ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೆರೆಗಳಿಗೆ ನೀರು ಬಿಡದಿದ್ದರೆ ಹುಣಸೂರಿನಿಂದ ಬೆಂಗಳೂರಿಗೆ ಪಾದಯಾತ್ರೆ : ಎಚ್‍ಡಿಕೆ

By Sachhidananda Acharya
|
Google Oneindia Kannada News

ಮೈಸೂರು, ಜುಲೈ 25: "ಒಂದು ವಾರದೊಳಗೆ ಮೈಸೂರಿನ ಕೆಆರ್‍ಎಸ್ ಡ್ಯಾಮ್‍ನಿಂದ ಕೆರೆಗಳಿಗೆ ನೀರು ಬಿಡದಿದ್ದರೆ ಹುಣಸೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡಲಾಗುವುದು," ಎಂದು ರಾಜ್ಯ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ಡಿ. ಕುಮಾರಸ್ವಾಮಿ ಗುಡುಗಿದ್ದಾರೆ.

'ಸಮಾಜದಲ್ಲಿ ಒಡಕು ಮೂಡಿಸುವುದನ್ನು ಸಿಎಂ ನಿಲ್ಲಿಸಲಿ''ಸಮಾಜದಲ್ಲಿ ಒಡಕು ಮೂಡಿಸುವುದನ್ನು ಸಿಎಂ ನಿಲ್ಲಿಸಲಿ'

ಮೈಸೂರು ನಗರದ ಕಾಡಾ ಕಚೇರಿ ಮುಂಭಾಗ ಶಾಸಕ ಸಾ.ರಾ.ಮಹೇಶ್ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಅವರು ಮಾಧ್ಯಮಗಳ ಜತೆ ಅವರು ಮಾತನಾಡುತ್ತಿದ್ದರು

Kumaraswamy

ಅಣೆಕಟ್ಟಿನಿಂದ ನಾಲೆಗಳಿಗೆ ನೀರು ಬಿಡುವಂತೆ ಒತ್ತಾಯಿಸಿ ಕಳೆದೆರಡು ದಿನಗಳಿಂದ ಅಹೋರಾತ್ರಿ ಪ್ರತಿಭಟನೆ ನಡೆಯುತ್ತಿದೆ. ಆದರೆ ಈ ಬಗ್ಗೆ ರಾಜ್ಯ ಸರ್ಕಾರ ಕಿಂಚಿತ್ತೂ ಗಮನ ಹರಿಸಿಲ್ಲ. ರಾಜ್ಯದಲ್ಲಿ ಭೀಕರ ಬರಗಾಲವಿದೆ. ಜನ-ಜಾನುವಾರುಗಳಿಗೆ ಕುಡಿಯಲು ನೀರು ಕೊಡಿ ಎಂದು ಕೇಳುತ್ತಿದ್ದೇವೆ. ಮುಂದಿನ ಒಂದು ವಾರದೊಳಗೆ ನೀರು ಬಿಡದೇ ಇದ್ದಲ್ಲಿ ಬೆಂಗಳೂರಿಗೆ ಪಾದಯಾತ್ರೆ ನಡೆಸಲಾಗುವುದು," ಎಂದು ಎಚ್ಚರಿಕೆ ನೀಡಿದ್ದಾರೆ.

ಸರ್ಕಾರವು ನೀರನ್ನು ತಮಿಳುನಾಡಿಗೆ ಬಿಡುತ್ತಿದೆ. ಆದರೆ ನಮಗೆ ನೀಡುತ್ತಿಲ್ಲ. ಇದು ಯಾವ ನ್ಯಾಯ? ಎಂದು ಸರಕಾರವನ್ನು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

English summary
Former state chief minister and JDS state president H. D. Kumaraswamy thunders against state government. He threatens of organises Padaytra from Hunsur to Bengaluru, if the water does not relese to lakes within a week from the KRS dam of Mysor.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X