ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಖುರೇಷಿ ಭೇಟಿಯಾಗಲು ಕುಟುಂಬಸ್ಥರಿಗೆ ಅವಕಾಶ ನೀಡಿದ ಕೋರ್ಟ್

ಮಂಗಳೂರಿಗೆ 2ನೇ ಜೆಎಂಎಫ್‌ಸಿ ಕೋರ್ಟ್ ವೆನ್‌ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಹ್ಮದ್ ಖುರೇಷಿಯೊಂದಿಗೆ ಮಾತನಾಡಲು ಆತನ ಕುಟುಂಬಕ್ಕೆ ಅವಕಾಶ ನೀಡಬೇಕೆಂದು ಜೈಲು ಅಧಿಕಾರಿಗೆ ನಿರ್ದೇಶನ ನೀಡಿದೆ.

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಏಪ್ರಿಲ್ 26: ಕೊಲೆ ಯತ್ನ ಪ್ರಕರಣದ ಆರೋಪಿ ಅಹ್ಮದ್ ಖುರೇಷಿಯನ್ನು ಭೇಟಿಯಾಗಲು ಅವರ ಕುಟುಂಬಸ್ಥರು ಸಹಿತ ಯಾರಿಗೂ ಪೊಲೀಸರು ಅವಕಾಶ ನೀಡುತ್ತಿಲ್ಲ. ಆತನ ಕುಟುಂಬದವರಿಗಾದರೂ ಭೇಟಿಯಾಗಲು ಅವಕಾಶ ನೀಡಬೇಕೆಂದು ಖುರೇಷಿ ಪರವಾಗಿ ನ್ಯಾಯವಾದಿ ದಿನೇಶ್ ಹೆಗ್ಡೆ ಉಳೇಪಾಡಿ ಸೋಮವಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿಯನ್ನು ಪರಿಶೀಲನೆಗೆ ಪಡೆದುಕೊಂಡ ಮಂಗಳೂರಿಗೆ 2ನೇ ಜೆಎಂಎಫ್‌ಸಿ ನ್ಯಾಯಾಲಯವು ನಗರದ ವೆನ್‌ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಹ್ಮದ್ ಖುರೇಷಿಯೊಂದಿಗೆ ಮಾತನಾಡಲು ಆತನ ಕುಟುಂಬಕ್ಕೆ ಅವಕಾಶ ನೀಡಬೇಕೆಂದು ಜೈಲು ಅಧಿಕಾರಿಗೆ ಮಂಗಳವಾರ ನಿರ್ದೇಶನ ನೀಡಿದೆ.[ಖುರೇಷಿ ಮೇಲೆ ಪೊಲೀಸ್ ದೌರ್ಜನ್ಯ: ಸಿಐಡಿ ತನಿಖೆಗೆ ಆದೇಶ]

Mangaluru court orders that family members can meet Qureshi

ಆದೇಶದ ಪ್ರತಿಯನ್ನು ನ್ಯಾಯಾಲಯವೇ ಜೈಲಿಗೆ ಕಳುಹಿಸಿದೆ. ಇನ್ನು ಸಿಐಡಿ ಎಸ್ಪಿ ಸಿರಿ ಗೌರಿ ನೇತೃತ್ವದ ಮೂವರು ಅಧಿಕಾರಿಗಳ ತಂಡವು ನಗರದಲ್ಲಿ ಖುರೇಷಿ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ಮುಂದುವರಿಸಿದೆ ಎಂದು ಉಳೇಪಾಡಿ ದಿನೇಶ್ ಹೆಗ್ಡೆ 'ಒನ್ ಇಂಡಿಯಾ ಕನ್ನಡ'ಕ್ಕೆ ತಿಳಿಸಿದ್ದಾರೆ.[ಮಂಗಳೂರು: ವಾಟ್ಸಾಪಲ್ಲಿ ಅಹ್ಮದ್ ಖುರೇಶಿ ಸಾವಿನ ವದಂತಿ]

ಅಹ್ಮದ್ ಖುರೇಶಿ ಕಿಡ್ನಿ ವಿಫಲಗೊಂಡು ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಮೇಲೆ ಪೊಲೀಸ್ ದೌರ್ಜನ್ಯ ನಡೆದಿದೆ ಎನ್ನಲಾಗುತ್ತಿದೆ. ಈ ಪ್ರಕರಣವನ್ನು ಇತ್ತೀಚೆಗೆ ಸಿಐಡಿ ಹಸ್ತಾಂತರಿಸಲಾಗಿದ್ದು, ಸಿಐಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

English summary
As the police officials weren't permitting Ahmer Qureshi family members to visit him at Venlock hospital, the family members had requested the court for permission. Now the court has issued an order to the police officials to permit the family member to visit Qureshi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X