ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಸ್ಮಾರ್ಟ್ ಸಿಟಿಯಾಗಲು ಸಾರ್ವಜನಿಕ ಉದ್ದಿಮೆಗಳ ಸಹಕಾರ ಅಗತ್ಯ'

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಫೆಬ್ರವರಿ 3 : 'ಕೇಂದ್ರ ಮತ್ತು ರಾಜ್ಯ ಸರಕಾರದ ಅನುದಾನ ಮಾತ್ರವಲ್ಲ, ಸಾರ್ವಜನಿಕ ಉದ್ದಿಮೆಗಳ ಸಹಭಾಗಿತ್ವದ ಮೂಲಕ ನಗರಗಳ ಅಭಿವೃದ್ಧಿಯಾಗಬೇಕಾಗಿದೆ' ಎಂದು ರಾಜ್ಯ ನಗರಾಭಿವೃದ್ಧಿ ಸಚಿವ ರೋಶನ್ ಬೇಗ್ ಎಂದು ಹೇಳಿದರು.

ಅವರು ಶುಕ್ರವಾರ ನಗರದ ಖಾಸಗಿ ಹೊಟೇಲ್ ನಲ್ಲಿ ಕೆಯುಐಡಿಎಫ್ ಸಿ ಮತ್ತು ವಿಶ್ವಬ್ಯಾಂಕ್ ಸಹಯೋಗದೊಂದಿಗೆ ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ 'ಸ್ಮಾರ್ಟ್ ಸಿಟಿ'ಕುರಿತು ನಡೆದ ರಾಜ್ಯಮಟ್ಟದ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.

Minister Roshan Baig inaugurated two-day state-level workshop on Smart Cities Mission - Karnataka at mangaluru

'ಶುದ್ಧ ಕುಡಿಯುವ ನೀರು, ಶೌಚಾಲಯ ನಿರ್ಮಾಣ ಹಾಗೂ ತ್ಯಾಜ್ಯ ವಿಲೇವಾರಿಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ಪ್ರಮುಖ ನಗರಗಳ ಅಭಿವೃದ್ಧಿಗೆ ಸ್ಮಾರ್ಟ್ ಸಿಟಿ ಯೋಜನೆಯ ಅಗತ್ಯ ಇದೆ.ಗುಣಮಟ್ಟದ ಶಿಕ್ಷಣ ಮತ್ತು ಆರೋಗ್ಯ ಸುಧಾರಣೆ ಇದರ ಮುಖ್ಯ ಉದ್ದೇಶವಾಗಿದೆ' ಎಂದರು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ, ಕೆಯುಐಡಿಎಫ್ ಸಿ ವ್ಯವಸ್ಥಾಪಕ ನಿರ್ದೇಶಕ ವಿ.ಪೊನ್ನುರಾಜ್, ಜಿಲ್ಲಾಧಿಕಾರಿ ಡಾ.ಜಗದೀಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

English summary
Minister for urban development Roshan Baig on Friday February 3 inaugurated a two-day state-level workshop on Smart Cities Mission - Karnataka, a planning and initiation meet for ICT solution at Hotel Ocean Pearl here. The workshop has been jointly organised by government of Karnataka, Mangaluru City Corporation, the World Bank and the KUIDFC.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X