ಸಾವಿನಲ್ಲೂ ಒಂದಾದ ಮೈಸೂರಿನ ತಂದೆ- ಮಗ
ಮೈಸೂರು, ಫೆಬ್ರವರಿ 4: ಯಾತ್ರೆಗೆಂದು ವೈಷ್ಣೋದೇವಿಗೆ ತೆರಳಿದ ನಂಜನಗೂಡಿನ ವ್ಯಕ್ತಿಯೋಬ್ಬರು ಮರಳಿ ಬರುವಾಗ ಅನಾರೋಗ್ಯದಿಂದ ಮೃತಪಟ್ಟಿದ್ದು, ತಂದೆಯ ಸಾವಿನ ಸುದ್ದಿ ತಿಳಿದು ಮಗನೂ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತರನ್ನು ನಂಜನಗೂಡು ಗಾಣಿಗರ ಸಂಘದ ಗೌರವಾಧ್ಯಕ್ಷ ಕೆ.ಮಾದಶೆಟ್ಟಿ(84) ಹಾಗೂ ಅವರ ಮಗ ಅರುಣ್ ಕುಮಾರ್ (43) ಎಂದು ಗುರುತಿಸಲಾಗಿದೆ. ಕೆ.ಮಾದಶೆಟ್ಟಿ ತೀರ್ಥಯಾತ್ರೆಗೆಂದು ಜಮ್ಮು ಮತ್ತು ಕಾಶ್ಮೀರದ ವೈಷ್ಣೋದೇವಿ ದರ್ಶನಕ್ಕೆ ತೆರಳಿದ್ದರು. ಗುರುವಾರ ಸಂಜೆ ದರ್ಶನ ಪಡೆದು ವಾಪಾಸ್ ಹಿಂತಿರುವಾಗ ಅನಾರೋಗ್ಯಕ್ಕೆ ತುತ್ತಾದ ಮಾದಶೆಟ್ಟಿ ಅವರನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಆದರೆ ಶುಕ್ರವಾರ ಮೃತಪಟ್ಟಿದ್ದಾರೆ.[ರು 5 ಸಾವಿರ ತೆಗೆಯಿತು, ವಿದೇಶಿ ವಿದ್ಯಾರ್ಥಿನಿಯ ಪ್ರಾಣ]

ಇತ್ತ ತಂದೆ ಸಾವಿನ ಸುದ್ದಿ ತಿಳಿದ ಮಗ ಅರುಣ್ಕುಮಾರ್ ಕೂಡ ಹೃದಯಾಘಾತಕ್ಕೆ ತುತ್ತಾಗಿ ಶುಕ್ರವಾರ ಬೆಳಗ್ಗೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಆದರೆ ಅವರೂ ಸಹ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಮೈಸೂರಿನ ಎಂಟೆಕ್ ವಿದ್ಯಾರ್ಥಿನಿ ನೇಣಿಗೆ ಶರಣು
ಮೈಸೂರು: ಮನೆಯ ನಾಯಿಗೆ ಮಾಂಸ ತರಲು ಒತ್ತಾಯ ಮಾಡಿ ಅಕ್ಕ ಹಾಗೂ ತನ್ನ ತಾಯಿಯನ್ನು ಹೊರ ಕಳುಹಿಸಿದ ಎಂಟೆಕ್ ಪದವೀಧರೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಎನ್.ಆರ್. ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.[ಪುತ್ರಿಗೆ ವಿಷವಿತ್ತು ಹತ್ಯೆಗೆ ಯತ್ನ: ತಂದೆ ನಿಧನ, ತಾಯಿ ಪಾರು]
ಕೆ.ರಮ್ಯಾ(25) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮೈಸೂರಿನ ಮಹಾನಗರ ಪಾಲಿಕೆಯ ಆಶ್ರಯ ಯೋಜನೆಯ ಯೋಜನಾಧಿಕಾರಿ ಕುಮಾರಸ್ವಾಮಿ ಎಂಬುವರ ಮಗಳಾಗಿರುವ ರಮ್ಯಾ, ಎಂಟೆಕ್ ಪದವೀಧರೆ. ಕೆಲಸ ಹುಡುಕುತ್ತಿದ್ದ ಈಕೆ ಮೊನ್ನೆ ಪಿಡಿಒ ಪರೀಕ್ಷೆ ಸಹ ಬರೆದಿದ್ದಳು. ಪರೀಕ್ಷೆ ಚೆನ್ನಾಗಿ ಮಾಡಿರುವುದಾಗಿ ತಂದೆಯ ಮುಂದೆ ಹೇಳಿಕೊಂಡಿದ್ದಳು. ಆದರೆ ಇದ್ದಕ್ಕಿದ್ದಂತೆ ಶುಕ್ರವಾರ ಮಧ್ಯಾಹ್ನ ಗಾಂಧಿ ನಗರದಲ್ಲಿರುವ ಮನೆಯಲ್ಲಿ ಆತ್ಮಹತ್ಯೆಗೆ ಮಾಡಿಕೊಂಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಇನ್ನು ಮಾರುಕಟ್ಟೆಯಿಂದ ಮನೆಗೆ ಬಂದ ಅಕ್ಕ ಹಾಗೂ ತಾಯಿ ರಮ್ಯಾಳ ರೂಮ್ಗೆ ಹೋಗಿ ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ರಮ್ಯಾಳ ದೇಹ ಪತ್ತೆಯಾಗಿದೆ. ತಮ್ಮನ್ನು ಕಾಡಿಸಲು ಈ ರೀತಿ ಮಾಡುತ್ತಿದ್ದಾಳೆ ಎಂದು ತಿಳಿದ ಅಕ್ಕ ಈ ರೀತಿ ಚೆನ್ನಾಗಿ ಕಾಣುತ್ತಿಯಾ ಎಂದು ಮೊಬೈಲ್ನಲ್ಲಿ ಫೋಟೋ ತೆಗೆದಿದ್ದಾಳೆ. ಆದರೆ ಅದಕ್ಕೆ ಪ್ರತಿಕ್ರಿಯೆ ನೀಡದ ರಮ್ಯಾ ದೇಹವನ್ನ ಮುಟ್ಟು ನೋಡಿದಾಗ ಆಕೆ ನಿಜವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಗೊತ್ತಾಗಿದೆ.
ತಕ್ಷಣ ಸುತ್ತಮುತ್ತಲ ಜನರ ಸಹಾಯದಿಂದ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವೈದ್ಯರು ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದಾರೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications