ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ರೊ.ಕೆ.ಎಸ್.ರಂಗಪ್ಪ ವಿರುದ್ಧದ ಎಫ್‌ಐಆರ್‌ಗೆ ತಡೆ

|
Google Oneindia Kannada News

ಮೈಸೂರು, ಸೆಪ್ಟೆಂಬರ್ 01 : ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಅವರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್‌ ತಡೆ ನೀಡಿದೆ. ಕೆ.ಎಸ್.ರಂಗಪ್ಪ ಸೇರಿ ಏಳು ಮಂದಿ ವಿರುದ್ಧ ಮೈಸೂರಿನ ಜಯಲಕ್ಷ್ಮೀಪುರಂ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್‌ಒಯು) ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದಂತೆ ಪ್ರೊ.ಕೆ.ಎಸ್.ರಂಗಪ್ಪ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ರಾಜ್ಯಪಾಲರ ಸೂಚನೆಯಂತೆ ಹಣಕಾಸು ಅಧಿಕಾರಿ ಖಾದರ್ ಪಾಷ ಅವರು ಜಯಲಕ್ಷ್ಮೀಪುರಂ ಠಾಣೆಯಲ್ಲಿ ದೂರು ನೀಡಿದ್ದರು.[ಮೈಸೂರು ವಿಶ್ವವಿದ್ಯಾಲಯದ ವೆಬ್ ಸೈಟ್ ಹ್ಯಾಕ್]

Karnataka high court stays FIR against Prof KS Rangappa

ತಮ್ಮ ವಿರುದ್ಧ ದಾಖಲಾದ ಎಫ್‌ಐಆರ್ ರದ್ದು ಮಾಡುವಂತೆ ಕೋರಿ ಕೆ.ಎಸ್.ರಂಗಪ್ಪ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಗುರುವಾರ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಎಫ್‌ಐಆರ್‌ಗೆ ತಡೆ ನೀಡಿ ಆದೇಶ ಹೊರಡಿಸಿದೆ.

ಏಳು ಜನರ ವಿರುದ್ಧ ಎಫ್ಐಆರ್ : ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದಂತೆ ಪ್ರೊ.ಕೆ.ಎಸ್‌.ರಂಗಪ್ಪ, ವಿಶ್ರಾಂತ ಕುಲಪತಿ ಪ್ರೊ.ಎಂ.ಜಿ.ಕೃಷ್ಣನ್, ಅಧ್ಯಯನ ಕೇಂದ್ರಗಳ ಡೀನ್‌ ಪ್ರೊ.ಟಿ.ಡಿ.ದೇವೇಗೌಡ, ಉಪಕುಲಸಚಿವ ರಾಮನಾಥನ್‌, ಕುಲಸಚಿವ ಪ್ರೊ.ಪಿ.ಎಸ್‌.ನಾಯಕ್‌, ಹಿಂದಿನ ಕುಲಸಚಿವ ಪ್ರೊ.ಬಿ.ಎಸ್‌.ವಿಶ್ವನಾಥ ಹಾಗೂ ಐಟಿ ವಿಭಾಗದ ನಿರ್ದೇಶಕ ಡಾ.ಕಮಲೇಶ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

English summary
Karnataka High Court has stayed a FIR registered against Mysuru university Vice-Chancellor Prof.K.S Rangappa for alleged misappropriation of funds in the Karnataka State Open University (KSOU).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X