ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು ಪೊಲೀಸ್ ಆಯುಕ್ತ ಎಂ.ಚಂದ್ರಶೇಖರ್ ಗೆ ವರ್ಗಾವಣೆ

ಪೊಲೀಸ್ ಆಯುಕ್ತ ಎಂ.ಚಂದ್ರಶೇಖರ್ ಅವರನ್ನು ವರ್ಗಾಯಿಸಿ ಸರಕಾರ ಆದೇಶ ಹೊರಡಿಸಿದೆ. ಬೆಂಗಳೂರು ಅಪರಾಧ, ತನಿಖಾ ಮತ್ತು ಆರ್ಥಿಕ ವಿಭಾಗಗಳ ಐಜಿಪಿಯಾಗಿ ಚಂದ್ರಶೇಖರ್ ಅವರನ್ನು ವರ್ಗಾಯಿಸಲಾಗಿದೆ.

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಮೇ 25: ಪೊಲೀಸ್ ಆಯುಕ್ತ ಎಂ.ಚಂದ್ರಶೇಖರ್ ಅವರನ್ನು ವರ್ಗಾಯಿಸಿ ಸರಕಾರ ಆದೇಶ ಹೊರಡಿಸಿದೆ. ಬೆಂಗಳೂರು ಅಪರಾಧ, ತನಿಖಾ ಮತ್ತು ಆರ್ಥಿಕ ವಿಭಾಗಗಳ ಐಜಿಪಿಯಾಗಿ ಚಂದ್ರಶೇಖರ್ ಅವರನ್ನು ವರ್ಗಾಯಿಸಲಾಗಿದೆ.

ಎನ್ ಸತೀಶ್ ಕುಮಾರ್ ರನ್ನು ಮಂಗಳೂರಿಗೆ ನೂತನ ನಗರ ಪೊಲೀಸ್ ಆಯುಕ್ತರಾಗಿ ನೇಮಕ ಮಾಡಲಾಗಿದೆ.

ಸತೀಶ್ ಕುಮಾರ್ ಮೂಲತಃ ತಮಿಳುನಾಡಿನವರು. ಅವರು ಈ ಹಿಂದೆ ಬೀದರ್ ಜಿಲ್ಲೆಯ ಎಸ್ಪಿ ಹಾಗೂ ಡಿಸಿಪಿ (ಆಡಳಿತ)ಯಾಗಿ ಸೇವೆ ಸಲ್ಲಿಸಿದ್ದಾರೆ.

Mangaluru Police Commissioner Chandra Sekhar Transferred

ಚಂದ್ರಶೇಖರ್ ರವರು ಪೋಲಿಸ್ ಇಲಾಖೆಯಲ್ಲಿ ಅನೇಕ ಬದಲಾವಣೆಗಳನ್ನು ತರುವ ಮೂಲಕ ಹೆಸರುವಾಸಿಯಾಗಿದ್ದರು. ಮಂಗಳೂರಿನಲ್ಲಿ ಮೊಟ್ಟಮೊದಲೆನೆದಾಗಿ ಜನರ ಕುಂದುಕೊರತೆಗಳನ್ನು ಕೇಳಲು ಅವರು ಫೋನ್-ಇನ್ ಕಾರ್ಯಕ್ರಮವನ್ನು ಪ್ರಾರಂಭಿಸಿದರು ಮತ್ತು ಅನೇಕ ಸಮಸ್ಯೆಗಳನ್ನು ಕೂಡಾ ಆ ಮೂಲಕ ಪರಿಹರಿಸಿದರು.

ಆದರೆ ಪಿಎಫ್ಐ ಕಾರ್ಯಕರ್ತರ ಮೇಲಿನ ಹಲ್ಲೆಯ ಸಂದರ್ಭದಲ್ಲಿ ಅವರ ವರ್ಗಾವಣೆಗೆ ಒತ್ತಾಯ ಕೇಳಿ ಬಂದಿತ್ತು. ಇದೀಗ ಚಂದ್ರಶೇಖರ್ ರನ್ನು ವರ್ಗಾವಣೆ ಮಾಡಲಾಗಿದೆ. ಆದರೆ ಇದಕ್ಕೆ ಕಾರಣ ಏನು ಎಂದು ಮಾತ್ರ ತಿಳಿದು ಬಂದಿಲ್ಲ.

English summary
City police commissioner M Chandra Sekhar has been transferred. The order issued by the state government on Thursday May 25. IPS officer Satheesh Kumar has been appointed to in Chandra Sekhar's place.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X