ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರಿನಲ್ಲಿ ಜುಲೈ 30ರವರೆಗೆ ನಿಷೇಧಾಜ್ಞೆ ಮುಂದುವರಿಕೆ

|
Google Oneindia Kannada News

ಮಂಗಳೂರು, ಜುಲೈ 16 : ಇತ್ತೀಚೆಗೆ ಉಂಟಾದ ಕೋಮು ಗಲಭೆ, ಘರ್ಷಣೆ, ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮವಾಗಿ ಜುಲೈ 30ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ ವಿಸ್ತರಿಸಲಾಗಿದೆ.

ಕರ್ನಾಟಕ ಪೊಲೀಸ್ ಕಾಯ್ದೆ 1963ರ ಪ್ರಕಾರ, ಸೆಕ್ಷನ್ 35ರಡಿಯಲ್ಲಿ ಇಂದು (ಭಾನುವಾರ) ಬೆಳಗ್ಗೆ 6 ಗಂಟೆಯಿಂದ ಜುಲೈ 30ರ ಮಧ್ಯರಾತ್ರಿಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಮಂಗಳೂರು ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ಆದೇಶ ಹೊರಡಿಸಿದ್ದಾರೆ.

ಮಂಗಳೂರು ಪರಿಸ್ಥಿತಿಯ ಬಗ್ಗೆ ಆಂತರಿಕ ಸಭೆ ನಡೆಸಿದ ಡಿಜಿಪಿ ದತ್ತಾಮಂಗಳೂರು ಪರಿಸ್ಥಿತಿಯ ಬಗ್ಗೆ ಆಂತರಿಕ ಸಭೆ ನಡೆಸಿದ ಡಿಜಿಪಿ ದತ್ತಾ

Prohibitory orders imposed in Mangaluru commissionerate limits till July 30

ಪ್ರಚೋದನೆಗೆ ಕಾರಣವಾಗುವ, ಸಾರ್ವಜನಿಕ ಆದೇಶಗಳ ಮೇಲೆ ಪರಿಣಾಮ ಬೀರುವ ಮತ್ತು ಭದ್ರತೆಗಳನ್ನು ದುರ್ಬಲಗೊಳಿಸುವ ಯಾವುದೇ ಚಟುವಟಿಕೆಗಳನ್ನು ನಡೆಸದಂತೆ ಆಯುಕ್ತರು ಹೊರಡಿಸಿರುವ ಆದೇಶದಲ್ಲಿ ಸೂಚಿಸಲಾಗಿದೆ.

ಸಮಾಜದ ಶಾಂತಿಯನ್ನು ಕೆಡಿಸುವ ಯಾವುದೇ ಅಹಿತಕರ ಘಟನೆಗಳು ಮುಂದಿನ ದಿನಗಳಲ್ಲಿ ಸಂಭವಿಸದಂತೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕಲ್ಲಡ್ಕ ಗಲಭೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡದ ಹಲವು ಭಾಗಗಳಲ್ಲಿ ನಿಷೇದಾಜ್ಞೆ ಹಾಕಲಾಗಿತ್ತು. ಹೀಗಿದ್ದೂ ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಅವರನ್ನು ದುಷ್ಕರ್ಮಿಗಳು ಜುಲೈ 4ರಂದು ಹಲ್ಲೆ ಮಾಡಿ ಹತ್ಯೆಗೈದಿದ್ದರು.

ತೀವ್ರ ಗಾಯದಿಂದ ಶರತ್ ಮಡಿವಾಳ ಮೊನ್ನೆ 7ರಂದು ಮೃತಪಟ್ಟಿದ್ದರು. ಈ ಹಿನ್ನಲೆಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿರಲಿಲ್ಲ. ಹೀಗಾಗಿ ನಿಷೇಧಾಜ್ಞೆಯನ್ನು ಇಡೀ ಜಿಲ್ಲೆಗೆ ವಿಸ್ತರಿಸಲಾಗಿತ್ತು.

English summary
Prohibitory orders were today imposed in the city commissionerate limits till July 30 in the wake of recent incidents of communal unrest in parts of Dakshina Kannada district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X