ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶೀನಾ ಬೋರಾ ಹತ್ಯೆ ಪೀಟರ್ ಬಂಧನ, ಕೋರ್ಟಿಗೆ ಹಾಜರು

By Mahesh
|
Google Oneindia Kannada News

ಮುಂಬೈ, ನ.20: ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಅವರ ಸಿಬಿಐ ದೋಷಾರೋಪಣ ಪಟ್ಟಿಯನ್ನು ಕೋರ್ಟಿಗೆ ಸಲ್ಲಿಸಿದೆ. ಇದಕ್ಕೂ ಮುನ್ನ ಇಂದ್ರಾಣಿ ಅವರ ಪತಿ 9 ‌ಎಕ್ಸ್ ಸುದ್ದಿ ಸಂಸ್ಥೆ ಸ್ಥಾಪಕ ಪೀಟರ್ ಅವರನ್ನು ಬಂಧಿಸಲಾಗಿದೆ.

ಪೀಟರ್ ಮುಖರ್ಜಿ ವಿರುದ್ಧ ಐಪಿಸಿ ಸೆಕ್ಷನ್ 302, 201, 34, 420, 364 ಹಾಗೂ 120 ಬಿ ಅನ್ವಯ ಪ್ರಕರಣ ದಾಖಲಿಸಿಕೊಂಡು ಕೋರ್ಟಿಗೆ ಹಾಜರುಪಡಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕನೇ ವ್ಯಕ್ತಿಯ ಬಂಧನ ಇದಾಗಿದೆ. [150 ಕೋಟಿ ರು ಗಾಗಿ ಶೀನಾ ಬೋರಾ ಹತ್ಯೆ ನಡೆಯಿತೆ?]

Sheena Bora murder case

ಪೀಟರ್ ರನ್ನು ಹಲವು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದ್ದರೂ ಆರೋಪಿ ಎಂದು ಇನ್ನೂ ಪರಿಗಣಿಸಿಲ್ಲ. ಅವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸುವ ತನಕ ವಿಚಾರಣೆಗೆ ಮಾತ್ರ ಬಂಧನ ಎಂದು ಮಾತ್ರ ನಂಬಬಹುದಾಗಿದೆ.

ಶೀನಾ ಬೋರಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದ್ರಾಣಿ ಅವರ ಕಾರು ಚಾಲಕ ಶ್ಯಾಮ್ ರಾಯ್, ಇಂದ್ರಾಣಿ ಅವರ ಮಾಜಿ ಪತಿ ಸಂಜೀವ್ ಖನ್ನಾರನ್ನು ಈಗಾಗಲೇ ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ.

2012ರ ಏ.24ರಂದು ಶೀನಾ ಬೋರಾ ಹತ್ಯೆಯಾಗಿತ್ತು. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀನಾ ಬೋರಾ ತಾಯಿ ಇಂದ್ರಾಣಿ ಮುಖರ್ಜಿ ಮತ್ತು ಇಂದ್ರಾಣಿ ಪತಿ ಪೀಟರ್ ಮುಖರ್ಜಿ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಇಂದ್ರಾಣಿ ಮಾಜಿ ಪತಿ ಸಂಜೀವ್ ಖನ್ನಾ ಮತ್ತು ಕಾರು ಚಾಲಕ ಶ್ಯಾಮ್ ರಾಯ್ ಈ ಪ್ರಕರಣದ ಸಹ ಆರೋಪಿಗಳಾಗಿದ್ದಾರೆ. ಪ್ರಕರಣದಲ್ಲಿ ಭಾರಿ ಮೊತ್ತದ ಹಣಕಾಸು ಅವ್ಯವಹಾರ ಇರುವುದರಿಂದ ತನಿಖೆಯನ್ನು ಸಿಬಿಐಗೆ ಮಹಾರಾಷ್ಟ್ರ ಸರ್ಕಾರ ವಹಿಸಿದೆ

English summary
In a fresh twist in the Sheena Bora murder case, Peter Mukherjea was today arrested by CBI, hours after it filed a chargesheet in which his wife Indrani Mukherjee, the mother of the victim born from her first marriage, and two others were accused of the crime.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X