ಮೈಸೂರಿಗರು ಶೀಘ್ರದಲ್ಲೇ ಸೈಕಲ್ ಸವಾರಿ ಮಾಡಬಹುದು
ಮೈಸೂರು, ಮೇ 18 : ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೈಕಲ್ ಬಳಕೆ ಮಾಡುವುದನ್ನು ಉತ್ತೇಜಿಸುವ ಸಲುವಾಗಿ ಮೈಸೂರು ಜಿಲ್ಲಾಡಳಿತ ಸಾರ್ವಜನಿಕ ಸೈಕಲ್ ಸೇವೆ (ಪಿಬಿಎಸ್) ಸೇವೆಯನ್ನು ನಗರದಲ್ಲಿ ಆರಂಭಿಸಲಿದೆ. ಈ ಯೋಜನೆಗೆ ಸುಮಾರು 19 ಕೋಟಿ ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿದೆ.
ಸಾರ್ವಜನಿಕ ಸೈಕಲ್ ಸೇವೆ ( public bicycle service- PBS) ಆರಂಭಕ್ಕೆ ಜಿಲ್ಲಾಡಳಿತ ಸಿದ್ಧತೆ ಆರಂಭಿಸಿದ್ದು, 2016ರ ಫೆಬ್ರವರಿಯಲ್ಲಿ ಮೈಸೂರಿಗರು ಸೈಕಲ್ ಮೂಲಕ ಸಂಚರಿಸಬಹುದಾಗಿದೆ. 550 ಸೈಕಲ್ಗಳು ರಸ್ತೆಗೆ ಇಳಿಯಲಿದ್ದು, 52 ನಿಲ್ದಾಣಗಳನ್ನು ಸ್ಥಾಪನೆ ಮಾಡಲಾಗುತ್ತದೆ.[ಕಳೆದುಹೋದ ಬಾಲ್ಯ ಮರಳಿದರೆ ಎಷ್ಟು ಚೆನ್ನ]

ಪಿಬಿಎಸ್ ಮ್ಯಾನೇಜ್ಮೆಂಟ್, ಟ್ರಾಕ್ ಗುರುತಿಸುವಿಕೆ, ಕಂಟ್ರೋಲ್ ರೂಂ ಸ್ಥಾಪನೆ, ನಿಲ್ದಾಣಗಳ ಗುರುತಿಸುವಿಕೆ ಮುಂತಾದ ಕಾರ್ಯಗಳನ್ನು ಆರಂಭಿಸಲಾಗಿದೆ. ನಗರ ಭೂಸಾರಿಗೆ ನಿರ್ದೇಶನಾಲಯ (ಡಲ್ಟ್) ಈ ಯೋಜನೆಯನ್ನು ನಿರ್ವಹಣೆ ಮಾಡಲಿದೆ. [ಬೆಂಗಳೂರು ದೇಶದ ಸೈಕಲ್ ರಾಜಧಾನಿಯಾಗಲಿ!]
ಎಲ್ಲೆಲ್ಲಿ ಸೈಕಲ್ ಲಭ್ಯ : ಪ್ರಾಯೋಗಿಕವಾಗಿ ರೇಸ್ ಕೋರ್ಸ್, ಕುಕ್ಕರಹಳ್ಳಿ ಕೆರೆ, ಅರಮನೆ, ಚಾಮುಂಡಿ ಬೆಟ್ಟ, ಲಷ್ಕರ್ ಮೊಹಲ್ಲಾ, ಬಸ್ ನಿಲ್ದಾಣ ಮುಂತಾದ ಸ್ಥಳಗಳಲ್ಲಿ ಸೈಕಲ್ ಸಾರ್ವಜನಿಕರಿಗೆ ಲಭ್ಯವಾಗಲಿದೆ. ಪ್ರಾಯೋಗಿಕ ಸೇವೆಗೆ ಸಿಗುವ ಪ್ರತಿಕ್ರಿಯೆ ನೋಡಿಕೊಂಡು ಬೇರೆ ಸ್ಥಳಗಳಲ್ಲಿ ಸೇವೆ ವಿಸ್ತರಣೆ ಮಾಡಲು ಉದ್ದೇಶಿಸಲಾಗಿದೆ.
ಟ್ರಾಕ್ ಗುರುತಿಸುವಿಕೆ : ಯಾವ ಪ್ರದೇಶದಲ್ಲಿ ಸೈಕಲ್ ಟ್ರಾಕ್ ನಿರ್ಮಾಣ ಮಾಡಬಹುದು ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಮೊದಲು ವಿದೇಶಿಯರು ಹೆಚ್ಚಾಗಿ ಸಂಚರಿಸುವ ಪ್ರದೇಶಗಳಲ್ಲಿ ಟ್ರಾಕ್ ನಿರ್ಮಾಣ ಮಾಡಲು ಜಿಲ್ಲಾಡಳಿತ ಮುಂದಾಗಿದೆ.
-
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications