ನ್ಯಾಯಬೆಲೆ ಅಂಗಡಿಗಳಲ್ಲಿ 'ಪಿಒಎಸ್' ಯಂತ್ರ ಕಡ್ಡಾಯ : ಯು.ಟಿ.ಖಾದರ್
ಮಂಗಳೂರು, ಸೆಪ್ಟೆಂಬರ್ 13: ಪಡಿತರ ಸಾಮಗ್ರಿಗಳನ್ನು ಪೂರೈಸುವ ನ್ಯಾಯಬೆಲೆ ಅಂಗಡಿಗಳಲ್ಲಿ ಸೋರಿಕೆ ತಡೆಗಟ್ಟಲು ಪಾಯಿಂಟ್ ಆಫ್ ಸ್ಕೇಲ್ (ಪಿಒಎಸ್) ಯಂತ್ರಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ಈಗಾಗಲೇ ಸೂಚನೆ ನೀಡಲಾಗಿದೆ.ಇಂಟರ್ ನೆಟ್ ಸೌಲಭ್ಯ ಇರುವಲ್ಲಿಯೂ ಪಿಒಎಸ್ಗಳನ್ನು ಅಳವಡಿಸದೇ ಇದ್ದಲ್ಲಿ ಆಹಾರ ಇಲಾಖೆಯಿಂದಲೇ ನೇರವಾಗಿ ಅಳವಡಿಸಲು ಕ್ರಮ ಕೈಗೊಳ್ಳಲಾಗುವುದೆಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಎಚ್ಚರಿಕೆ ನೀಡಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಆಹಾರ ಇಲಾಖೆಯಿಂದಲೇ ಪಿಒಎಸ್ಗಳನ್ನು ಅಳವಡಿಸಿದರೆ, ಮುಂದಿನ ಹಂತಗಳಲ್ಲಿ ಪಡಿತರ ಅಂಗಡಿಗಳಿಂದ ಅಳವಡಿಕೆಯ ಶುಲ್ಕವನ್ನು ವಸೂಲಿ ಮಾಡಲಾಗುವುದು. ಇಲಾಖೆಯು ಖಾಸಗಿ ಸಂಸ್ಥೆಯೊಂದರ ಜೊತೆಗೆ ಒಪ್ಪಂದ ಮಾಡಿಕೊಂಡಿದ್ದು, ಅದರ ಮುಖಾಂತರ ಪಿಒಎಸ್ಗಳನ್ನು ಅಳವಡಿಸಲಾಗುವುದು," ಎಂದು ಹೇಳಿದರು.

ಇಂಟರ್ ನೆಟ್ ಸೌಲಭ್ಯ ಇಲ್ಲದ ಕಡೆಗಳಲ್ಲಿ ಮಾತ್ರ ಯಂತ್ರ ಅಳವಡಿಕೆಗೆ ವಿನಾಯ್ತಿ ನೀಡಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.
ರಾಜ್ಯದಲ್ಲಿ ಶೇ.60ರಷ್ಟು ಪಡಿತರ ಅಂಗಡಿಗಳಲ್ಲಿ ಪಿಒಎಸ್ಗಳನ್ನು ಅಳವಡಿಸಲಾಗಿದೆ. ಬಳ್ಳಾರಿಯಲ್ಲಿ ಶೇ.80 ಅನುಷ್ಠಾನವಾಗಿದೆ. ನನ್ನ ಮಂಗಳೂರು ಕ್ಷೇತ್ರದಲ್ಲಿ ಶೇ.90 ಅನುಷ್ಠಾನವಾಗಿದೆ ಎಂದು ಖಾದರ್ ಮಾಹಿತಿ ನೀಡಿದರು.
ರಾಜ್ಯದಲ್ಲಿ ಒಟ್ಟು 24 ಸಾವಿರ ಪಡಿತರ ಅಂಗಡಿಗಳು ಇವೆ. ಇವುಗಳ ಮೂಲಕ ರಾಜ್ಯದಲ್ಲಿ ಅನಿಲ ಭಾಗ್ಯ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಗ್ಯಾಸ್ ಸ್ಟೌವನ್ನು ಉಚಿತವಾಗಿ ನೀಡಲಾಗುತ್ತಿದೆ. ಈ ಬಾರಿಯಿಂದ 2 ಗ್ಯಾಸ್ ಸಿಲಿಂಡರನ್ನೂ ಉಚಿತವಾಗಿ ನೀಡಲಾಗುವುದು ಎಂದು ಹೇಳಿದರು.
ಮಂಗಳೂರು 'ವಾರ್ತಾ ಭಾರತಿ' ಪತ್ರಿಕೆಯ ಬಂಟ್ವಾಳ ವರದಿಗಾರನ ವಿರುದ್ಧದ ಪ್ರಕರಣವೊಂದರ ವರದಿಗೆ ಸಂಬಂಧಿಸಿ ಪೊಲೀಸರು ಕೇಸು ದಾಖಲಿಸಿ ಬಂಧಿಸಿದ್ದಾರೆ. ಈ ವಿಚಾರದಲ್ಲಿ ಪೊಲೀಸರು ಹಾಗೂ ಮಾಧ್ಯಮದ ನಡುವೆ ಪರಸ್ಪರ ಆರೋಪ ಇರುವುದರಿಂದ ಇದರ ಬಗ್ಗೆ ಉನ್ನತ ಮಟ್ಟದ ತನಿಖೆಯನ್ನು ನಡೆಸುವಂತೆ ಗೃಹ ಸಚಿವರನ್ನು ಕೋರಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.
-
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ












Click it and Unblock the Notifications