ಶರತ್ ಹತ್ಯೆ, ಆರೋಪಿಗಳನ್ನು ಬಂಧಿಸುವಲ್ಲಿ ವಿಫಲ, RSS ಆಕ್ರೋಶ

Posted By:
Subscribe to Oneindia Kannada

ಮಂಗಳೂರು, ಆಗಸ್ಟ್ 08: ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ್ ಹತ್ಯೆ ನಡೆದು ತಿಂಗಳು ಕಳೆದರೂ ಆರೋಪಿಗಳನ್ನು ಬಂಧಿಸುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ ಎಂದು ಆರೋಪಿಸಿ ಹಿಂದೂ ಹಿತರಕ್ಷಣಾ ಸಮಿತಿ ಇಂದು(ಮಂಗಳವಾರ) ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.

ಶರತ್ ಹತ್ಯೆ ತನಿಖೆ: ಪೊಲೀಸರಿಗೆ ಎದುರಾಗಿದೆಯೇ ತಾಂತ್ರಿಕ ಸಮಸ್ಯೆ?

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಹಿಂದೂ ಹಿತರಕ್ಷಣಾ ಸಮಿತಿ ಸದಸ್ಯರು, ರಾಜ್ಯದಲ್ಲಿ ಹಿಂದೂ ಸಂಘಟನೆ ಹಾಗೂ ಆರ್ ಎಸ್ ಎಸ್ ಮುಖಂಡರ ನಿರಂತರ ಹತ್ಯೆ ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಆರೋಪಿಗಳ ಬಂಧನಕ್ಕೆ ಆಸಕ್ತಿ ತೋರುತ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು .

RSS hunger strike against for the delay in arresting the murderers of Sharath

ಎಸ್ ಡಿಪಿಐ ಮುಖಂಡ ಅಶ್ರಫ್ ಹತ್ಯೆ ಪ್ರಕರಣ ಸೇರಿದಂತೆ ಜಲೀಲ್ ಕರೋಪಾಡಿ ಹತ್ಯೆ ಪ್ರಕರಣದ ತನಿಖೆಯಲ್ಲಿ ರಾಜ್ಯ ಸರ್ಕಾರ ವಹಿಸಿದ್ದ ಆಸಕ್ತಿ ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ್ ಹತ್ಯೆ ಪ್ರಕರಣದ ತನಿಖೆಯಲ್ಲಿ ತೋರುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ಪೊಲೀಸರು ತನಿಖೆ ನಡೆಸದಂತೆ ಕಾಣದ ಕೈಗಳು ಪ್ರಭಾವ ಬೀರಿವೆ ಎಂದು ಈ ಸಂದರ್ಭದಲ್ಲಿ ಆರೋಪ ಮಾಡಲಾಯಿತು.

ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣದ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆಯ ವೈಫಲ್ಯವನ್ನು ಖಂಡಿಸಿ ಪುತ್ತೂರು, ಸುಳ್ಯಾ ಹಾಗೂ ಬಂಟ್ವಾಳದಲ್ಲಿ ಕೂಡ ಉಪವಾಸ ಸತ್ಯಾಗ್ರಹ ನಡೆಸಲಾಯಿತು.

Mangaluru : Sharath Madiwala RSS worker is no more | Oneindia Kannada

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Various right-wing outfits under the banner of Hindu Hitarakshana Samiti on Tuesday August 8, began a day-long hunger strike against for the delay in arresting the murderers of RSS worker Sharath Madivala.
Please Wait while comments are loading...