ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೋದಿ ಕರ್ನಾಟಕ ಭೇಟಿ : ಕಾರ್ಯಕ್ರಮಗಳೇನು?

|
Google Oneindia Kannada News

ಮೈಸೂರು, ಜನವರಿ 01 : ಎರಡು ದಿನಗಳ ಭೇಟಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಆಗಮಿಸುತ್ತಿದ್ದು, ಶನಿವಾರ ಮತ್ತು ಭಾನುವಾರ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಂಗಳೂರು, ತುಮಕೂರು ಮತ್ತು ಮೈಸೂರಿಗೆ ಮೋದಿ ಭೇಟಿ ನೀಡಲಿದ್ದಾರೆ.

ಜನವರಿ 2ರ ಶನಿವಾರ ಮೈಸೂರಿಗೆ ಆಗಮಿಸುವ ಮೋದಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಜನವರಿ 3ರ ಭಾನುವಾರ ಮೈಸೂರು, ತುಮಕೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಿವೆ. ಭಾನುವಾರ ಅವರು ಪ್ರವಾಸ ಮುಗಿಸಿ ದೆಹಲಿಗೆ ವಾಪಸ್ ಆಗಲಿದ್ದಾರೆ. [ಮೈಸೂರು ವಿಜ್ಞಾನ ಹಬ್ಬಕ್ಕೆ 10,000 ಮಂದಿ ಬರುವ ನಿರೀಕ್ಷೆ]

narendra modi

ಜನವರಿ 2 : ಶನಿವಾರ ಸಂಜೆ ಮೈಸೂರಿಗೆ ಆಗಮಿಸಲಿರುವ ನರೇಂದ್ರ ಮೋದಿ ಅವರು ಶ್ರೀ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮಿಜಿ ಅವರ ಹೊಸ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ. ಸಂಜೆ 6.15ಕ್ಕೆ ಸುತ್ತೂರು ಮಠದಲ್ಲಿ ಜಗದ್ಗುರು ದಿವಂಗತ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಜಿ ಅವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. [ತುಮಕೂರಿಗೆ HAL ಘಟಕದ ಬಗ್ಗೆ ತಿಳಿಯಿರಿ]

ಜನವರಿ 3 : ಜನವರಿ 3ರ ಭಾನುವಾರ ಮೈಸೂರು ವಿಶ್ವವಿದ್ಯಾಲಯದಲ್ಲಿ 103ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಅಧಿವೇಶನವನ್ನು ಮೋದಿ ಉದ್ಘಾಟಿಸಲಿದ್ದಾರೆ. ಅಲ್ಲಿಂದ ತುಮಕೂರಿಗೆ ತೆರಳಿ ಎಚ್‌ಎಎಲ್‌ ಹೆಲಿಕಾಪ್ಟರ್‌ ಘಟಕ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಿದ್ದಾರೆ.

ತುಮಕೂರಿನಿಂದ ಬೆಂಗಳೂರಿಗೆ ವಾಪಸ್ ಆಗುವ ಮೋದಿ, ಅಂತಾರಾಷ್ಟ್ರೀಯ ಯೋಗ ಸಂಶೋಧನಾ ಸಮ್ಮೇಳವನ್ನು ಉದ್ಘಾಟಿಸಲಿದ್ದು, ನಂತರ ದೆಹಲಿಗೆ ವಾಪಸ್ ಆಗಲಿದ್ದಾರೆ. [ಪಿಟಿಐ ಚಿತ್ರ]

English summary
Indian Prime Minister Narendra Modi will visit Karnataka on January 2 and 3, 2016. Modi will visit Mysuru, Tumakuru and Bengaluru during his two days visit.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X