ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪೊಲೀಸ್ ಶಿಕ್ಷಣ ಸಮುಚ್ಛಯಕ್ಕೆ 22.5ಕೋಟಿ ರೂ ಅನುದಾನ : ಸಿದ್ದರಾಮಯ್ಯ

|
Google Oneindia Kannada News

ಮೈಸೂರು, ಅಕ್ಟೋಬರ್, 13 : ಮೈಸೂರಿನಲ್ಲಿ ಪೊಲೀಸ್ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ನಿಗಮದಿಂದ ಶಿಕ್ಷಣ ಸಮುಚ್ಛಯ ನಿರ್ಮಾಣಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ಮೊದಲ ಹಂತದಲ್ಲೇ 22.5 ಕೋಟಿ ರೂ ಅನುದಾನ ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಇಲ್ಲಿ ತಿಳಿಸಿದ್ದಾರೆ.

ಮೈಸೂರಿನ ಜಲಪುರಿ ಪೊಲೀಸ್ ಪಬ್ಲಿಕ್ ಶಾಲೆಯ ಸಮುಚ್ಛಯದಲ್ಲಿ ನೂತನವಾಗಿ ನಿರ್ಮಿಸಿರುವ ನರ್ಸರಿ ಶಾಲಾ ಕಟ್ಟಡ ಉದ್ಘಾಟಿಸಿ ಸಿದ್ದರಾಮಯ್ಯ ಅವರು ಮಾತನಾಡಿದರು.

ಪೊಲೀಸ್ ಶಿಕ್ಷಣ ಸಮುಚ್ಛಯಕ್ಕೆ 22.5ಕೋಟಿ ರೂ ಅನುದಾನ : ಸಿಎಂ ಸಿದ್ದರಾಮಯ್ಯ

ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳ ಮಕ್ಕಳಿಗೆ ಉತ್ತಮ ಶಾಲೆಗಳಲ್ಲಿ ಪ್ರವೇಶ ದೊರೆಯುತ್ತದೆ, ಆದರೆ ಕೆಳ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ ಪಡೆಯುವುದು ಇಂದಿನ ಪರಿಸ್ಥಿತಿಯಲ್ಲಿ ಕಷ್ಟ ಎಂಬುದು ತಿಳಿದಿದೆ ಎಂದು ಅವರು ಹೇಳಿದರು. [ಸಿಎಂ ಸಿದ್ದರಾಮಯ್ಯ ವಿರುದ್ಧ ಶ್ರೀನಿವಾಸ ಪ್ರಸಾದ್ ವಾಗ್ದಾಳಿ]

ಪೊಲೀಸ್ ಶಿಕ್ಷಣ ಸಮುಚ್ಛಯಕ್ಕೆ 22.5ಕೋಟಿ ರೂ ಅನುದಾನ : ಸಿಎಂ ಸಿದ್ದರಾಮಯ್ಯ

ಈ ಪೋಷಕರ ಮಕ್ಕಳಿಗೂ ಉತ್ತಮ ಗುಣಮಟ್ಟದ ಹಾಗೂ ಮೌಲ್ಯಯುತವಾದ ಶಿಕ್ಷಣ ಸಿಗಬೇಕು ಎಂದು ಅವರು ಹೇಳಿದರು. ಈ ಶಾಲೆ ಆರಂಭವಾದಾಗ 179 ಮಕ್ಕಳು ಇದ್ದರು, ಈಗ 1200 ಮಕ್ಕಳು ಕಲಿಯುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಸ ವ್ಯಕ್ತಪಡಿಸಿದರು.

ಪ್ರಾಥಮಿಕ ಪೂರ್ವ ಶಾಲೆಯಿಂದ 11ನೇ ತರಗತಿ ವರೆಗೆ ಇಲ್ಲಿ ಶಿಕ್ಷಣ ದೊರೆಯುತ್ತಿದೆ, ಸಿ.ಬಿ.ಎಸ್.ಸಿ.ಯಿಂದಲೂ ಅನುಮತಿ ಪಡೆದು ಗುಣಮಟ್ಟದ ಶಿಕ್ಷಣವನ್ನು ಇಲ್ಲಿ ನೀಡಲಾಗುತ್ತಿದೆ ಎಂದೂ ಮುಖ್ಯಮಂತ್ರಿಗಳು ಹೇಳಿದರು. ಸರ್ಕಾರಿ ಶಾಲೆಯ ಎಲ್ಲಾ ಮಕ್ಕಳಿಗೂ ಇಂತಹ ಗುಣಮಟ್ಟದ ಶಿಕ್ಷಣ ಸಿಗಬೇಕು ಎಂದರು.['ಸಿದ್ದರಾಮಯ್ಯ ವಿಶ್ವಾಸದ್ರೋಹಿ, ಅವರಿಗೆ ಕೃತಜ್ಞತೆ ಇಲ್ಲ']

ಪೊಲೀಸ್ ಶಿಕ್ಷಣ ಸಮುಚ್ಛಯಕ್ಕೆ 22.5ಕೋಟಿ ರೂ ಅನುದಾನ : ಸಿಎಂ ಸಿದ್ದರಾಮಯ್ಯ

ಮೈಸೂರಿನಲ್ಲಿ ಪೊಲೀಸ್ ಪಬ್ಲಿಕ್ ಶಾಲೆ ನಿರ್ಮಾಣವಾಗಿರುವಂತೆ ಎಲ್ಲಾ ಜಿಲ್ಲೆಗಳಲ್ಲೂ ಆಗಬೇಕು, ರಾಜ್ಯದ 176 ತಾಲ್ಲೂಕುಗಳಲ್ಲೂ ಒಂದೊಂದು ಶಾಲೆಯಲ್ಲಿ ದತ್ತು ಪಡೆದು ಈ ರೀತಿಯ ಶಿಕ್ಷಣವನ್ನು ಕೊಡಬೇಕು ಎಂದು ಸಿದ್ದರಾಮಯ್ಯ ಅವರು ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮಕ್ಕೆ ಸೂಚಿಸಿದರು.

English summary
The state government has aproved Rs.22.5 crore in the first phase of work to upgrade and renovate the Police Public School.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X