ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿಎಂಗೆ ತವರು ಕ್ಷೇತ್ರ ಮೈಸೂರಿನಲ್ಲಿ ಗೆಲುವು ಅನಿವಾರ್ಯ!

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು,ಫೆಬ್ರವರಿ,17: ವಿಧಾನಸಭಾ ಉಪ ಚುನಾವಣೆಯಲ್ಲಿ ಮುಖಭಂಗ ಅನುಭವಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಫೆಬ್ರವರಿ 20ರಂದು ನಡೆಯುವ ಜಿಪಂ ಮತ್ತು ತಾಪಂ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದು, ಕೊನೆಪಕ್ಷ ತವರು ಜಿಲ್ಲೆಯಾದ ಮೈಸೂರಲ್ಲಿ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಕೆಲ ದಿನಗಳಿಂದ ಜಿಲ್ಲೆಯಲ್ಲಿ ವಾಸ್ತವ್ಯ ಹೂಡಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ.

ಈಗಾಗಲೇ ಎಚ್.ಡಿ.ಕೋಟೆ, ಕೆ.ಆರ್.ನಗರ, ಹುಣಸೂರು, ಪಿರಿಯಾಪಟ್ಟಣ, ನಂಜನಗೂಡು ವ್ಯಾಪ್ತಿಯಲ್ಲಿ ಒಂದು ಹಂತದ ಪ್ರಚಾರ ಮುಗಿಸಿದ್ದಾರೆ. ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚಿಸುತ್ತಿರುವ ಅವರು ತಮ್ಮ ಸರ್ಕಾರದ ಸಾಧನೆಗಳನ್ನು ತೆರೆದಿಡುವ ಪ್ರಯತ್ನ ಮಾಡುತ್ತಿದ್ದಾರೆ. ಚುನಾವಣೆ ಪ್ರಯುಕ್ತ ಫೆ.20ರಂದು ಸಾರ್ವಜಿನಕ ರಜೆ ಘೋಷಿಸಲಾಗಿದೆ.[ಹೆಬ್ಬಾಳದಲ್ಲಿ ಸೋತ್ರೆ ನನ್ನ ರಾಜಕೀಯ ಭವಿಷ್ಯ ಮುಗಿದಂತೆ ಅಂದಿದ್ರು ಸಿದ್ದು]

Mysuru

ಈಗಾಗಲೇ ಜಿಲ್ಲೆಯಲ್ಲಿ ನೂರಾರು ರೈತರು ಸಾಲದ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಬಗ್ಗೆಯಾಗಲೀ, ರೈತರ ಆತ್ಮಹತ್ಯೆ ತಡೆಗೆ ಸರ್ಕಾರ ಕ್ರಮಕೈಗೊಂಡಿರುವ ಬಗ್ಗೆಯಾಗಲೀ ಎಲ್ಲೂ ಪ್ರಸ್ತಾಪಿಸುತ್ತಿಲ್ಲ. ಬದಲಿಗೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷವನ್ನು ತೆಗಳಿ ಚಪ್ಪಾಳೆ ಗಿಟ್ಟಿಸಿಕೊಳ್ಳುವುದಷ್ಟೇ ನಡೆಯುತ್ತಿದೆ.

ಬುಧವಾರ ತವರು ಕ್ಷೇತ್ರ ನಂಜನಗೂಡು ತಾಲೂಕಿನ ತಗಡೂರು ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸಿದ ಸಂದರ್ಭ ಮಾತನಾಡಿದ ಅವರು, ಜೆಡಿಎಸ್ ಮತ್ತು ಬಿಜೆಪಿ ನಾಯಕರು ಯಾವುದೇ ಅಭಿವೃದ್ದಿ ಕೆಲಸ ನಡೆಯುತ್ತಿಲ್ಲ ಎಂದು ಆರೋಪಿಸಿದ್ದಾರೆ.[ಹೆಬ್ಬಾಳದಲ್ಲಿ ಕಾಂಗ್ರೆಸ್ ಬೀಳಲು ಏಳೇ 7 ಕಾರಣಗಳು!]

Mysuru

ಜೆಡಿಎಸ್ ಮತ್ತು ಬಿಜೆಪಿ ಪಕ್ಷದವರಿಗೆ ಆರೋಪ ಮಾಡುವುದನ್ನು ಬಿಟ್ಟರೆ ಬೇರೇನೂ ಗೊತ್ತಿಲ್ಲ. ಆದರೆ ನಾವು ಅವರ ಹಾಗಲ್ಲ, ನಮ್ಮ ಸರ್ಕಾರ ಬಂದ ಮೇಲೆ ಎಲ್ಲ ಕಡು ಬಡವರ್ಗದ ಜನ ಅಭಿವೃದ್ಧಿ ಕಂಡಿದ್ದಾರೆ ಇದನ್ನು ಸಹಿಸಲಾಗದೇ ಅಪಪ್ರಚಾರ ಮಾಡುತ್ತಿದ್ದಾರೆ.[ಹೆಬ್ಬಾಳದಲ್ಲಿ ಸೋತರೂ ಕಾಂಗ್ರೆಸ್ಸಿಗೆ ಲಾಭ! ಹೇಗೆ?]

ಈ ಚುನಾವಣೆ ಪ್ರತಿಷ್ಠಿತ ಚುನಾವಣೆಯಾಗಿದ್ದು, ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ನನಗೆ ಶಕ್ತಿ ತುಂಬಬೇಕು ಎಂದು ಮನವಿ ಮಾಡಿದ್ದಾರೆ. ಒಟ್ಟಾರೆ ಚುನಾವಣೆಯ ದಿನಗಳು ಹತ್ತಿರ ಬರುತ್ತಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಸು ಹೆಚ್ಚಿನ ಕಾಳಜಿ ವಹಿಸಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುತ್ತಿರುವುದು ಕಂಡು ಬರುತ್ತಿದೆ.

English summary
Chief Minister Siddaramaiah take Karnataka Assembly Election promotion in Mysuru. That time he blamed JDS and Bjp party works.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X