ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೋದಿ ಭೇಟಿಗೆ ಅವಕಾಶ ನೀಡುತ್ತಿಲ್ಲ ಆರೋಪ ಸರಿಯಲ್ಲ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಡಿಸೆಂಬರ್ 22 : ಜೆಡಿಎಸ್ ಸದಸ್ಯತ್ವ ನೋಂದಣಿ ಅಭಿಯಾನ ಕಾರ್ಯಕ್ರಮಕ್ಕೆ ಮೈಸೂರಿಗೆ ಬಂದಿದ್ದ ಮಾಜಿ ಪ್ರಧಾನಿ ದೇವೇಗೌಡರು ಪ್ರಧಾನಿ ಮೋದಿ ಅವರ ಪರ ಬ್ಯಾಟ್ ಬೀಸಿದ್ದಾರೆ.

ಭೇಟಿಗೆ ಪ್ರಧಾನಿ ನರೇಂದ್ರ ಮೋದಿ ಅವಕಾಶ ನೀಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೂರುತ್ತಿರುವುದು ಸರಿಯಲ್ಲ. ಸಿಎಂ ಹಲವು ಬಾರಿ ಪ್ರಧಾನಿಯನ್ನು ಭೇಟಿ ಮಾಡಿದ್ದಾರೆ. ಭೇಟಿಗೆ ಅವಕಾಶ ನೀಡುತ್ತಿಲ್ಲ ಎಂದು ದೂರುವುದು ಸರಿಯಲ್ಲ. ತಮಿಳುನಾಡು ಪರಿಸ್ಥಿತಿಯೇ ಬೇರೆ ರೀತಿ ಇದೆ. ಹಾಗಾಗಿ ತಮಿಳುನಾಡಿನ ಸಿಎಂಗೆ ಭೇಟಿಗೆ ಅವಕಾಶ ನೀಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವುದು ತಪ್ಪು ಎಂದು ದೇವೇಗೌಡರು ಪ್ರತಿಪಾದಿಸಿದರು. ಜೆಡಿಎಸ್ ಸದಸ್ಯತ್ವ ನೋಂದಣಿ ಅಭಿಯಾನಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿ ಈ ಹೇಳಿಕೆ‌ ನೀಡಿದರು.[ಪ್ರಧಾನಿ ಮೋದಿ ಅವರಿಂದ ಕಾವೇರಿ ವಿವಾದ ಅಂತ್ಯ ಸಾಧ್ಯ : ದೇವೇಗೌಡ]

Allowing PM Modi to visit said by CM is not correct says h d devegowda

ನಮಗೆ ಗೆಲುವು ಖಚಿತ: ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್‍ ಗೆ ನಮ್ಮ ಬೆಂಬಲವಿಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡ ನಂಜನಗೂಡಿನಲ್ಲಿ ಹೇಳಿದರು. ಶ್ರೀನಿವಾಸ್ ಪ್ರಸಾದ್ ಬಿಜೆಪಿಗೆ ಸೇರುವುದರ ಬಗ್ಗೆ ಬಿಎಸ್ ವೈ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ದೇವೇಗೌಡ ಅವರು ಪ್ರತಿಕ್ರಯಿಸಿದರು.

ನಂಜನಗೂಡು ಉಪ ಚುನಾವಣೆಯಲ್ಲಿ ನಮಗೆ ಗೆಲುವು ಖಚಿತ. ನಮ್ಮ ಅಭ್ಯರ್ಥಿಯ ಹೆಸರನ್ನು ಕೆಲವೇ ದಿನಗಳಲ್ಲಿ ಬಹಿರಂಗಗೊಳಿಸಲಾಗುವುದು ಎಂದು ಹೇಳಿದರು.

English summary
Allowing PM Narendra Modi to visit said by CM Siddaramaiah is not correct says former PM H D devegowda in JDS member of the campaign in mysuru
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X