ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಿವಾಕರ ಶಾಸ್ತ್ರಿ ಸಹೋದರ ಶ್ಯಾಮ ಶಾಸ್ತ್ರಿ ಆತ್ಮಹತ್ಯೆ

|
Google Oneindia Kannada News

ಮಂಗಳೂರು, ಸೆ.1 : ರಾಘವೇಶ್ವರ ಶ್ರೀಗಳಿಗೆ ಬ್ಲಾಕ್‌ ಮೇಲ್ ಮಾಡಿರುವ ಪ್ರಕರಣದ ಆರೋಪಿಯಾಗಿರುವ ದಿವಾಕರ ಶಾಸ್ತ್ರಿ ಅವರ ಸಹೋದರ ಶ್ಯಾಮ ಪ್ರಸಾದ್ ಶಾಸ್ತ್ರಿಗಳು ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಪೂತ್ತೂರಿನ ಕೆದಿಲ ನಿವಾಸಿಯಾಗಿದ್ದ ಶ್ಯಾಮ ಪ್ರಸಾದ್ ಶಾಸ್ತ್ರಿ (48) ಅವರು ಭಾನುವಾರ ಮಧ್ಯಾಹ್ನ ಮನೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Shyam Prasad Shastry

ಹೊಸನಗರದ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಸ್ವಾಮೀಜಿ ಅವರಿಗೆ ಬ್ಲಾಕ್‌ ಮೇಲ್ ಮಾಡಿರುವ ಪ್ರಕರಣದ ಆರೋಪಿಯಾಗಿರುವ ದಿವಾಕರ ಶಾಸ್ತ್ರಿ ಅವರ ತಮ್ಮ ಶ್ಯಾಮ್ ಪ್ರಸಾದ್ ಶಾಸ್ತ್ರಿ ಅವರಿಗೆ ಸಹ ಬೆದರಿಕೆ ಕರೆಗಳು ಬರುತ್ತಿದ್ದವು ಎಂದು ತಿಳಿದುಬಂದಿದೆ. [ದಂಪತಿಗೆ ನ್ಯಾಯಾಂಗ ಬಂಧನ]

ಸೋಮವಾರ ಶ್ರೀಗಳ ಭಕ್ತರು ನಿಮ್ಮ ಮನೆಯ ಮುಂದೆ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಅನಾಮಿಕರು ಕರೆ ಮಾಡಿದ್ದರು. ಇದರಿಂದಾಗಿ ಮನನೊಂದ ಅವರು ಭಾನುವಾರ ಮಧ್ಯಾಹ್ನ ಮನೆಯಲ್ಲಿದ್ದ ಕೋವಿಯಿಂದ ದೇವರಕೋಣೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು.

ಶ್ಯಾಮ ಪ್ರಸಾದ್ ಶಾಸ್ತ್ರಿಗಳು ಬರೆದಿಟ್ಟ ಡೆತ್ ನೋಟ್ ಲಭಿಸಿದ್ದು, ಅದರಲ್ಲಿ ಯಾರ ಮೇಲೂ ವೈಯಕ್ತಿಕ ಆಪಾದನೆಗಳನ್ನು ಮಾಡಿಲ್ಲ. ತನಿಖೆಯ ಹಿನ್ನೆಲೆಯಲ್ಲಿ ಅವುಗಳನ್ನು ಬಹಿರಂಗಗೊಳಿಸಲು ಸಾಧ್ಯವಿಲ್ಲ ಎಂದು ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಎಸ್‌ಪಿ ಡಾ.ಶರಣಪ್ಪ ತಿಳಿಸಿದ್ದಾರೆ. [ರಾಘವೇಶ್ವರ ಸ್ವಾಮೀಜಿಗೆ ಬೆದರಿಕೆ]

ಪ್ರಗತಿಪರ ಕೃಷಿಕರಾಗಿ, ಪುತ್ತೂರು ವಿವೇಕಾನಂದ ಶಿಶುಮಂದಿರದ ಕಾರ್ಯದರ್ಶಿಯಾಗಿ, ವಿವೇಕಾನಂದ ಶಾಲೆಯ ಆಡಳಿತ ಮಂಡಳಿ ಸದಸ್ಯರಾಗಿದ್ದ ಶ್ಯಾಮ ಶಾಸ್ತ್ರಿಗಳು ಕೆದಿಲ ಗ್ರಾಮದಲ್ಲಿ ಪ್ರಸಿದ್ಧಿ ಪಡೆದಿದ್ದರು. ಅವರ ಆತ್ಮಹತ್ಯೆ ಪ್ರಕರಣ ಗ್ರಾಮಸ್ಥರಿಗೆ ಆಘಾತವುಂಟು ಮಾಡಿದೆ.

ಎಫ್‌ಐಆರ್ ದಾಖಲು : ಶ್ಯಾಮ ಪ್ರಸಾದ್ ಶಾಸ್ತ್ರಿ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಪೊಲೀಸ್ ಠಾಣೆಯಲ್ಲಿ 11 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಜೀವ ಬೆದರಿಕೆ, ಆತ್ಮಹತ್ಯೆಗೆ ಪ್ರಚೋದನೆ ಸಂಬಂಧಿಸಿದ ಐಪಿಸಿ ಕಲಂ 506, 306 ಮತ್ತು 67(ಎ) ಅಡಿಯಲ್ಲಿ ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ. ಯಾರ ಹೆಸರನ್ನೂ ನಮೂದಿಸದೆ ಅಪರಿಚಿತ 11 ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ.

ಮಠದ ಸ್ಪಷ್ಟನೆ : ರಾಮಚಂದ್ರಾಪುರ ಮಠದ ಯಾವ ಭಕ್ತರು ಶ್ಯಾಮಶಾಸ್ತ್ರಿಗಳಿಗೆ ಬೆದರಿಕೆ ಹಾಕಿಲ್ಲ. ಈ ಆತ್ಮಹತ್ಯೆಗೂ ಮಠಕ್ಕೂ ಯಾವುದೇ ಸಂಬಂಧ ಇಲ್ಲ. ಒಬ್ಬ ವ್ಯಕ್ತಿಯ ಮನೆ ಎದುರಿಗೆ ಭಕ್ತರು ಪ್ರತಿಭಟನೆ ಮಾಡುವುದಿಲ್ಲ ಎಂದು ಮಠದ ವಕೀಲರಾದ ಶಂಭುಶಾಸ್ತ್ರಿ ಅವರು ಸ್ಟಷ್ಟನೆ ನೀಡಿದ್ದಾರೆ.

English summary
Shyam Prasad Shastry (48) was declared dead by the KMC hospital authorities around 7 p.m. on Sunday. Shyamprasad brother of Diwakar Shastry, who recently arrested in the blackmail case aganist Shri Ramachandrapur Mutt Raghaveshwara bharathi swamiji. Shyam Prasad Shastry allegedly committed suicide by shooting self with a gun.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X