ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಿನ ಆಸ್ಪತ್ರೆಗಳಿಗೆ ಸಿದ್ದರಾಮಯ್ಯ ದಿಢೀರ್ ಭೇಟಿ

|
Google Oneindia Kannada News

ಮೈಸೂರು, ಮೇ 20 : ಮೈಸೂರು ನಗರ ಹಾಗೂ ಸುತ್ತ ಮುತ್ತಲಿನ ಜಿಲ್ಲೆಗಳ ಜನರಿಗೆ ಆರೋಗ್ಯ ಸೇವೆ ಒದಗಿಸುತ್ತಿರುವ ಕೆ.ಆರ್.ಆಸ್ಪತ್ರೆ ಹಾಗೂ ಚೆಲುವಾಂಬ ಆಸ್ಪತ್ರೆಗಳ ಮೂಲಸೌಲಭ್ಯವನ್ನು ಹಂತ ಹಂತವಾಗಿ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರು ಪ್ರವಾಸದಲ್ಲಿರುವ ಸಿದ್ದರಾಮಯ್ಯ ಅವರು ಬುಧವಾರ ಕೆ.ಆರ್.ಆಸ್ಪತ್ರೆಯ ವಿವಿಧ ವಾರ್ಡ್‍, ಚೆಲುವಾಂಬ ಆಸ್ಪತ್ರೆ ಹಾಗೂ ಜಯದೇವ ಹೃದ್ರೋಗ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮೀಣ ಪ್ರದೇಶದ ಬಡವರೇ ಹೆಚ್ಚಾಗಿ ಬರುವ ಈ ಆಸ್ಪತ್ರೆಗಳ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ ಎಂದರು. [ಕಲಾವಿದನ ಕಷ್ಟಕ್ಕೆ ಸ್ಪಂದಿಸಿದ ಸಿದ್ದರಾಮಯ್ಯ]

ಕೆ.ಆರ್. ಆಸ್ಪತ್ರೆಯಲ್ಲಿ ಈಗಿರುವ ಸ್ಪೆಷಲ್ ವಾರ್ಡ್‍ಗಳ ಸ್ಥಳದಲ್ಲಿ 95 ಕೋಟಿ ರೂ. ಅಂದಾಜು ವೆಚ್ಚದಲ್ಲಿ 6 ಅಂತಸ್ತುಗಳ 350 ಹಾಸಿಗೆಗಳ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ಪ್ರಸ್ತಾವನೆ ಸಲ್ಲಿಸುವಂತೆ ವೈದ್ಯಕೀಯ ಶಿಕ್ಷಣ ಇಲಾಖಾ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು. [ಎಂಎ ಪರೀಕ್ಷೆ ಬರೆದ್ರು ಸಚಿವ ಯು.ಟಿ.ಖಾದರ್]

ಜಿಲ್ಲಾ ಉಸ್ತುವಾರಿ ಸಚಿವ ಶ್ರೀನಿವಾಸ್ ಪ್ರಸಾದ್, ಲೋಕೋಪಯೋಗಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಶಾಸಕರಾದ ಎಂ.ಕೆ. ಸೋಮಶೇಖರ್, ವಾಸು, ತನ್ವೀರ್ ಸೇಠ್, ಮೇಯರ್ ಲಿಂಗಪ್ಪ ಮುಂತಾದವರು ಮುಖ್ಯಮಂತ್ರಿಗಳ ಜೊತೆ ಆಸ್ಪತ್ರೆಗೆ ಭೇಟಿ ನೀಡಿದ್ದರು. ಚಿತ್ರಗಳಲ್ಲಿ ನೋಡಿ ಸಿದ್ದರಾಮಯ್ಯ ಆಸ್ಪತ್ರೆ ಭೇಟಿ

200 ಹಾಸಿಗೆಗಳ ಹೊಸ ಕಟ್ಟಡ

200 ಹಾಸಿಗೆಗಳ ಹೊಸ ಕಟ್ಟಡ

ಚೆಲುವಾಂಬ ಆಸ್ಪತ್ರೆಯಲ್ಲಿ ಪ್ರತಿನಿತ್ಯ ಸರಾಸರಿ 50 ಹೆರಿಗೆಗಳು ಆಗುತ್ತಿವೆ. ಇಲ್ಲಿನ ಸೌಲಭ್ಯ ವಿಸ್ತರಿಸಲು 76 ಕೋಟಿ ರೂ. ವೆಚ್ಚದಲ್ಲಿ 200 ಹಾಸಿಗೆಗಳ ಹೊಸ ಕಟ್ಟಡ ನಿರ್ಮಿಸಲಾಗುವುದು. ನವಜಾತ ಶಿಶುಗಳ ಆರೈಕೆಗಾಗಿ ಹೆಚ್ಚುವರಿ ಘಟಕವೊಂದನ್ನು 4 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದರು.

