ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಂಜನಗೂಡಿನಲ್ಲಿ ಯಾವುದೇ ಅಭ್ಯರ್ಥಿ ಕಣಕ್ಕಿಳಿಸಿಲ್ಲ: ಎಚ್ಡಿಕೆ

By Ananthanag
|
Google Oneindia Kannada News

ರಾಮನಗರ/ ಮೈಸೂರು ಜನವರಿ 21: ನಂಜನಗೂಡು ಉಪ ಚುನಾವಣೆಯಲ್ಲಿ ಜೆಡಿಎಸ್ ನಿಂದ ಯಾವ ಅಭ್ಯರ್ಥಿಯೂ ಕಣಕ್ಕಿಳಿಯುತ್ತಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.

ಉಪಚುನಾವಣೆಗೆ ಜೆಡಿಎಸ್ ನಿಂದ ಅಭ್ಯರ್ಥಿ ಪಟ್ಟಿಯನ್ನು ಸಿದ್ಧಪಡಿಸಿಲ್ಲ. ನಂಜನಗೂಡು ಉಪಚುನಾವಣೆಗೆ ಕುರಿತು ಕಳಲೆ ಕೇಶವಮೂರ್ತಿ ಅವರನ್ನು ಘೋಷಿಸಲಾಗಿತ್ತು. ಅದರೆ ಅವರನ್ನು ಕಾಂಗ್ರೆಸ್ ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ಮುಂದಾಗಿದೆ. ಇನ್ನು ಚುನಾವಣೆಯಾದರೆ ಕೇವಲ ಆರು ತಿಂಗಳು ಅಧಿಕಾರದಲ್ಲಿರುತ್ತದೆ. ಹೀಗಾಗಿ ಚುನಾವಣೆಯಲ್ಲಿ ಸ್ಪರ್ಧಿಸದಿರುಲು ನಿರ್ಧರಿಸಲಾಗಿದೆ. ಗೊಂದಲಗಳಿಗೆ ತೆರೆ ಎಳೆಯಲು ಜ.24ರಂದು ಬೆಂಗಳೂರಿನಲ್ಲಿ ಕೋರ್ ಕಮಿಟಿ ಸಭೆ ನಡೆಯಲಿದೆ ಎಂದರು.[ಭಿನ್ನಮತಿಯರ ವಿಚಾರದಲ್ಲಿ ಕಾರ್ಯಕರ್ತರ ಅಭಿಪ್ರಾಯ ಮುಖ್ಯ: ಎಚ್ಡಿಕೆ]

In the by-election no any cadidate are selected by JDS say HDK

ನಂಜನಗೂಡು ಉಪಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ

ಮೈಸೂರು: ನಾನಾಗಲಿ, ನನ್ನ ಮಗನಾಗಲಿ ನಂಜನಗೂಡು ಉಪಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ ನಾವು ಟಿಕೇಟ್ ಕೇಳಿಲ್ಲ. ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

ಎಪಿಎಂಸಿ ಚುನಾವಣೆ ಫಲಿತಾಂಶಕ್ಕೆ ಸಂಬಂಧಿಸಿದಂತೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಮಹದೇವಪ್ಪ ಎಲ್ಲ ಕಡೆಯೂ ಕಾಂಗ್ರೆಸ್ ಗೆಲುವು ಸಾಧಿಸಿದೆ. ಆದರೆ ಮೈಸೂರು ತಾಲೂಕು ಮಾತ್ರ ನಮ್ಮ ಕೈತಪ್ಪಿದೆ. ಮುಂದಿನ ದಿನಗಳಲ್ಲಿ ಅದನ್ನೂ ನಮ್ಮ ವಶಕ್ಕೆ ಪಡೆದುಕೊಳ್ಳಲು ಯತ್ನಿಸಲಾಗುವುದು ಎಂದು ತಿಳಿಸಿದರು.

In the by-election no any cadidate are selected by JDS say HDK

ಇದೇ ವೇಳೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾಗದ ರಹಿತ ಕಚೇರಿ ವ್ಯವಸ್ಥೆಗೆ ಚಾಲನೆ ಕೂಡ ನೀಡಲಾಯಿತು. ಇದೇ ವೇಳೆ ಮಾತನಾಡಿದ ಅವರು, ಆಡಳಿತದಲ್ಲಿ ಪಾರದರ್ಶಕತೆ ತರಬೇಕೆನ್ನುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಸಾರ್ವಜನಿಕರಿಗೆ ಇದರಿಂದ ಉಪಯೋಗವಾಗಲಿದೆ ಎಂದು ತಿಳಿಸಿದರು.

English summary
In the by-election no any candidate are selected by JDS says former CM HD Kumaraswamy, and in Mysuru says HC Mahadevappa 'I will not contest by-election in Nanjanagudu'.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X