ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಾರ್ವಜನಿಕ ಆಸ್ತಿ ನಷ್ಟವನ್ನು ಬಂದ್ ಕರೆ ಕೊಟ್ಟವರಿಂದಲೇ ವಸೂಲಿ: ರೈ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಫೆಬ್ರವರಿ. 26 : ಕೇರಳ ರಾಜ್ಯದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕರ್ನಾಟಕ ಭೇಟಿ ವಿರೋಧಿಸಿ ಮಂಗಳೂರಿನಲ್ಲಿ ನಡೆಸಿದ ಬಂದ್‌ ವೇಳೆ ಆಗಿರುವ ಸಾರ್ವಜನಿಕ ಆಸ್ತಿ ಹಾನಿಯ ನಷ್ಟವನ್ನು ಬಂದ್‌ ಗೆ ಕರೆ ನೀಡಿದ ಸಂಘಟನೆಗಳಿಂದಲೇ ವಸೂಲಿ ಮಾಡಲು ಕ್ರಮ ಕೈಗೊಳ್ಳುವುದಾಗಿ ಅರಣ್ಯ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಭಾನುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಪಿಣರಾಯಿ ವಿಜಯನ್ ಅವರು ಸಂವಿಧಾನತ್ಮಕವಾಗಿ ಕೇರಳ ಮುಖ್ಯಮಂತ್ರಿಯಾಗಿ ಅಯ್ಕೆಯಾದವರು ರಾಜ್ಯಕ್ಕೆ ಬಂದಾಗ ಅವರಿಗೆ ಸೂಕ್ತ ಭದ್ರತೆ ಒದಗಿಸುವುದು ನಮ್ಮ ಜವಾಬ್ದಾರಿ ಆಗಿದ್ದರಿಂದ ಸಾಂವಿಧಾನಿಕ ಹೊಣೆಗಾರಿಕೆಯಲ್ಲಿ ಅವರಿಗೆ ಭದ್ರತೆ ಕಲ್ಪಿಸಲಾಗಿತ್ತು ಎಂದರು.[ಸಂವಿಧಾನ ಗೌರವಿಸದವರನ್ನು ಚಪ್ಪಲಿಯಲ್ಲಿ ಹೊಡೆಯಬೇಕು -ಖಾದರ್]

Who called for bandh on Feb 25 will have to pay for losses says Ramanath Rai

ಬಂದ್ ಕರೆ ಕಾರಣ ಪರೀಕ್ಷೆ ನಡೆಯುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ವಿದ್ಯಾರ್ಥಿಗಳು ಸಂಕಷ್ಟಕ್ಕೀಡಾಗಿದ್ದಾರೆ. ಸೂಕ್ತ ಸಾರಿಗೆ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಆರ್‌ಟಿಒ ಸಮರ್ಪಕವಾಗಿ ಕಾರ್ಯನಿರ್ವಹಿಸಿಲ್ಲ.

ಬಂದ್‌ ಸಂದರ್ಭದಲ್ಲಿ ಖಾಸಗಿ ಬಸ್ ಸಂಚಾರಕ್ಕೆ ಕ್ರಮ ಕೈಗೊಳ್ಳದ ಸಾರಿಗೆ ಇಲಾಖೆ ಅಧಿಕಾರಿಗಳ ವಿರುದ್ಧವೂ ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಶಿಸ್ತು ಕ್ರಮ ಕೈಗೊಳ್ಳಲು ಶಿಫಾರಸು ಮಾಡಲಾಗುವುದು ಎಂದರು.[ಗಾಂಧಿ ಹತ್ಯೆಯನ್ನು ಸಂಭ್ರಮಿಸಿದವರಿಂದ ದೇಶಭಕ್ತಿ ಕಲಿಯಬೇಕಿಲ್ಲ: ಕೇರಳ ಸಿಎಂ]

ಸಂಪುಟ ಪುನರ್ ರಚನೆ ಕುರಿತ ವದಂತಿಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, 'ಸಂಪುಟ ಪುನರ್ ರಚನೆ ಸೇರಿದಂತೆ ಯಾವುದೇ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಬದ್ಧವಾಗಿದ್ದೇನೆ. ಆದರೆ, ಈವರೆಗೆ ಸಂಪುಟ ಪುನರ್ ರಚನೆ ಕುರಿತ ಯಾವುದೇ ಮಾಹಿತಿ ನನಗೆ ಲಭ್ಯವಾಗಿಲ್ಲ ಎಂದಿದ್ದಾರೆ.

ಖಾದರ್ ವಿವಾದಾತ್ಮಕ ಹೇಳಿಕೆ ಸಮರ್ಥನೆ: ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಅವರ ವಿವಾದಾತ್ಮಕ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿದ ಸಚಿವ ರೈ, ಸಂವಿಧಾನಕ್ಕೆ ಅಪಚಾರ ಎಸಗುವವರಿಗೆ, ಮಹಾತ್ಮರ ಹತ್ಯೆಯಾದಾಗ ಸಿಹಿ ಹಂಚಿ ಸಂಭ್ರಮಿಸಿದವರಿಗೆ ಖಾದರ್ ಅವರ ಹೇಳಿಕೆ ಸರಿಯಾಗಿಯೇ ಇದೆ.

ಇಲ್ಲಿ ಅದಕ್ಕಿಂತಲೂ ಗಂಭೀರ ಹೇಳಿಕೆಗಳನ್ನು ಕೊಟ್ಟವರಿದ್ದಾರೆ. ಬೆಂಕಿ ಹಚ್ಚುವುದಾಗಿ ಕೆಲವರು ಹೇಳಿಕೆ ನೀಡಿರುವಾಗ ಈ
ಹೇಳಿಕೆ ಏನು ಮಹಾ ಎಂದು ಸಮರ್ಥಿಸಿಕೊಂಡರು.

English summary
Organisation which gave illegal bandh call violating Supreme Court directive will be made accountable for all the loss and damages to properties, said Dakshina Kannada in-charge Minister Ramanath Rai on February 26.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X