ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶೀಘ್ರದಲ್ಲೇ ಶಿರಾಡಿ ಘಾಟ್ ಬೈಪಾಸ್ ಕಾಮಗಾರಿ : ಗಡ್ಕರಿ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಡಿಸೆಂಬರ್ 16 : '2016ರ ಡಿಸೆಂಬರ್ ಅಂತ್ಯದೊಳಗೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್‌ನಲ್ಲಿ ಉದ್ದೇಶಿತ ಬೈಪಾಸ್ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು' ಎಂದು ಕೇಂದ್ರ ಬಂದರು ಹಾಗೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಮಂಗಳವಾರ ಮಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, 'ಕಾಮಗಾರಿಗೆ ಸಂಬಂಧಪಟ್ಟಂತೆ ಡಿಪಿಆರ್ ಸರ್ವೆ ಕೈಗೆತ್ತಿಕೊಳ್ಳಲಾಗಿದೆ. ಇದರಲ್ಲಿ 6 ಸುರಂಗಗಳು ಮತ್ತು 12 ಸೇತುವೆಗಳ ನಿರ್ಮಾಣಗೊಳ್ಳಲಿವೆ. ಯೋಜನೆಗೆ ಸುಮಾರು 12 ಸಾವಿರ ಕೋಟಿ ರೂ. ವೆಚ್ಚವಾಗಲಿದೆ' ಎಂದು ತಿಳಿಸಿದರು. [ಶೀಘ್ರದಲ್ಲೇ ಪುನಃ ಶಿರಾಡಿಯಲ್ಲಿ ವಾಹನ ಸಂಚಾರ ಬಂದ್]

nitin gadkari

'ಕೇಂದ್ರ ಸರ್ಕಾರದ ಸ್ಮಾರ್ಟ್‌ಪೋರ್ಟ್ ಸಿಟಿ ಯೋಜನೆಯಡಿ ನಿರ್ಮಾಣವಾಗಲಿರುವ ಬಳ್ಳಾರಿಯಿಂದ ಬೇಲೆಕೇರಿ ಬಂದರಿಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಹುಬ್ಬಳ್ಳಿ-ಅಂಕೋಲಾ ನಡುವೆ ಅರಣ್ಯಭಾಗದ ರಸ್ತೆ ವಿಸ್ತರಣೆ ಮಾಡಬೇಕು. ಈ ಕಾಮಗಾರಿಗೆ ಪರಿಸರ ಇಲಾಖೆಯ ಅನುಮತಿ ಸಿಕ್ಕಿಲ್ಲ' ಎಂದರು. [ಶಿರಾಡಿ ಘಾಟ್ ಸಂಚಾರಕ್ಕೆ ಮುಕ್ತ : ಚಿತ್ರಗಳು]

ಕಟ್ಟಡ ಲೋಕಾರ್ಪಣೆ : ನಿತಿನ್ ಗಡ್ಕರಿ ಅವರು ನಂತರ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಶ್ರೀರಾಮ ಪದವಿ ಮಹಾ ವಿದ್ಯಾಲಯದ ನೂತನ ಕಟ್ಟಡ ಲೋಕಾರ್ಪಣೆಗೊಳಿಸಿದರು. ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ, ಬಳ್ಳಾರಿ ಸಂಸದ ಶ್ರೀರಾಮುಲು, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ನಾಗರಾಜ ಶೆಟ್ಟಿ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

English summary
Union Minister for Transport, Highways Nitin Gadkari said, The government will start the proposed tunnel bypass road at Shiradi Ghat before December 2016. Shiradi Ghat is on the NH 75 and connects Bengaluru with Mangaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X