ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಚಾರಣಾಧೀನ ಮಂಗಳೂರು ಕೇಂದ್ರ ಕಾರಾಗೃಹದಿಂದ ಕೈದಿ ಎಸ್ಕೇಪ್!

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಮಾರ್ಚ್ 10 : ವಿಚಾರಾಣಾಧೀನ ಕೈದಿಯೋಬ್ಬ ಜೈಲು ಸಿಬ್ಬಂದಿಯ ಕಣ್ತಪ್ಪಿಸಿ ಮಂಗಳೂರು ಕೇಂದ್ರ ಕಾರಾಗೃಹದಿಂದ ಶುಕ್ರವಾರ ಎಸ್ಕೇಪ್ ಆಗಿದ್ದಾನೆ.

ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನಿವಾಸಿ ಜಿನ್ನಪ್ಪ ಪರವ ತಪ್ಪಿಸಿಕೊಂಡ ಕೈದಿ. ಅತ್ಯಾಚಾರ ಯತ್ನ ಮತ್ತು ಕಳವು ಪ್ರಕರಣದ ಆರೋಪದಲ್ಲಿ ಬಂಧಿತನಾಗಿದ್ದ, ಈತನನ್ನು ವಿಚಾರಣಾಧೀನ ಕೈದಿಯಾಗಿ ಮಂಗಳೂರು ಕೇಂದ್ರ ಕಾರಾಗೃಹದಲ್ಲಿರಿಸಲಾಗಿತ್ತು.[ಮಂಗಳೂರು ಜೈಲಿನೊಳಗೆ ಗಾಂಜಾ, ಮೊಬೈಲ್ ಪೂರೈಕೆ ನಿಂತಿಲ್ಲ]

prisoner escaped from Mangaluru Central Jail

ಈತ ಶುಕ್ರವಾರ ಮುಂಜಾವ ಜೈಲು ಸಿಬ್ಬಂದಿಯ ಕಣ್ತಪ್ಪಿಸಿ, ಜೈಲಿನ ಭದ್ರಕೋಟೆಯನ್ನು ಭೇದಿಸಿ ಪರಾರಿಯಾಗಿದ್ದಾನೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ರಮ ಮರಳು ವಶ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಶಿರಂಕಲ್ಲುವಿನಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ದಕ್ಷಿಣಕನ್ನಡ ಜಿಲ್ಲಾ ಅಡಿಷನಲ್ ಎಸ್ಪಿ ವೇದಮೂರ್ತಿ ನೇತೃತ್ವದ ತಂಡ ದಾಳಿ ನಡೆಸಿ 450 ಟನ್ ಅಕ್ರಮ ಮರಳು ಸುಮಾರು 45 ಲೋಡ್ ಮರಳನ್ನು ವಶಪಡಿಸಿಕೊಂಡಿದೆ. ಅಕ್ರಮ ಅಡ್ಡೆಯ ಹಿಂದೆ ಮರಳು ಮಾಫಿಯಾದ ಕೈವಾಡದ ಶಂಕೆ ವ್ಯಕ್ತವಾಗಿದೆ.

English summary
An under-trial prisoner escaped from Mangaluru Central Jail. Named of Prisoner Jinnappa escaped on March 10.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X