ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಂಬಳ, ಕಾವೇರಿ, ಮಹದಾಯಿ ಕುರಿತು ಸುಗ್ರೀವಾಜ್ಞೆ ಹೊರಡಿಸಲು ಒತ್ತಾಯ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜನವರಿ 22 : ತಮಿಳುನಾಡಿನಲ್ಲಿ ಜಲ್ಲಿಕಟ್ಟು ನಡೆಸಲು ಸುಗ್ರೀವಾಜ್ಞೆ ಹೊರಡಿಸಿರುವ ಹಿನ್ನೆಲೆಯಲ್ಲಿ, ಕರ್ನಾಟಕದಲ್ಲೂ ಕಂಬಳ ನಡೆಸುವಂತೆ ಹಾಗೂ ಕಾವೇರಿ, ಮಹದಾಯಿ ವಿಚಾರವಾಗಿ ಸುಗ್ರೀವಾಜ್ಞೆ ಹೊರಡಿಸುವಂತೆ ಆಗ್ರಹಿಸಿ ಕರ್ನಾಟಕ ಕಾವಲು ಪಡೆ ವತಿಯಿಂದ ಪ್ರತಿಭಟನೆ ನಡೆಯಿತು.

ಮೈಸೂರು ನ್ಯಾಯಾಲಯದ ಬಳಿಯಿರುವ ಮಹಾತ್ಮಾ ಗಾಂಧೀ ಪ್ರತಿಮೆ ಎದುರು ಕರ್ನಾಟಕ ಕಾವಲು ಪಡೆ ಭಾನುವಾರ ಕಂಬಳದಲ್ಲಿ ಪಾಲ್ಗೊಳ್ಳುವ ಕೋಣಗಳನ್ನು ಸಾಂಕೇತಿಕವಾಗಿ ತಂದು ಪ್ರತಿಭಟನೆ ನಡೆಸಿದರು.

ಮಹದಾಯಿ ಮತ್ತು ಕಾವೇರಿ ವಿಚಾರಗಳಲ್ಲಿ ಕೇಂದ್ರ ಸರ್ಕಾರ ಕರ್ನಾಟಕದ ಪರವಾಗಿ ಕಾಳಜಿ ತೋರಿಸಿಲ್ಲ. ರಾಜ್ಯದ ಹಿತಕ್ಕಾಗಿ ಹಲವಾರು ಬಾರಿ ಮುಖ್ಯಮಂತ್ರಿಗಳು ಸಮಯ ಕೋರಿದರೂ ಸಮಯ ನೀಡಿಲ್ಲ.

Ordinance issued a Kambala, Kaveri Mahadayi issues mysuru karnataka kavalu pade insist

ಇದೀಗ ರಾಜ್ಯ-ರಾಜ್ಯಗಳ ನಡುವೆ ಮಲತಾಯಿ ಧೋರಣೆ ತಾಳಿದೆ ಎಂದು ಪ್ರತಿಭಟನಾಕಾರರು ಕೇಂದ್ರ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರಕ್ಕೆ ಒಬ್ಬ ಸಂಸದನನ್ನು ನೀಡದ ತಮಿಳುನಾಡು ಸರ್ಕಾರದ ಮುಂದೆ ಮಂಡಿಊರಿದೆ. ತಮಿಳುನಾಡಿನ ಜಲ್ಲಿಕಟ್ಟಿಗೆ ಸುಗ್ರೀವಾಜ್ಞೆ ಹೊರಡಿಸಿರುವುದು ಅನುಮಾನಕ್ಕೆ ಎಡೆಮಾಡಿದೆ.

ಕೇಂದ್ರ ಸರ್ಕಾರ ಕರಾವಳಿಯ ಕಂಬಳ ಕ್ರೀಡೆಗೂ ಹಾಗೂ ಕಾವೇರಿ ಮತ್ತು ಮಹದಾಯಿ ವಿಚಾರದಲ್ಲೂ ಸುಗ್ರೀವಾಜ್ಞೆ ಹೊರಡಿಸಬೇಕು ಎಂದು ಒತ್ತಾಯಿಸಿದರು. ರಾಜ್ಯ ರಾಜ್ಯಗಳ ನಡುವೆ ತಾರತಮ್ಯ ತೋರಿಸಬಾರದು ಎಂದರು.

ಪ್ರತಿಭಟನೆಯಲ್ಲಿ ಚಂದ್ರಶೇಖರ್, ರಾಜ್ಯಾಧ್ಯಕ್ಷ ಎಂ.ಮೋಹನಕುಮಾರ್, ಗಿರೀಶ್ ನಾಯ್ಕ, ರಾಜ್ಯಕಾರ್ಯದರ್ಶಿ ಎಂ.ಮಂಜುನಾಥ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

English summary
After the success of Jallikattu, now Mysuru Karnataka Kavalu Pade insist of a ordinance issued a Kambala,Mahadayi, Kaveri issues.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X