ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಮಾಜಿಗೆ ಹೋಗಲು ಬಿಡಲ್ಲ, ಸ್ಕಾರ್ಫ್ ಧರಿಸಲು ಒಪ್ಪಲ್ಲ!

By ಮಂಗಳೂರು ಪ್ರತಿನಿಧಿ
|
Google Oneindia Kannada News

ವಳಚ್ಚಿಲ್, ಆಗಸ್ಟ್ 27: ಮಂಗಳೂರಿನ ವಳಚ್ಚಿಲ್‌ನಲ್ಲಿರುವ ಶ್ರೀನಿವಾಸ್ ಕಾಲೇಜ್ ವಿದ್ಯಾರ್ಥಿಗಳು ತಮ್ಮ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿ ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವಿದ್ಯಾರ್ಥಿಗಳಿಗೆ ಸಾಥ್ ನೀಡಿತು.

Valacchil- protest

ವಲಚ್ಚಿನ್ ನ ಶ್ರೀನಿವಾಸ್ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಲಾಗುತ್ತಿದೆ, ಸ್ವಾತಂತ್ರ್ಯ ಕಸಿಯಲಾಗುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.[5 ಲಕ್ಷ ಮೌಲ್ಯದ ಆಭರಣ ಹಿಂತಿರುಗಿಸಿದ ಪ್ರಾಮಾಣಿಕ ಆಟೋ ಚಾಲಕ]

ಕಾಲೇಜಿನ ನಿಯಮದ ಪ್ರಕಾರ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಸ್ಕಾರ್ಫ್ ಧರಿಸಲು ಅನುಮತಿ ಇಲ್ಲ. ಹಾಗೆಯೇ ವಿದ್ಯಾರ್ಥಿಗಳು ಶುಕ್ರವಾರ ನಮಾಜ್ ಗೆ ತೆರಳಲು ಅವಕಾಶ ನೀಡುತ್ತಿಲ್ಲ, ಒಂದು ವೇಳೆ ನಿಯಮ ಮೀರಿದಲ್ಲಿ ವಿದ್ಯಾರ್ಥಿಗಳಿಂದ ಭಾರೀ ಪ್ರಮಾಣದಲ್ಲಿ ದಂಡ ವಸೂಲಿ ಮಾಡಲಾಗುತ್ತದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಧಾರ್ಮಿಕ ಸ್ವಾತಂತ್ರ್ಯ ಕಸಿತದ ಆರೋಪ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು, ಪೋಷಕರು ಪ್ರತಿಭಟನೆ ನಡೆಸಿದರು.

Valacchil-1

ಕಾಲೇಜಿನ ವಿರುದ್ದ ಘೋಷಣೆಗಳನ್ನು ಕೂಗುತ್ತಾ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಇದೇ ಕಾಲೇಜಿನಲ್ಲಿ ವಾರದ ಹಿಂದೆ ಒಬ್ಬ ಹುಡುಗನಿಗೆ 60 ವಿದ್ಯಾರ್ಥಿಗಳು ಕಿರುಕುಳ ಕೊಟ್ಟಿದ್ದರು. ಆದರೆ ಇದರ ವಿರುದ್ಧ ಕಾಲೇಜು ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.[ನನಗೆ ಮಂಗಳೂರು ಇಷ್ಟ. ಮಂಗಳೂರು ಹೆವೆನ್ : ರಮ್ಯಾ]

ಕಾಲೇಜಿನಲ್ಲಿ ನಡೆಯುವ ಕಿರುಕುಳ ಹಾಗೂ ಧಾರ್ಮಿಕ ಸ್ವಾತಂತ್ರ್ಯದ ಕಸಿತದ ಕುರಿತು ವಿದ್ಯಾರ್ಥಿಗಳು ಕಾಲೇಜಿನ ಆಡಳಿತ ಮಂಡಳಿಯ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ತಮ್ಮ ಅಳಲನ್ನು ವ್ಯಕ್ತಪಡಿಸಿದರು. ಕಾಲೇಜಿನ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.

English summary
Students protest against Mangaluru, Valacchil's Srinivasa College for not allowing to go for namaz and wearing scarf. Popular front of India organisation supports student protest.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X