ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನ ಬಂಧನ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ನವೆಂಬರ್ 26 : ವಿದ್ಯಾರ್ಥಿಗಳನ್ನು ಲೈಂಗಿಕವಾಗಿ ಬಳಸಿಕೊಂಡು ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಪ್ರಾಥಮಿಕ ಶಾಲೆಯ ಶಿಕ್ಷಕನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಎರಡು ವರ್ಷಗಳಿಂದ ವಿದ್ಯಾರ್ಥಿಗಳಿಗೆ ಈತ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ.

ಬಂಧಿತ ಶಿಕ್ಷಕನನ್ನು ಚೆಂಬುಗುಡ್ಡೆ ನಿವಾಸಿ ಡಾಲ್ಫಿ ಸಿಕ್ವೇರಾ (33) ಎಂದು ಗುರುತಿಸಲಾಗಿದೆ. ಬಬ್ಬುಕಟ್ಟೆಯ ನಿತ್ಯಾಧರ್ ನಗರದ ಖಾಸಗಿ ಶಾಲೆಯಲ್ಲಿ ಸಿಕ್ವೇರಾ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದ. ಬುಧವಾರ ಸಂಜೆ ಆತನನ್ನು ಪೊಲೀಸರು ಬಂಧಿಸಿದ್ದಾರೆ. [ಮೈಸೂರು : ವಿದೇಶಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ]

mangaluru

ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಸಿಸಿಟಿವಿ ಇಲ್ಲದ ಪ್ರಾಜೆಕ್ಟ್ ರೂಂಗೆ ಕರೆದುಕೊಂಡು ಹೋಗಿ ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ ಎಂದು ಆರೋಪಿಸಲಾಗಿದೆ. ಬುಧವಾರ ವಿದ್ಯಾರ್ಥಿಯನ್ನು ಕರೆದೊಯ್ದು ಆತ ತಡೆಯೊಡ್ಡಿದ್ದರೂ ಶಿಕ್ಷಕ ಲೈಂಗಿಕವಾಗಿ ಬಳಸಿಕೊಂಡಿದ್ದ. [ರಿಕ್ಷಾ ಚಾಲಕನಿಗೆ ಲೈಂಗಿಕ ಕಿರುಕುಳ ನೀಡಿದ್ದ 'ಕಾಮುಕಿ' ಸೆರೆ]

ಈ ಬಗ್ಗೆ ಪೋಷಕರ ಬಳಿ ವಿದ್ಯಾರ್ಥಿ ಹೇಳಿಕೊಂಡಿದ್ದ. ಪೋಷಕರು ಮತ್ತೊಬ್ಬ ವಿದ್ಯಾರ್ಥಿಯ ಹೆತ್ತವರನ್ನು ಸಂಪರ್ಕಿಸಿದಾಗ ಶಿಕ್ಷಕನ ಕೃತ್ಯ ಬಹಿರಂಗಗೊಂಡಿದೆ. ನಂತರ ಅವರು ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ಶಿಕ್ಷಕನನ್ನು ಬಂಧಿಸಲಾಗಿದೆ.

ಶಿಕ್ಷಕ ವಿದ್ಯಾರ್ಥಿಯನ್ನು ಟ್ಯೂಷನ್ ನೆಪದಲ್ಲಿ ಮನೆಗೆ ಕರೆದುಕೊಂಡು ಹೋಗಿ ಲೈಂಗಿಕವಾಗಿ ಬಳಸಿಕೊಂಡಿದ್ದಾನೆಂದು ತಿಳಿದುಬಂದಿದೆ. ಸತತ ಎರಡು ವರ್ಷದಿಂದ ಈತ ಈ ಕೃತ್ಯ ಎಸಗುತ್ತಿದ್ದು, ವಿದ್ಯಾರ್ಥಿಗಳು ಹೆದರಿ ಹೆತ್ತವರಿಗೆ ವಿಷಯ ತಿಳಿಸುತ್ತಿರಲಿಲ್ಲ.

English summary
Mangaluru : School teacher arrested for sexually assaulting minor boys. The accused identified as Dolphy Sequeira (33).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X