ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರಿನಲ್ಲಿ ಪ್ಲಾಸ್ಟಿಕ್ ಧ್ವಜ ಮಾರಾಟ, ಬಳಕೆ ನಿಷೇಧ

By ಐಸಾಕ್ ರಿಚರ್ಡ್, ಮಂಗಳೂರು
|
Google Oneindia Kannada News

ಮಂಗಳೂರು, ಜುಲೈ 29 : ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದಲ್ಲಿ ಪಾಸ್ಟಿಕ್ ಧ್ವಜನಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ನೆಹರೂ ಮೈದಾನದಲ್ಲಿ ಸ್ವಾತಂತ್ರೋತ್ಸವ ಕಾರ್ಯಕ್ರಮಗಳು ನಡೆಯಲಿವೆ.

ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಗಳ ಸಿದ್ಧತೆಗಳ ಪರಿಶೀಲನೆ ನಡೆಸಲು ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅಧ್ಯಕ್ಷತೆಯಲ್ಲಿ ಪೂರ್ವ ಸಿದ್ಧತಾ ಸಭೆ ನಡೆಯಿತು. ಸಭೆಯಲ್ಲಿ ಮಾಡನಾಡಿದ ಜಿಲ್ಲಾಧಿಕಾರಿಗಳು ಪ್ಲಾಸ್ಟಿಕ್‌ನಿಂದ ತಯಾರಿಸಿದ ಧ್ವಜಗಳ ಮಾರಾಟ ಮತ್ತು ಅವುಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಹೇಳಿದರು.

mangaluru

ಈ ವರ್ಷದ ಜಿಲ್ಲಾಮಟ್ಟದ ಕಾರ್ಯಕ್ರಮಗಳು ನೆಹರೂ ಮೈದಾನದಲ್ಲಿ ನಡೆಯಲಿವೆ, ಜಿಲ್ಲಾ ಉಸ್ತುವಾರಿ ಸಚಿವರು ಅಂದು ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ ಮಾಡಲಿದ್ದಾರೆ. ಪೊಲೀಸ್‌, ಎನ್‌ಸಿಸಿ, ಸೇವಾದಳ ಘಟಕಗಳಿಂದ ಕವಾಯತು ನಡೆಯಲಿದೆ ಎಂದು ಇಬ್ರಾಹಿಂ ಮಾಹಿತಿ ನೀಡಿದರು. [ಪ್ಲಾಸ್ಟಿಕ್ ಧ್ವಜ ಬಳಕೆ ನಿಷೇಧಿಸಿದ ಸರ್ಕಾರ]

ಸರ್ಕಾರಿ ನೌಕರರು ಕಡ್ಡಾಯವಾಗಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಕದ್ರಿ ಗೋರಕ್ಷಕನಾಥ ಹಾಲ್‌ನಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳು ವಿವರಣೆ ನೀಡಿದರು. [ಜಾಲತಾಣಗಳಲ್ಲಿ ನಿರಾತಂಕವಾಗಿ ಧ್ವಜ ಪ್ರದರ್ಶಿಸಿ]

ರನ್‌ ವೇ ವಿಸ್ತರಣೆ, ಬೆಂಗಳೂರಿನಲ್ಲಿ ಸಭೆ : ಮಂಗಳೂರು ವಿಮಾನ ನಿಲ್ದಾಣದ ರನ್‌ವೇ ವಿಸ್ತರಣೆ ಕುರಿತು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಸಭೆ ನಡೆಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ. ಪ್ರಸ್ತುತ 7 ಸಾವಿರ ಅಡಿ ರನ್‌ವೇಯನ್ನು ವಿಮಾನ ನಿಲ್ದಾಣ ಹೊಂದಿದೆ. ಇದನ್ನು 11 ಅಥವಾ 13 ಸಾವಿರ ಅಡಿ ವಿಸ್ತರಿಸಲು ನಿರ್ಧರಿಸಲಾಗಿದೆ.

English summary
Dakshina Kannada deputy commissioner A.B. Ibrahim, said, sale and use of national flags made of plastic banned on all days including Independence Day.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X