ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜ್ಯ ಸರ್ಕಾರ ಬದುಕಿದೆಯೋ, ಸತ್ತಿದೆಯೋ?: ಕುಮಾರಣ್ಣ ಗುಡುಗು

ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರ ಸ್ವಾಮಿ. ಮಂಗಳೂರು ಕೋಮು ಗಲಭೆ ಬಗ್ಗೆ ಸರ್ಕಾರದ ನೀರಸ ಪ್ರತಿಕ್ರಿಯೆ ಎಂದು ಆರೋಪಿಸಿದ ಮಾಜಿ ಮುಖ್ಯಮಂತ್ರಿ.

By Yashaswini
|
Google Oneindia Kannada News

ಮೈಸೂರು, ಜುಲೈ 10: ದಕ್ಷಿಣ ಕನ್ನಡದಲ್ಲಿ ಇತ್ತೀಚೆಗೆ ನಡೆದ ಕೋಮು ಗಲಭೆಗಳಿಗೆ ಸಂಬಂಧಪಟ್ಟಂತೆ ಸರ್ಕಾರ ಸ್ಪಂದಿಸುತ್ತಿರುವ ರೀತಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಕಿಡಿಕಾರಿದ್ದಾರೆ.

ಮೈಸೂರು ವಿಶ್ವವಿದ್ಯಾಲಯದ ಮಾಜಿ ಉಪ ಕುಲಪತಿ ಪ್ರೊ. ಕೆ.ಎಸ್. ರಂಗಪ್ಪ ಅವರನ್ನು ಪಕ್ಷಕ್ಕೆ ಅಧಿಕೃತವಾಗಿ ಆಹ್ವಾನಿಸಿದ ಅವರು, ಆ ಕಾರ್ಯಕ್ರಮದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.

ಜೆಡಿಎಸ್ ನಲ್ಲಿ ಸೂಟ್ ಕೇಸ್ ಸಂಸ್ಕೃತಿ ಇದ್ದಿದ್ದು ನಿಜ: ಎಚ್ ಡಿ ಕೆಜೆಡಿಎಸ್ ನಲ್ಲಿ ಸೂಟ್ ಕೇಸ್ ಸಂಸ್ಕೃತಿ ಇದ್ದಿದ್ದು ನಿಜ: ಎಚ್ ಡಿ ಕೆ

HD Kumaraswamy lashes out against Government regarding Communal riots in Mangaluru recently

ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಆರೆಸ್ಸೆಸ್ ಕಾರ್ಯಕರ್ತರ ಹತ್ಯೆ ಹಾಗೂ ಮುಸ್ಲಿ ಯುವಕರ ಹತ್ಯೆ ಪ್ರಕರಣಗಳ ಬಗ್ಗೆ ತನಿಖೆಯಾಗಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಮಂಗಳೂರು ಘಟನೆಗಳನ್ನು ನೋಡಿದರೆ, ರಾಜ್ಯದಲ್ಲಿ ಸರ್ಕಾರ ಬದುಕಿದೆಯೋ, ಸತ್ತಿದೆಯೋ ಎಂಬ ಅನುಮಾನ ಬರುತ್ತದೆ ಎಂದು ಬೇಸರಿಸಿದರು.

ಸೂಟ್ ಕೇಸ್ ತಗೊಳ್ತಿದ್ದವರೀಗ ಪಕ್ಷ ಬಿಟ್ಟಿದ್ದಾರೆ: ಎಚ್ ಡಿಕೆಸೂಟ್ ಕೇಸ್ ತಗೊಳ್ತಿದ್ದವರೀಗ ಪಕ್ಷ ಬಿಟ್ಟಿದ್ದಾರೆ: ಎಚ್ ಡಿಕೆ

ಮಂಗಳೂರಿನ ಕೋಮು ಗಲಭೆಗಳ ಬಗ್ಗೆ ತನಿಖೆಗೆ ಆಗ್ರಹಿಸಿ, ಬಿಜೆಪಿಯ ಮಾಜಿ ಸಚಿವೆ ಶೋಭಾ ಕರಂದ್ಲಾಜೆ ನಡೆಸುತ್ತಿರುವ ಪ್ರತಿಭಟನೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಕುಮಾರ ಸ್ವಾಮಿ, ''ಪ್ರತಿಭಟನೆಯಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಪಕ್ಷಾತೀತವಾಗಿ ಎಲ್ಲರೂ ಸಮಸ್ಯೆ ಇತ್ಯರ್ಥಕ್ಕೆ ಮುಂದಾಗಬೇಕು. ರಾಷ್ಟ್ರೀಯ ಪಕ್ಷಗಳು ಈ ರೀತಿ ಬೇಜವಬ್ದಾರಿಯಾಗಿ ವರ್ತಿಸುವುದು ಸರಿಯಲ್ಲ'' ಎಂದರು.

English summary
JDS state President HD Kumaraswamy lashed out against the state government in Myruru on July 10, 2017. He alleged that, the government is not responding properly in the communal riots that occurred in Mangaluru in recent past.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X