ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು ವಿಮಾನ ನಿಲ್ದಾಣದಲ್ಲಿ ದಿನದ 24 ಗಂಟೆ ರಾಷ್ಟ್ರಧ್ವಜ ಹಾರಾಟ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಅಕ್ಟೋಬರ್. 28 : ಇನ್ನು ಮುಂದೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಿನದ 24 ಗಂಟೆಯೂ ಅತೀ ದೊಡ್ಡ ಭಾರತದ ತ್ರಿವರ್ಣ ಧ್ವಜ ಹಾರಾಡಲಿದೆ.

100 ಅಡಿ ಎತ್ತರದ ಧ್ವಜಸ್ತಂಭದಲ್ಲಿ ಬೃಹತ್ ರಾಷ್ಟ್ರ ಧ್ವಜಾರೋಹಣ ಶುಕ್ರವಾರ (ಅಕ್ಟೋಬರ್28) ಬೆಳಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೆರವೇರಿತು. [24*7 ಕಾರ್ಯನಿರ್ವಹಿಸಲಿದೆ ಮಂಗಳೂರು ವಿಮಾನ ನಿಲ್ದಾಣ]

Minister Rai hoists monumental 100FT high national flag at Mangaluru International Airport

ಈ ಸಂದರ್ಭ ಮಾತನಾಡಿದ ಸಚಿವ ರೈ, ರಾಷ್ಟ್ರಧ್ವಜವು ದೇಶದ ಸ್ವಾತಂತ್ರಕ್ಕಾಗಿ ಹೋರಾಡಿದವರ, ಪ್ರಾಣತ್ಯಾಗ ಮಾಡಿದವರ ಬಗ್ಗೆ ಹೆಮ್ಮೆ ಮೂಡಿಸುವ ಸಂಕೇತ. ದ.ಕ. ಜಿಲ್ಲೆಯಲ್ಲಿ ಅತೀ ದೊಡ್ಡ ರಾಷ್ಟ್ರಧ್ವಜ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಿನದ 24 ಗಂಟೆಯೂ ಹಾರಾಡುವುದು ಹೆಮ್ಮೆಯ ವಿಚಾರ ಎಂದರು.

Minister Rai hoists monumental 100FT high national flag at Mangaluru International Airport

ಈ ವೇಳೆ ಜಿ.ಟಿ.ರಾಧಾಕೃಷ್ಣ ಮಾತನಾಡಿ, ಈ ಬೃಹತ್ ರಾಷ್ಟ್ರಧ್ವಜ ಹಾರಾಟಕ್ಕೆ 13 ಲಕ್ಷ ರೂ. ವೆಚ್ಚ ಮಾಡಲಾಗಿದೆ. ಇದರ ಆರೋಹಣಕ್ಕೆ ಯಾಂತ್ರೀಕೃತ ಸೌಲಭ್ಯ ಕಲ್ಪಿಸಲಾಗಿದೆ. ಇದರ ಆರೋಹಣಕ್ಕೆ 3 ನಿಮಿಷಗಳ ಕಾಲಾವಕಾಶ ಅಗತ್ಯವಿದೆ ಎಂದರು.

ಪ್ರಯಾಣಿಕರ ಸಂತೃಪ್ತಿ ಸರ್ವೇಯ ಪ್ರಕಾರ ದೇಶದ 53 ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 3ನೇ ಸ್ಥಾನದಲ್ಲಿದ್ದರೆ. ದಕ್ಷಿಣ ಭಾರತದಲ್ಲಿ ಮೊದಲ ಸ್ಥಾನಕ್ಕೆ ಪಾತ್ರವಾಗಿದೆ.

2015-16ನೆ ಸಾಲಿನಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು 16.73 ಲಕ್ಷ ಪ್ರಯಾಣಿಕರು ಬಳಸಿದ್ದಾರೆ. ಪ್ರಸಕ್ತ ವರ್ಷ ಈ ಸಂಖ್ಯೆ 20 ಲಕ್ಷ ದಾಟುವ ಸಾಧ್ಯತೆಯಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಸದ ನಳೀನ್ ಕುಮಾರ್ ಕಟೀಲು, ವಿಮಾನ ನಿಲ್ದಾಣದ ನಿರ್ದೇಶಕ ಜಿ.ಟಿ.ರಾಧಾಕೃಷ್ಣ ಉಪಸ್ಥಿತರಿದ್ದರು.

English summary
minister, B Ramanath Rai, and Dakshina Kannada member of parliament, Nalin Kumar Kateel, inaugurated the facility in the airport today morning, This national flag that is 30 feet long and 20 feet wide will remain on the flag post that has been specially erected for the purpose, all through days and nights.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X