ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾಂಗ್ರೆಸ್ ಕಾರ್ಯಕರ್ತರಿಗೆ ಕಿವಿಮಾತು ಹೇಳಿದ ಉಮಾಶ್ರೀ

By ಐಸಾಕ್ ರಿಚರ್ಡ್, ಮಂಗಳೂರು
|
Google Oneindia Kannada News

ಮಂಗಳೂರು, ಫೆ. 27 : ಕಾಂಗ್ರೆಸ್ ಪಕ್ಷ ಚುನಾವಣೆಯ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಈಗಾಗಲೇ ಶೇ.90ರಷ್ಟು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ, ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು ಎಂದು ಸಚಿವೆ ಉಮಾಶ್ರೀ ಕರೆ ನೀಡಿದ್ದಾರೆ.

ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಉಮಾಶ್ರೀ ಅವರು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಸರ್ಕಾರದ ಯೋಜನೆಗಳಲ್ಲಿ ಜನರಿಗೆ ತಪುಪಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡಬೇಕು ಎಂದು ಹೇಳಿದರು.

Umashree

ಸಹಾಯಧನ : ಅಂಧ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗುವಂತೆ ಲ್ಯಾಪ್‌ಟಾಪ್ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ ಸಚಿವರು, ಪ್ರಾರಂಭಿಕ ಹಂತದಲ್ಲಿ ಒಂದು ಸಾವಿರ ವಿದ್ಯಾರ್ಥಿಗಳಿಗೆ ವಿತರಣೆ ಮಾಡಲು ಯೋಜನೆ ರೂಪಿಸಲಾಗಿದೆ ಎಂದರು. [ಪರಮೇಶ್ವರ ಜೊತೆ ಸಿಎಂ ಸಿದ್ದರಾಮಯ್ಯ ಗೌಪ್ಯ ಚರ್ಚೆ]

ಅಂಧ ಮಹಿಳೆಯರಿಗೆ ಪೂರಕವಾದ ಯೋಜನೆ ಹಮ್ಮಿಕೊಳ್ಳಲಾಗಿದ್ದು, ಮದುವೆಯಾದ ಅಂಧ ಮಹಿಳೆಯರು ಹೆರಿಗೆ ಸಂದರ್ಭದಲ್ಲಿ ಪ್ರತಿ ತಿಂಗಳು 2 ಸಾವಿರ ರೂ. ಸಹಾಯಧನ ಪಡೆಯಲಿದ್ದಾರೆ ಎಂದು ಅವರು ಸಚಿವರು ಮಾಹಿತಿ ನೀಡಿದರು.

ರಾಜ್ಯಾದ್ಯಂತ ಪ್ರತಿಭಟನೆ : ಕೇಂದ್ರ ಸರ್ಕಾರದ ವಿವಾದಿತ ಭೂ ಸ್ವಾಧೀನ ಕಾಯ್ದೆ ವಿರುದ್ಧ ರಾಜ್ಯದಲ್ಲಿ ಪ್ರತಿಭಟನೆ ನಡೆಯಲಿದೆ. ಪಕ್ಷದ ನಾಯಕರ ಸೂಚನೆಯಂತೆ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಸಚಿವರು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಭಾರ ಅಧ್ಯಕ್ಷ ಕೋಡಿಜಾಲ್ ಇಬ್ರಾಹಿಂ, ಮಮತಾ ಗಟ್ಟಿ, ಕೃಪಾ ಅಮರ್ ಆಳ್ವ, ಸದಾಶಿವ ಉಳ್ಳಾಲ್ ಮುಂತಾದ ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

English summary
Women and Child Development Minster Umashree said, state government introduce people friendly schemes party workers fail to publicize such schemes. Minister addressed media in Mangaluru on February 26.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X