ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶುಕ್ರವಾರದಿಂದ ಮಂಗಳೂರಲ್ಲಿ ಸರ್ಫಿಂಗ್ ಸ್ಪರ್ಧೆ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಮೇ 26 : ಮಂಗಳೂರಿನ ಸಸಿಹಿತ್ಲು ಬೀಚ್ 'ಇಂಡಿಯನ್ ಓಪನ್ ಆಫ್ ಸರ್ಫಿಂಗ್' ಸ್ಪರ್ಧೆಗೆ ಸಿದ್ಧವಾಗಿದೆ. ಮೇ 27 ರಿಂದ 29ರವರೆಗೆ ಬೀಜ್‌ನಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿವೆ.

ಮೇ 27ರ ಶುಕ್ರವಾರ ಬೆಳಗ್ಗೆ 9 ಗಂಟೆಗೆ ಪ್ರವಾಸೋದ್ಯಮ ಸಚಿವ ಆರ್.ವಿ.ದೇಶಪಾಂಡೆ ಅವರು ಸರ್ಫಿಂಗ್ ಸ್ಪರ್ಧೆಯನ್ನು ಉದ್ಘಾಟಿಸಲಿದ್ದಾರೆ. ಅಂತಾರಾಷ್ಟ್ರೀಯ ಸರ್ಫಿಂಗ್ ಅಸೋಸಿಯೇಷನ್ ಹಾಗೂ ಸರ್ಫಿಂಗ್ ಫೆಡರೇಷನ್ ಆಫ್ ಇಂಡಿಯಾ ನೇತೃತ್ವದಲ್ಲಿ ಮಂತ್ರ ಸರ್ಫ್ ಕ್ಲಬ್, ಕೆನರಾ ಸರ್ಫಿಂಗ್ ಅಂಡ್ ವಾಟರ್ ಸ್ಫೋರ್ಟ್‌ ಪ್ರಮೋಷನ್ ಕೌನ್ಸಿಲ್ ಸಹಭಾಗಿತ್ವದಲ್ಲಿ ಈ ಸ್ಪರ್ಧೆಯನ್ನು ಆಯೋಜಿಸಲಾಗಿದೆ. [ಸಸಿಹಿತ್ಲು ಸರ್ಫಿಂಗ್ ಸ್ಪರ್ಧೆ]

surfing

ಸ್ಪರ್ಧೆಯಲ್ಲಿ ಭಾಗವಹಿಸಲು ದೇಶದ ವಿವಿಧ ಕಡೆಗಳಿಂದ ಈಗಾಗಲೇ 85 ಸರ್ಫರ್‌ಗಳು ಆಲ್‌ಲೈನ್‌ ಮೂಲಕ ನೋಂದಣಿ ಮಾಡಿಕೊಂಡಿದ್ದಾರೆ. ಮುಂದಿನ ಎರಡು ದಿನಗಳಲ್ಲಿ 20ಕ್ಕೂ ಅಧಿಕ ಮಂದಿ ನೋಂದಣಿ ಮಾಡಿಕೊಂಡು ಸ್ಪರ್ಧೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. [ಬೇಕಲ ಕೋಟೆಗೆ ಒಂದು ದಿನದ ಪ್ರವಾಸ ಹೋಗಿ ಬನ್ನಿ]

ಪ್ರತಿದಿನ ಬೆಳಗ್ಗೆ 7.30ರಿಂದ 11.30ರವರೆಗೆ ಹಾಗೂ ಮಧ್ಯಾಹ್ನ 12.45 ರಿಂದ 3 ಗಂಟೆಯವರೆಗೆ ಸಮುದ್ರದ ನೀರಿನ ಅಲೆಗಳ ಏರಿಳಿತವನ್ನು ಗಮನದಲ್ಲಿರಿಸಿಕೊಂಡು ಸ್ಪರ್ಧೆ ನಡೆಯಲಿದೆ. ಸ್ಪರ್ಧೆಯಲ್ಲಿ ಭಾಗವಹಿಸುವವರಿಗೆ ಮೂರು ದಿನಗಳ ಅವಧಿಗೆ ವಸತಿ, ಸಾರಿಗೆ ಹಾಗೂ ಇತರ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. [ವಾರಾಂತ್ಯಕ್ಕೆ ಕರ್ನಾಟಕ ಹಬ್ಬವೇ ಅತ್ಯುತ್ತಮ ಆಯ್ಕೆ..ಯಾಕಂದ್ರೆ?]

ಆಸ್ಟ್ರೇಲಿಯಾ, ಫ್ರಾನ್ಸ್ ಹಾಗೂ ಇಂಡೋನೇಷ್ಯಾದ ಸರ್ಫಿಂಗ್ ಕ್ಷೇತ್ರದ ಅಂತಾರಾಷ್ಟ್ರೀಯ ಚಾಂಪಿಯನ್‌ಗಳು ತೀರ್ಪುಗಾರರಾಗಿ ಆಗಮಿಸಲಿದ್ದಾರೆ. ವಿವಿಧ ವಿಭಾಗಗಳಿಗೆ ಒಟ್ಟು 6 ಲಕ್ಷ ರೂ. ವೌಲ್ಯದ ನಗದು ಬಹುಮಾನವನ್ನು ವಿತರಣೆ ಮಾಡಲಾಗುತ್ತದೆ.

ನಾಲ್ಕು ಬಣ್ಣದ ಟೀ ಶರ್ಟ್ : ಸಮುದ್ರದ ನೀರಿನಲ್ಲಿ ವಿವಿಧ ರೀತಿಯ ಸ್ಪರ್ಧೆಯಲ್ಲಿ ಭಾಗವಹಿಸುವ ಸರ್ಫರ್‌ಗಳನ್ನು ಸುಲಭವಾಗಿ ಗುರುತಿಸಲು ನಾಲ್ಕು ಬಣ್ಣದ ಜೆರ್ಸಿಗಳನ್ನು ಸಿದ್ಧಪಡಿಸಲಾಗಿದೆ. ಮೂರು ದಿನಗಳ ಸ್ಪರ್ಧೆಯ ಸಮಯದಲ್ಲಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ವಿದ್ಯಾರ್ಥಿಗಳಿಗೆ ಸರ್ಫಿಂಗ್ ಬಗ್ಗೆ ತರಬೇತಿ ನೀಡಲಾಗುತ್ತದೆ.

ಉಚಿತ ಸಾರಿಗೆ ವ್ಯವಸ್ಥೆ : ಸರ್ಫಿಂಗ್ ಸ್ಪರ್ಧೆಯಲ್ಲಿ ಭಾಗವಹಿಸುವವರು ಹಾಗೂ ವೀಕ್ಷಕರಿಗೆ ಅನುಕೂಲವಾಗುವಂತೆ ಮುಕ್ಕದ ಶ್ರೀನಿವಾಸ ಕಾಲೇಜಿನ ಪ್ರಮುಖ ಪ್ರವೇಶ ದ್ವಾರದ ಸಮೀಪದಿಂದ ಸಸಿಹಿತ್ಲು ಬೀಚ್‌ವರೆಗೆ ಉಚಿತ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

English summary
Mangaluru all set for Indian Open of Surfing Festival on May 27 to 29, 2016 at Sasihithlu beach. Surfing Federation of India organized event in association with Mulki based Mantra Surf Club and Kenara Surfing and Water Sports Promotion Council.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X