350 ಕೋಟಿ ವೆಚ್ಚದಲ್ಲಿ ಹೊಸ ಆಸ್ಪತ್ರೆ

350 ಕೋಟಿ ವೆಚ್ಚದಲ್ಲಿ ಹೊಸ ಆಸ್ಪತ್ರೆ

ಕೆ.ಆರ್. ಆಸ್ಪತ್ರೆಯಲ್ಲಿ ಈಗಿರುವ ಸ್ಪೆಷಲ್ ವಾರ್ಡ್‍ಗಳ ಸ್ಥಳದಲ್ಲಿ 95 ಕೋಟಿ ರೂ. ಅಂದಾಜು ವೆಚ್ಚದಲ್ಲಿ 6 ಅಂತಸ್ತುಗಳ 350 ಹಾಸಿಗೆಗಳ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ಪ್ರಸ್ತಾವನೆ ಸಲ್ಲಿಸುವಂತೆ ವೈದ್ಯಕೀಯ ಶಿಕ್ಷಣ ಇಲಾಖಾ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಅಪಘಾತ ಚಿಕಿತ್ಸಾ ಕೇಂದ್ರ ಸ್ಥಾಪನೆ

ಅಪಘಾತ ಚಿಕಿತ್ಸಾ ಕೇಂದ್ರ ಸ್ಥಾಪನೆ

ಪಿ.ಕೆ.ಸ್ಯಾನಿಟೋರಿಯಂ ಆಸ್ಪತ್ರೆ ಆವರಣದಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಅಪಘಾತ ಚಿಕಿತ್ಸಾ ಕೇಂದ್ರವೊಂದನ್ನು ನಿರ್ಮಿಸಲಾಗುವುದು. ಕೆ.ಆರ್.ಆಸ್ಪತ್ರೆಗೆ ಮೈಸೂರು ಮತ್ತು ಅಕ್ಕಪಕ್ಕದ ಜಿಲ್ಲೆಗಳ ಜನರೂ ಬರುವುದರಿಂದ ಸೌಲಭ್ಯಗಳನ್ನು ಆದ್ಯತೆ ಮೇಲೆ ಉನ್ನತೀಕರಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಮುಖ್ಯಮಂತ್ರಿ ಭೇಟಿ ಇದೇ ಮೊದಲು

ಮುಖ್ಯಮಂತ್ರಿ ಭೇಟಿ ಇದೇ ಮೊದಲು

ಕೆ.ಆರ್. ಆಸ್ಪತ್ರೆ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿಯೊಬ್ಬರು ಭೇಟಿ ನೀಡುತ್ತಿದ್ದಾರೆ ಎಂದು ಹೇಳಿದ ಸಿದ್ದರಾಮಯ್ಯ ಅವರು, ಆಸ್ಪತ್ರೆಯಲ್ಲಿ ನ್ಯೂನತೆಗಳಿದ್ದರೂ ಇದು ಸಲ್ಲಿಸುತ್ತಿರುವ ಸೇವೆ ಗಣನೀಯವಾಗಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರು ಜೊತೆಗಿದ್ದರು

ಜಿಲ್ಲಾ ಉಸ್ತುವಾರಿ ಸಚಿವರು ಜೊತೆಗಿದ್ದರು

ಜಿಲ್ಲಾ ಉಸ್ತುವಾರಿ ಸಚಿವ ಶ್ರೀನಿವಾಸ್ ಪ್ರಸಾದ್, ಲೋಕೋಪಯೋಗಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಶಾಸಕರಾದ ಎಂ.ಕೆ. ಸೋಮಶೇಖರ್, ವಾಸು, ತನ್ವೀರ್ ಸೇಠ್, ಮೇಯರ್ ಲಿಂಗಪ್ಪ ಮುಂತಾದವರು ಮುಖ್ಯಮಂತ್ರಿಗಳ ಜೊತೆ ಆಸ್ಪತ್ರೆಗೆ ಭೇಟಿ ನೀಡಿದ್ದರು.

English summary
Karnataka Chief Minister Siddaramaiah announced that, government has proposed to construct a 350-bed multi specialty hospital on the premises of the K.R. Hospital in Mysuru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X