುವ ಗುಜ್ಜರಕೆರೆಯ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. 2002 ಮತ್ತು 2009ರ ನಂತರ ಮತ್ತೊಮ್ಮೆ ಕೆರೆ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ.

ಶಾಸಕರಿಂದ ಕಾಮಗಾರಿ ಪರಿಶೀಲನೆ

ಶಾಸಕರಿಂದ ಕಾಮಗಾರಿ ಪರಿಶೀಲನೆ

ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಜೆ.ಆರ್.ಲೋಬೊ ಅವರು ಭಾನುವಾರ ಗುಜ್ಜರಕೆರೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಅಧಿಕಾರಿಗಳೊಂದಿಗೆ ಪರಿಶೀಲಿಸಿದರು.

1 ಕೋಟಿ ರೂ. ವೆಚ್ಚದಲ್ಲಿ ಕೆರೆ ಅಭಿವೃದ್ಧಿ

1 ಕೋಟಿ ರೂ. ವೆಚ್ಚದಲ್ಲಿ ಕೆರೆ ಅಭಿವೃದ್ಧಿ

ಗುಜ್ಜರಕೆರೆ ಅಭಿವೃದ್ಧಿಗಾಗಿ ಸಣ್ಣ ನೀರಾವರಿ ಇಲಾಖೆ 1 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಮೊದಲು ಹೂಳು ಎತ್ತುವ ಕಾಮಗಾರಿ ಆರಂಭಿಸಲಾಗಿದೆ. ಕೆರೆಯಲ್ಲಿ ಹೆಚ್ಚಿನ ಹೂಳು ತುಂಬಿಕೊಂಡಿರುವುದರಿಂದ ಕಾಮಗಾರಿ ವಿಳಂಬವಾಗುತ್ತಿದೆ.

ಕೆರೆಯ ನೀರನ್ನು ಖಾಲಿ ಮಾಡಲು ಸೂಚನೆ

ಕೆರೆಯ ನೀರನ್ನು ಖಾಲಿ ಮಾಡಲು ಸೂಚನೆ

ಯಂತ್ರದ ಸಹಾಯದಿಂದ ನೀರನ್ನು ಸಂಪೂರ್ಣವಾಗಿ ಖಾಲಿ ಮಾಡಿ ಹೂಳು ತೆಗೆಸುವಂತೆ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ನೀರು ಖಾಲಿಯಾದ ತಕ್ಷಣ ಕಾಮಗಾರಿಯನ್ನು ಪುನಃ ಆರಂಭಿಸಲಾಗುತ್ತದೆ ಎಂದು ಶಾಸಕ ಜೆ.ಆರ್.ಲೋಬೊ ಹೇಳಿದರು.

ಚರಂಡಿ ನೀರು ಕೆರೆಗೆ ಸೇರದಂತೆ ಕ್ರಮ

ಚರಂಡಿ ನೀರು ಕೆರೆಗೆ ಸೇರದಂತೆ ಕ್ರಮ

ಗುಜ್ಜರಕೆರೆಗೆ ಚರಂಡಿಯ ನೀರು ಬಂದು ಸೇರುತ್ತಿರುವ ಬಗ್ಗೆ ಸ್ಥಳೀಯರು ಈ ಸಂದರ್ಭದಲ್ಲಿ ಶಾಸಕರಿಗೆ ದೂರು ಸಲ್ಲಿಸಿದರು. ಪ್ರಥಮ ಹಂತದ ಕಾಮಗಾರಿ ಮುಗಿದ ತಕ್ಷಣ ಈ ಸಮಸ್ಯೆಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಶಾಸಕರು ಭರವಸೆ ನೀಡಿದರು.

English summary
Mangaluru city south MLA J.R. Lobo directed the minor irrigation department officials to drain out water and remove silt from Gujjarakere as soon as possible. The department has begun rejuvenation works, of lake at an estimated cost of Rs. 1 core.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X