ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರಾವಳಿ ಉತ್ಸವ ಮೈದಾನದಲ್ಲಿ ವಾಣಿಜ್ಯ ಚಟುವಟಿಕೆ ಇಲ್ಲ

By ಐಸಾಕ್ ರಿಚರ್ಡ್, ಮಂಗಳೂರು
|
Google Oneindia Kannada News

ಮಂಗಳೂರು, ಮಾ.4 : ಮಂಗಳೂರು ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಫೆಡರೇಶನ್ ಅಥ್ಲೆಟಿಕ್ ಕ್ರೀಡಾಪಟುಗಳಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಲ್ಲಿ 200 ಮೀಟರ್ ವಾಕಿಂಗ್ ಟ್ರ್ಯಾಕ್ ನಿರ್ಮಿಸುಲು ಉದ್ದೇಶಿಸಲಾಗಿದೆ. ಆದ್ದರಿಂದ, ವಾಣಿಜ್ಯ ಉದ್ದೇಶಗಳಿಗೆ ಮೈದಾನವನ್ನು ಇನ್ನು ಮುಂದೆ ಬಳಸುವಂತಿಲ್ಲ.

ಮಂಗಳೂರಿನಲ್ಲಿ ನಡೆಯುವ ರಾಷ್ಟ್ರೀಯ ಫೆಡರೇಶನ್ ಕಪ್ ಅಥ್ಲೆಟಿಕ್ ಚಾಂಪಿಯನ್‌ಷಿಪ್ ಬಗ್ಗೆ ಮಂಗಳವಾರ ಮಹಾನಗರ ಪಾಲಿಕೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಪಾಲಿಕೆ ಮೇಯರ್ ಮಹಾಬಲ ಮಾರ್ಲ ಮತ್ತು ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರು ವಾಕಿಂಗ್ ಟ್ರ್ಯಾಕ್ ನಿರ್ಮಿಸುವ ಕುರಿತು ಚರ್ಚೆ ನಡೆಸಿದರು.

Mangaluru City Corporation

ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಹಾಗೂ ಫೆಡರೇಶನ್ ಅಥ್ಲೆಟಿಕ್ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಕರಾವಳಿ ಉತ್ಸವ ಮೈದಾನದಲ್ಲಿ 200 ಮೀಟರ್ ಟ್ರ್ಯಾಕ್ ನಿರ್ಮಿಸಲಾಗುವುದು. ಮುಂದೆ ಇದನ್ನೇ ವಾಕಿಂಗ್ ಟ್ರ್ಯಾಕ್ ಆಗಿ ಬಳಸಬಹುದು ಎಂದು ಸಭೆಯಲ್ಲಿ ಚರ್ಚೆ ನಡೆಯಿತು. [ಮಂಗಳೂರು : ಕನಿಷ್ಠ ಆಟೋ ಪ್ರಯಾಣದರ 23 ರೂ.]

ಮೈದಾನದಲ್ಲಿ ಟ್ರ್ಯಾಕ್ ನಿರ್ಮಾಣ ಮಾಡಿದ ಬಳಿಕ ಶಾಲಾ ಕ್ರೀಡಾಕೂಟಗಳನ್ನು ಇಲ್ಲಿ ನಡೆಸಬಹುದಾಗಿದೆ. ಟ್ರ್ಯಾಕ್ ನಿರ್ಮಾಣ ಮಾಡಿದ ಬಳಿಕ ಮೈದಾನದಲ್ಲಿ ಉತ್ಸವ, ಸರ್ಕಸ್ ಸೇರಿದಂತೆ ಇತರ ವಾಣಿಜ್ಯ ಚಟುವಟಿಕೆಗಳನ್ನು ನಿಷೇಧಿಸಲಾಗುತ್ತದೆ. ಇದಕ್ಕೆ ಬೇರೆ ಸ್ಥಳವನ್ನು ನಿಗದಿ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. [ಮಂಗಳೂರು ಬಂದರಿನಲ್ಲಿ ಸ್ಮಾರ್ಟ್ ಸಿಟಿ ನಿರ್ಮಾಣ]

ಮೈದಾನ ಮೀಸಲಿಡಬೇಕು : ಕರಾವಳಿ ಉತ್ಸವ ಮೈದಾನವನ್ನು ಸಾಂಸ್ಕೃತಿಕ ಚಟುವಟಿಕೆಗಳಿಗೆ ಮಾತ್ರ ಬಳಸಬೇಕು. ಬೇರೆ ಉದ್ದೇಶಕ್ಕೆ ಬಳಸಬಾರದು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಸಭೆಯಲ್ಲಿ ಒತ್ತಾಯಿಸಿದರು.

English summary
Mangaluru City Corporation Mayor Mahabala Maarla said, separate walking track and warm up track for the people can be set up in Karavali exhibition grounds. Corporation ready to provide infrastructure facilities.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X